ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ
Team Udayavani, Aug 4, 2018, 12:06 PM IST
ಬೆಂಗಳೂರು: ನಗರದ ವಿವಿಧೆಡೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸುಮಾರು ಹತ್ತಕ್ಕೂ ಅಧಿಕ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಇರುವ ರಕ್ಷಣಾ ಇಲಾಖೆಯ ಭೂಮಿಯನ್ನು ಹಸ್ತಾಂತರ ಮಾಡುವ ಸಂಬಂಧ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ.
ರೈಲ್ವೆ ಮೇಲ್ಸೇತುವೆ (ಆರ್‌ಒಬಿ), ಸರ್ವಿಸ್ ರಸ್ತೆ, ಪಾದಚಾರಿ ಮಾರ್ಗ, ಮೆಟ್ರೋ ಎರಡನೇ ಹಂತದ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳಿಗೆ ನಗರದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 16 ಎಕರೆ ಭೂಮಿಯ ಅವಶ್ಯಕತೆ ಇದೆ. ಇದನ್ನು ಹಸ್ತಾಂತರಿಸಿ, ಬದಲಿ ಭೂಮಿಯನ್ನು ಪಡೆಯಲು ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರವು ಶನಿವಾರ ನಗರಕ್ಕೆ ಭೇಟಿ ನೀಡಲಿರುವ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಲು ಉದ್ದೇಶಿಸಿದೆ.
ರಕ್ಷಣಾ ಸಚಿವರ ಭೇಟಿ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಅಲ್ಲಿ ಈ ಸಂಬಂಧ ಚರ್ಚಿಸಲಾಯಿತು. ಬಿಬಿಎಂಪಿಗೆ ಸಂಬಂಧಿಸಿದ ಒಟ್ಟಾರೆ 11 ಕಾಮಗಾರಿಗಳು ರಕ್ಷಣಾ ಇಲಾಖೆಗೆ ಸೇರಿದ ಭೂಮಿಯಲ್ಲಿ ಬರುತ್ತವೆ.
ಈ ಪೈಕಿ 9 ಯೋಜನೆಗಳಿಗೆ 16 ಎಕರೆ ಭೂಮಿಯ ಅಗತ್ಯವಿದೆ. ಇದರ ಮೌಲ್ಯ ಸರಿಸುಮಾರು 328 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನು ಹಸ್ತಾಂತರಿಸಿದರೆ, ಪ್ರತಿಯಾಗಿ ಆನೇಕಲ್ ತಾಲ್ಲೂಕಿನ ಕಮ್ಮನಾಯಕನಹಳ್ಳಿ ಬಳಿ 207.6 ಎಕರೆ ಹಾಗೂ ಹಲಸೂರು ಕೆರೆ ಪಕ್ಕದಲ್ಲಿ 2.2 ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ನೀಡಲಾಗುವುದು. ಇದರ ಮೌಲ್ಯ 488 ಕೋಟಿ ರೂ. ಆಗುತ್ತದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಗಮನಕ್ಕೆ ತಂದರು.
ಲೈಸನ್ಸ್ ಆಧಾರದಲ್ಲಿ ಬೇಡಿಕೆ: ಈಗಾಗಲೇ ಈ ಭೂಮಿ ವಿನಿಮಯಕ್ಕೆ ರಕ್ಷಣಾ ಇಲಾಖೆಯು ಲಿಖೀತವಾಗಿ ಒಪ್ಪಿಗೆ ನೀಡಿದೆ. ಆದರೆ, ಯಾವ ರೂಪದಲ್ಲಿ ಹಸ್ತಾಂತರ ಮಾಡುತ್ತದೆ ಎನ್ನುವುದು ಕಾದುನೋಡಬೇಕು. ಸಾಮಾನ್ಯವಾಗಿ ರೈಲ್ವೆ ಮೇಲ್ಸೇತುವೆ ಮತ್ತು ಎತ್ತರಿಸಿದ ಸೇತುವೆ (ಎರಡು ಯೋಜನೆಗಳು ಇದೇ ಮಾದರಿಯಲ್ಲಿವೆ)ಗಳನ್ನು ಲೈಸನ್ಸ್ ಆಧಾರದಲ್ಲಿ ನೀಡಲಾಗುತ್ತದೆ.
ಇದರಿಂದ ಹೆಚ್ಚು ಅನುಕೂಲ ಆಗುತ್ತದೆ. ಚದರ ಮೀಟರ್‌ಗೆ ವರ್ಷಕ್ಕೆ 1 ರೂ. ಲೈಸನ್ಸ್ ಶುಲ್ಕ ಪಾವತಿಸಬೇಕಾಗುತ್ತದೆ. ಇದಕ್ಕೆ ರಕ್ಷಣಾ ಇಲಾಖೆ ಒಪ್ಪದಿದ್ದರೆ, ನೂರಾರು ಕೋಟಿ ರೂ. ಸರ್ಕಾರಕ್ಕೆ ಹೊರೆ ಆಗಲಿದೆ. ಈ ನಿಟ್ಟಿನಲ್ಲಿ ರಕ್ಷಣಾ ಇಲಾಯ ಮನವೊಲಿಕೆ ನಡೆಸಲಿದೆ ಎನ್ನಲಾಗಿದೆ.
ಮೆಟ್ರೋಗೂ ಬೇಕಿದೆ ಭೂಮಿ: ಇದಲ್ಲದೆ, “ನಮ್ಮ ಮೆಟ್ರೋ’ ಎರಡನೇ ಹಂತದ ಯೋಜನೆ ಅನುಷ್ಠಾನಕ್ಕಾಗಿ ತಾತ್ಕಾಲಿಕವಾಗಿ ಸುಮಾರು 3 ಸಾವಿರ ಚದರ ಮೀಟರ್ ಭೂಮಿ ಬೇಕಾಗುತ್ತದೆ. ಈ ಸಂಬಂಧ ಕೂಡ ಮನವಿ ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಅಧಿಕಾರಿಗಳು ಮಾಹಿತಿ ನೀಡಿದರು.
-11 ಬಿಬಿಎಂಪಿ ಯೋಜನೆಗಳು
-16.52 ಎಕರೆ ಅಗತ್ಯ ಇರುವ ರಕ್ಷಣಾ ಇಲಾಖೆ ಭೂಮಿ
-328 ಕೋಟಿ ರೂ. ಭೂಮಿಯ ಮೌಲ್ಯ
-209 ಎಕರೆ ರಕ್ಷಣಾ ಇಲಾಖೆಗೆ ಸರ್ಕಾರ ಹಸ್ತಾಂತರಿಸಲು ಉದ್ದೇಶಿಸಿರುವ ಭೂಮಿ
-488 ಕೋಟಿ ರೂ. ಭೂಮಿಯ ಮೌಲ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.