ನೈತಿಕ ಪೊಲೀಸ್‌ಗಿರಿಗೂ ಬಿಜೆಪಿಗೂ ಸಂಬಂಧವಿಲ್ಲ
Team Udayavani, Apr 29, 2018, 7:20 AM IST
ಬೆಂಗಳೂರು: ಬಿಜೆಪಿ, ಆರ್‌ಎಸ್‌ಎಸ್ ನೈತಿಕ ಪೊಲೀಸ್‌ಗಿರಿ ಮಾಡುತ್ತಿಲ್ಲ. ಪಕ್ಷ ಹಾಗೂ ಆರ್‌ಎಸ್‌ಎಸ್‌ನ ಹೆಸರಿಗೆ ಕಳಂಕ ತರಲು ಈ ರೀತಿಯ ಆರೋಪ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಗರದಲ್ಲಿ ಶನಿವಾರ “ಕರುನಾಡ ಮಹಿಳಾ-ಜಾಗೃತಿ ಸಂವಾದ’ದಲ್ಲಿ ಭಾಗವಹಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸಂಘಟನೆಗಳನ್ನು “ಹಿಂದು’ ಎಂಬುದಾಗಿ ಪ್ರತ್ಯೇಕವಾಗಿ ಗುರುತಿಸುವವರಿಗೆ ಸಮಾಜವನ್ನು ಒಡೆಯುವ ಉದ್ದೇಶವಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗಲೇ ನೈತಿಕ ಪೊಲೀಸ್‌ಗಿರಿ ನಡೆದಿತ್ತು. ಆಗ ಬಿಜೆಪಿ ಸರಕಾರವೇ ಅದರ ವಿರುದ್ಧ ಕಠಿಣ ಕ್ರಮ ಕೈಗೊಂಡಿತ್ತು. ಇಂತಹ ಚಟುವಟಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಸಂಸತ್ತಿನಲ್ಲಿ “ಕಾಸ್ಟಿಂಗ್ ಕೌಚ್’ ನಡೆಯುತ್ತಿದೆ ಎಂಬುದಾಗಿ ಕಾಂಗ್ರೆಸ್‌ನ ರೇಣುಕಾ ಚೌಧರಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಅವರ ಹೇಳಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.ಚುನಾವಣೆಗಳಲ್ಲಿ ಸ್ಪರ್ಧಿಸಲು ಮಹಿಳೆಯರಿಗೆ ಟಿಕೆಟ್ ನೀಡದಿರುವುದು ಲಿಂಗ ತಾರತಮ್ಯವಲ್ಲ ಎಂದು ಅವರು ಹೇಳಿದರು.
ಚರ್ಚೆ ನಡೆದಿದೆ
ಐದಾರು ವರ್ಷ ಯೋಧರಿಗೆ ಸೇವೆ ಸಲ್ಲಿಸಿ ನಿವೃತ್ತರಾದ ನರ್ಸ್‌ಗಳನ್ನು ಮಾಜಿಗಳೆಂದು ಪರಿಗಣಿಸುತ್ತಿಲ್ಲ. ಈ ಸಂಬಂಧ ಬದಲಾವಣೆ ತರಲು ಚರ್ಚೆ ನಡೆದಿದೆ. ನಿವೃತ್ತ ನರ್ಸ್‌ಗಳನ್ನು ಮಾಜಿಗಳೆಂದು ಪರಿಗಣಿಸಿ ಸೌಲಭ್ಯ ನೀಡುವುದು, ಹಾಲಿ ಸಿಬಂದಿಯನ್ನು ಖಾಯಂಗೊಳಿಸುವುದು ಸಹಿತ ಇತರ ಬೇಡಿಕೆಗಳ ಪರ ನಾನಿದ್ದೇನೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.