ಹಿರಿಯ ಪತ್ರಕರ್ತೆಯರಿಗೆ ಗೌರವ ಸಮರ್ಪಣೆ
Team Udayavani, Jul 7, 2019, 3:08 AM IST
ಬೆಂಗಳೂರು: “ನಾನು ಪತ್ರಿಕೋದ್ಯಮಕ್ಕೆ ಬಂದ ಸಮಯದಲ್ಲಿ ಪುರುಷರು ಅಧಿಕ ಸಂಖ್ಯೆಯಲ್ಲಿದ್ದರು. ಆದರೂ ಹಲವರು ಬೆನ್ನುತಟ್ಟಿ ಪ್ರೋತ್ಸಾಹಿಸಿದರು. ಹೀಗಾಗಿ ಪತ್ರಿಕೋದ್ಯಮದ ಹಲವು ಮಜಲುಗಳನ್ನು ಅರಿಯಲು ಸಹಕಾರಿಯಾಯಿತು. ಈಗಲೂ ಕೂಡ ಆ ದಿನಗಳನ್ನು ನೆನಪಿಸಿಕೊಂಡರೆ ಹಿತಕೊಡುತ್ತದೆ’ ಎಂದು ಹಿರಿಯ ಪತ್ರಕರ್ತೆ ಸೀತಾದೇವಿ ಹೇಳಿದರು.
ಕರ್ನಾಟಕ ಪತ್ರಕರ್ತೆಯರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜತೆಗೂಡಿ, ಶನಿವಾರ ಎನ್‌ಜಿಒ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತೆಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಪತ್ರಿಕೋದ್ಯಮದಲ್ಲಿ ತಾವು ಸಾಗಿಬಂದ ಹಾದಿ ಮೆಲಕು ಹಾಕಿದರು.
“ಈ ಕ್ಷೇತ್ರದಲ್ಲಿ ಏನೋ ಸಾಧಿಸಬೇಕು ಎಂಬ ಕನಸು ನನಗಿರಲಿಲ್ಲ. ಆಕಸ್ಮಿಕವಾಗಿ ಪತ್ರಿಕೋದ್ಯಮ ಪ್ರವೇಶಿಸಿದೆ. ಸಂಪಾದಕರು, ಹಿರಿಯ ಸಹೋದ್ಯೋಗಿಗಳು ನನ್ನ ಮೇಲೆ ನಂಬಿಕೆ ಇಟ್ಟು ನೀಡುತ್ತಿದ್ದ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತಿದ್ದೆ. ಹೀಗಾಗಿ ಹಲವರು ನನ್ನ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅದರಲ್ಲೂ ಕಿರಿಯರಿಗೆ ಪತ್ರಿಕೋದ್ಯಮದ ಪಾಠ ಹೇಳಲು ಅವಕಾಶ ದೊರೆತಿದ್ದು ಖುಷಿ ಕೊಟ್ಟಿದೆ’ ಎಂದರು.
ಅನುಭವ ಕಥನ ದಾಖಲು: ಪತ್ರಕರ್ತೆ ಡಾ.ಪೂರ್ಣಿಮಾ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರಾé ನಂತರದಲ್ಲಿ ಕನ್ನಡ ಪತ್ರಿಕೋದ್ಯಮದಲ್ಲಿ ಮಹಿಳೆಯರು ಸಮರ್ಥವಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಅವರು ಹಲವು ಅನುಪಮ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಅದು ಮುಂದಿನ ಪೀಳಿಗೆಗೂ ತಿಳಿಯಲಿ ಎಂಬ ಉದ್ದೇಶದಿಂದ ಕರ್ನಾಟಕ ಪತ್ರಕರ್ತೆಯರ ಸಂಘದ ವತಿಯಿಂದ ಹಿರಿಯ ಪತ್ರಕರ್ತೆಯರ ಪತ್ರಿಕೋದ್ಯಮದ ಅನುಭವದ ಕಥನಗಳನ್ನು ದಾಖಲಿಸುವ ಕೆಲಸ ನಡೆಯಲಿದೆ ಎಂದು ಹೇಳಿದರು.
