ದೀಪಿಕಾ ಮನೆಯಲ್ಲಿ ಮದುವೆ ಸಂಭ್ರಮ
Team Udayavani, Nov 3, 2018, 11:12 AM IST
ಬೆಂಗಳೂರು: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಮದುವೆ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ದೀಪಿಕಾ ಮತ್ತು ಕುಟುಂಬದವರು ಇಂದು ತಮ್ಮ ಬೆಂಗಳೂರಿನ ಮನೆಯಲ್ಲಿ ಸಂಪ್ರದಾಯದಂತೆ ನಂದಿ ಪೂಜೆ ಮಾಡುವ ಮೂಲಕ ವಿವಾಹ ಕಾರ್ಯವನ್ನು ಆರಂಭಿಸಿದರು.
ಸಭ್ಯಸಾಚಿ ಮುಖರ್ಜಿ ವಿನ್ಯಾಸ ಮಾಡಿದ ವಿಶೇಷ ವಿನ್ಯಾಸದ ಉಡುಪನ್ನು ಧರಿಸಿ ಪೂಜೆಯಲ್ಲಿ ಭಾಗಿಯಾದ ದೀಪಿಕಾ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪೂಜೆ ಮಾಡುತ್ತಿರುವ ಫೋಟೋ ಹಾಗೂ ಕುಟುಂಬದವರ ಜೊತೆಯಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ದೀಪಿಕಾ ಹಾಗೂ ರಣವೀರ್ ಸಿಂಗ್ ಮದುವೆಯ 10 ದಿನದ ಮೊದಲು ದೀಪಿಕಾ ಅವರ ತಾಯಿ ಉಜ್ಜಲಾ ಪಡುಕೋಣೆ ಇಬ್ಬರಿಗಾಗಿ ನಂದಿ ಪೂಜಾ ಕಾರ್ಯವನ್ನು ಹಮ್ಮಿಕೊಂಡಿದ್ದಾರೆ ಎಂದು ವರದಿಯಾಗಿದೆ.
ರಣವೀರ್ ಹಾಗೂ ದೀಪಿಕಾ ಈ ತಿಂಗಳು 14 ಹಾಗೂ 15ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮೂಲಗಳ ಪ್ರಕಾರ ಇಟಲಿಯ ಕೋಮೋ ಸಿಟಿಯಲ್ಲಿ ಈ ಮದುವೆ ನಡೆಯಲಿದೆ. ನಂತರ ಬೆಂಗಳೂರು ಹಾಗೂ ಮುಂಬೈನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಸಲು ಕುಟುಂಬ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.