ವಿವಾದ ಸುಖಾಂತ್ಯ: ಗೋವಾಕ್ಕೆ ರಾಜ್ಯದ ಮೀನು ಪೂರೈಕೆ ಶುರು


Team Udayavani, Dec 8, 2018, 6:05 AM IST

fish-market.jpg

ಪಣಜಿ: ಕರ್ನಾಟಕದಿಂದ ಗೋವಾಕ್ಕೆ ಡಿ.6ರಿಂದ ಮೀನು ಪೂರೈಕೆ ಪುನಾರಂಭಗೊಂಡಿದೆ. ಕರ್ನಾಟಕದಿಂದ 9 ಟ್ರಕ್‌ ಮೀನುಗಳು ಗೋವಾ ಮಾರುಕಟ್ಟೆಗೆ ಬಂದಿಳಿದಿವೆ. ಈ ಎಲ್ಲ ಟ್ರಕ್‌ಗಳಿಗೂ ಎಫ್‌ಡಿಎ ಪರವಾನಗಿ ಪಡೆದುಕೊಂಡು ಇನ್ಸುಲೇಟೆಡ್‌ ವಾಹನಗಳ ಮೂಲಕ ಕಳುಹಿಸಲಾಗಿದೆ. ಈ ಮೂಲಕ ಕಳೆದ ಹಲವು ತಿಂಗಳಿಂದ ಉಂಟಾಗಿದ್ದ ಸಮಸ್ಯೆಗೆ ಕೊಂಚ ಪರಿಹಾರ ಸಿಕ್ಕಂತಾಗಿದೆ.

ಈ ಕುರಿತು ಗೋವಾ ಆರೋಗ್ಯ ಮಂತ್ರಿ ವಿಶ್ವಜಿತ್‌ ರಾಣೆ ಮಾತನಾಡಿ, ಗೋವಾ ಸರ್ಕಾರದ ಎಫ್‌ಡಿಎ ಕಾಯ್ದೆಯಡಿ ಯಾವ ಸೂಚನೆ ಜಾರಿಗೊಳಿಸಲಾಗಿತ್ತೋ ಆ ಎಲ್ಲ ಮೀನು ಪೂರೈಸುವ ವಾಹನಗಳಿಗೆ ಗೋವಾಕ್ಕೆ ಪ್ರವೇಶಾವಕಾಶ ಲಭಿಸಲಿದೆ. ಕರ್ನಾಟಕದಿಂದ ಗೋವಾಕ್ಕೆ ಮೀನು ತುಂಬಿಕೊಂಡು ಬರುತ್ತಿದ್ದ ವಾಹನಗಳನ್ನು ಗಡಿ ಭಾಗದ‌ ಆರ್‌ಟಿಒ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆದರೆ ಅವರಿಗೆ ಆಕ್ಷೇಪಾರ್ಹ ಯಾವುದೇ ಸಂಗತಿಗಳು ಕಂಡು ಬಂದಿಲ್ಲ ಎಂದರು.

ಕಳೆದ ಅನೇಕ ದಿನಗಳಿಂದ ಕರ್ನಾಟಕ, ಮಹಾರಾಷ್ಟ್ರ ಹಾಗೂ ಇತರ ಭಾಗಗಳಿಂದ ಗೋವಾಕ್ಕೆ ಮೀನು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಗೋವಾದಿಂದಲೂ ಹೊರ ರಾಜ್ಯಕ್ಕೆ ಮೀನು ಪೂರೈಕೆ ಸ್ಥಗಿತಗೊಂಡಿತ್ತು. ಕರ್ನಾಟಕದಿಂದ ಪ್ರತಿದಿನ 80ರಿಂದ 90 ಟ್ರಕ್‌ ಮೀನು ಗೋವಾಕ್ಕೆ ಬರುತ್ತಿತ್ತು. ಆದರೆ ಗೋವಾ ಸರ್ಕಾರದ ಕೆಲ ನಿರ್ಬಂಧದಿಂದಾಗಿ ಗುರುವಾರ 9 ಟ್ರಕ್‌ ಮೀನುಗಳು ಗೋವಾ ಪ್ರವೇಶಿಸಲು ಸಾಧ್ಯವಾಗಿದೆ. ಬರುವ ಸೋಮವಾರ ಗೋವಾ ಎಫ್‌ಡಿಎ ಬೈಠಕ್‌ ನಡೆಯಲಿದ್ದು ಅದರಲ್ಲಿ ಸಿಂಧದುರ್ಗ ಹಾಗೂ ಕಾರವಾರದ ಮೀನುಗಳಿಗೆ ಸಂಬಂಧಿ ಸಿದಂತೆ ಕೆಲ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ನ್ಯಾಯಾಲಯದ ಆದೇಶ: ಈತನ್ಮಧ್ಯೆ ಫಾರ್ಮೊಲಿನ್‌ ಪ್ರಕರಣಕ್ಕೆ ಸಂಬಂಧಿ ಸಿದಂತೆ ಯಾವುದಾದರೊಂದು ವಿಶ್ವವಿದ್ಯಾಲಯದ ಸಂಶೋಧಕರ ಸಹಕಾರ ಪಡೆಯುವಂತೆ ಮುಂಬೈ ಹೈಕೋರ್ಟ್‌ನ ಗೋವಾ ಖಂಡ ಪೀಠವು ಗೋವಾ ಸರ್ಕಾರಕ್ಕೆ ಸೂಚಿಸಿದೆ. ಈ ಪ್ರಕರಣದ ಎಲ್ಲ ಅರ್ಜಿಗಳನ್ನು ಹಾಗೂ ಸರ್ಕಾರಿ ಏಜೆನ್ಸಿಗಳಿಂದ ಸಲ್ಲಿಸಲಾಗಿದ್ದ ಕಾಗದ ಪತ್ರಗಳನ್ನು ವಿಶ್ವವಿದ್ಯಾಲಯಕ್ಕೆ ಒಪ್ಪಿಸಲಾಗುವುದು ಎಂದು ಖಂಡಪೀಠವು ಸ್ಪಷ್ಟಪಡಿಸಿದೆ.

ಮೀನುಗಳಲ್ಲಿ ನೈಸರ್ಗಿಕವಾಗಿ ಎಷ್ಟು ಪ್ರಮಾಣದಲ್ಲಿ ಫಾರ್ಮೊಲಿನ್‌ ಅಂಶವಿರುತ್ತದೆ ಹಾಗೂ ಅದರ ಪರಿಣಾಮಗಳ ಕುರಿತಂತೆ ಎಲ್ಲ ಮಾಹಿತಿಗಳನ್ನೂ ವಿಶ್ವವಿದ್ಯಾಲಯದ ಸಂಶೋಧಕರಿಂದ ಖಚಿತಪಡಿಸಿಕೊಳ್ಳಬೇಕು. ಮಹಾರಾಷ್ಟ್ರದ ವಿಶ್ವವಿದ್ಯಾಲಯದ ಬಳಿ ಸಹಾಯ ಪಡೆಯಬಹುದಾಗಿದೆ ಎಂದು ಮುಂಬೈ ಹೈಕೋರ್ಟ್‌ನ ಗೋವಾ ಖಂಡಪೀಠದ ನ್ಯಾ| ಪೃಥ್ವಿರಾಜ್‌ ಚೌಹಾಣ್‌ ಹಾಗೂ ಆರ್‌.ಎಂ ಬೋರ್ಡೆ ಗೋವಾ ಸರ್ಕಾರಕ್ಕೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.