ಸುದ್ದಿ ಮನೆಗಳಲ್ಲಿ ಮಹಿಳೆಯರಿಗೆ ಅವಕಾಶವೇ ಇಲ್ಲದ ಸಂದರ್ಭದಲ್ಲೂ ನಮ್ಮ ಹಲವಾರು ಹೊಇರಿಯ ಪತ್ರಕರ್ತೆಯರು ಕೆಲಸ ಗಿಟ್ಟಿಸಿಕೊಂಡು, ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವುದು ಸಂತಸ ಪಡುವ ವಿಚಾರವಾಗಿದೆ ಎಂದು ನುಡಿದರು.
ಪತ್ರಕರ್ತೆ ಕೆ.ಎಚ್.ಸಾವಿತ್ರಿ, ವಿಧಾನ ಮಂಡಲದ ಅಧಿವೇಶನದ ಕಾರ್ಯ ಕಲಾಪಗಳ ಬಗ್ಗೆ ವರದಿ ಮಾಡಿರುವುದು, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಮಹಿಳಾ ಪುರವಣಿಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದು ಜೀವನದಲ್ಲಿ ಸದಾ ನೆನಪಲ್ಲಿ ಉಳಿಯುವ ಕ್ಷಣಗಳಾಗಿವೆ ಎಂದು ಸ್ಮರಿಸಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್‌ಆರ್‌ಎಲ್‌ಎಂ) ನಿರ್ದೇಶಕಿ ಡಾ.ಬಿ.ಆರ್.ಮಮತಾ ಮಾತನಾಡಿ, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯು “ಸಂಜೀವಿನಿ ಯೋಜನೆ’ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದ್ದು, ಸ್ತ್ರೀಯರನ್ನು ಸ್ವಾವಲಂಬಿಗಳಾಗಿ ರೂಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತೆ ಕುಶಲ ಡಿಮೆಲ್ಲೊ, ಸುಶೀಲಾ ಸುಬ್ರಮಣ್ಯ, ನಾಗಮಣಿ ಎಸ್. ರಾವ್, ಡಾ.ವಿಜಯಮ್ಮ, ಲೀಲಾವತಿ ಹಾಸನ ಸೇರಿ ಹಲವರನ್ನು ಸತ್ಕರಿಸಲಾಯಿತು. ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಶಾಂತಲಾ, ಪ್ರಧಾನ ಕಾರ್ಯದರ್ಶಿ ಮಾಲತಿ ಭಟ್, ಕಾರ್ಯದರ್ಶಿ ಭಾರತಿ ಹೆಗಡೆ ಇದ್ದರು.
ಸಾಮಾಜಿ ಕಳಕಳಿಯ ಮಿಡಿತವಿರಬೇಕು: ಹಳೆಯ ತಲೆಮಾರಿನ ಪತ್ರಿಕೋದ್ಯಮದಲ್ಲಿದ್ದ ಸಾಮಾಜಿಕ ಕಳಕಳಿ ಬಗೆಗಿನ ಮಿಡಿತ, ಹೊಸ ತಲೆಮಾರಿನ ಪತ್ರಿಕೋದ್ಯಮದಲ್ಲಿ ಕಣ್ಮರೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ಹೊಸ, ಹೊಸ ಸವಾಲುಗಳನ್ನು ಮತ್ತು ಜವಾಬ್ದಾರಿಗಳನ್ನು ಸ್ವೀಕರಿಸುವ ಜತೆಗೆ ಹಳೇ ತಲೆಮಾರಿನ ಪತ್ರಿಕೋದ್ಯಮದಲ್ಲಿದ್ದ ಸಾಮಾಜಿಕ ಕಳಕಳಿ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಕಿರಿಯ ಪತ್ರಕರ್ತರಲ್ಲಿ ಹಿರಿಯ ಪತ್ರಕರ್ತ ಈಶ್ವರ ದೈತೋಟ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.