ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಸರ್ಕಾರಕ್ಕೆ HDK ಆಗ್ರಹ
Team Udayavani, May 21, 2021, 9:59 AM IST
ಬೆಂಗಳೂರು: ರಾಜ್ಯ ಸರ್ಕಾರ ಕಪ್ಪು ಶಿಲೀಂಧ್ರ ಸೋಂಕನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅವರು, ಬ್ಲ್ಯಾಕ್ ಫಂಗಸ್ (ಮ್ಯೂಕರ್ ಮೈಕೊಸಿಸ್) ಮಾರಕ ಕಾಯಿಲೆಯನ್ನು ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ಅದ್ದರಿಂದ ಕರ್ನಾಟಕ ಸರ್ಕಾರವೂ ಈ ಕುರಿತು ಘೋಷಣೆ ಹೊರಡಿಸಬೇಕೆಂದರು.
ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು ‘1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ’ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ.
ಇದನ್ನೂ ಓದಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.59 ಲಕ್ಷ ಕೋವಿಡ್ ಪ್ರಕರಣ ಪತ್ತೆ, 4,200 ಮಂದಿ ಸಾವು
ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ.
ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ.
ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಬ್ಲ್ಯಾಕ್ ಜತೆಗೆ ವೈಟ್ ಕಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.