ಗ್ರಾ.ಪಂ ಅಧ್ಯಕ್ಷೆ ವಿರುದ್ಧದ ಅವಿಶ್ವಾಸಕ್ಕೆ ಸೋಲು
Team Udayavani, Dec 29, 2018, 6:25 AM IST
ಮಹದೇವಪುರ: ಅವಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ದೇವರಾಜ್ ವಿರುದ್ಧ ಶುಕ್ರವಾರ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಕೋರಂ ಕೊರತೆಯಿಂದ ಸೋಲುಂಟಾಗಿದೆ.
ಬೆಂಗಳೂರು ಪೂರ್ವ ತಾಲೂಕಿನ ಅವಲಹಳ್ಳಿ ಗ್ರಾ.ಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳಿಗೆ ಗ್ರಾ.ಪಂ ಸದಸ್ಯರು ಪತ್ರ ಬರೆದಿದ್ದರು. ಅದರಂತೆ ಶುಕ್ರವಾರ ಪಂಚಾಯಿತಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. 33 ಸದಸ್ಯ ಬಲದ ಗ್ರಾ.ಪಂ.ನಲ್ಲಿ ಅವಿಶ್ವಾಸಕ್ಕೆ 17 ಸದಸ್ಯರ ಬೆಂಬಲ ಅಗತ್ಯವಿತ್ತು.
ಆದರೆ ಸಭೆಗೆ 15 ಸದಸ್ಯರು ಮಾತ್ರ ಹಾಜರಾದ ಕಾರಣ ಕೋರಂ ಕೊರತೆ ಉಂಟಾಯಿತು. ಹೀಗಾಗಿ ಜ್ಯೋತಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉಪವಿಭಾಗಧಿಕಾರಿ ನಾಗರಾಜ್ ತಿಳಿಸಿದ್ದಾರೆ. ಸಭೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ತಹಸೀಲ್ದಾರ್ ರಾಮಲಕ್ಷ್ಮಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.