ಸರ್ಕಾರದಲ್ಲಿ ಕಾಮಗಾರಿ ಹಣ ಬಿಡುಗಡೆ ವಿಳಂಬ
Team Udayavani, Oct 6, 2018, 6:10 AM IST
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರ ಬಾಕಿ ಬಿಡುಗಡೆಯಾಗುತ್ತಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಲ ಸಂಪನ್ಮೂಲ ಇಲಾಖೆ ಸೇರಿ ಪ್ರಮುಖ ಇಲಾಖೆಗಳಲ್ಲಿ ಮಾಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 10 ಸಾವಿರ ಕೋಟಿ ರೂಪಾಯಿ ಬಾಕಿ ಉಳಿದಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹೊಸ ಸರ್ಕಾರ ಬಂದ ನಂತರ ಗುತ್ತಿಗೆದಾರರ ಬಿಲ್‌ಗಳನ್ನು ಪಾವತಿಸಿಲ್ಲ. ಲೋಕೋಪಯೋಗಿ ಇಲಾಖೆಯೊಂದರಲ್ಲಿಯೇ ಸುಮಾರು 3,225 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೂ ಹಣ ಬಿಡುಗಡೆಯಾಗದೇ ಆರಂಭವಾಗಿರುವ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಲ ಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಗಳಲ್ಲೂ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆಯಾಗಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೂ 3,250 ಕೋಟಿ ರೂ. ಬಾಕಿಯಿದೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಕುಡಿಯುವ ನೀರಿನ ಯೋಜನೆ, ಕೆರೆ ದುರಸ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಲಾಗಿದೆ.
ಮಾರ್ಚ್‌ನಲ್ಲಿ ಹಣಕಾಸು ವರ್ಷದ ಅಂತ್ಯದಲ್ಲಿ ಕೆಲವು ಯೋಜನೆಗಳಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗಿದ್ದು, ಉಳಿದಂತೆ ಹಣದ ಕೊರತೆಯಿದೆ ಎಂಬ ಸಬೂಬು ಗುತ್ತಿಗೆದಾರರಿಗೆ ಹೇಳಲಾಗುತ್ತಿದೆ.
ಟೆಂಡರ್ ಭಾಗ್ಯ: ಈ ಮಧ್ಯೆ, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಪ್ಪಿಗೆ ಪಡೆದ ಯೋಜನೆಗಳಿಗೆ ಈಗ ಟೆಂಡರ್ ಭಾಗ್ಯ ದೊರೆತಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುಂಚೆ ತರಾತುರಿಯಲ್ಲಿ ಘೋಷಿಸಿದ್ದ ಯೋಜನೆಗಳ ಆರಂಭಕ್ಕೂ ಮುಂಚೆಯೇ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಂತಹ ಯೋಜನೆಗಳನ್ನು ಈಗ ಕೈಗೆತ್ತಿಕೊಳ್ಳಲಾಗುತ್ತಿದೆ. ಆದರೆ, ಈಗಾಗಲೇ ಯೋಜನೆಗಳು ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಿರುವುದರಿಂದ ಗುತ್ತಿಗೆದಾರರು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ತಿಳಿದುಬಂದಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಬಿಬಿಎಂಪಿಯಲ್ಲಿಯೂ ಸುಮಾರು 1,200 ಕೋಟಿ ರೂ. ಬಾಕಿಯಿದೆ. ವಾರ್ಡ್ ವಾರು 5 ಲಕ್ಷದಿಂದ 2 ಕೋಟಿವರೆಗೂ ಕೈಗೊಂಡಿರುವ ಕಾಮಗಾರಿಗಳ ಬಿಲ್‌ಗಳನ್ನು ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತಿದೆ. ಆದರೆ, ದೊಡ್ಡ ಯೋಜನೆಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ ಎಂದು ಹೇಳಲಾಗಿದೆ.
ಮಾರ್ಚ್ ನಂತರ ಇದುವರೆಗೂ ಯಾವುದೇ ಇಲಾಖೆಯಲ್ಲಿ ಕಾಮಗಾರಿಗಳಿಗೆ ಪೇಮೆಂಟ್ ಆಗುತ್ತಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಶೀಘ್ರವೇ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಸರ್ಕಾರದ ಸಭೆಯಲ್ಲಿ ಏನಾಗುತ್ತದೋ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ.
– ಜಿ.ಎಂ.ರವೀಂದ್ರ, ಪ್ರಧಾನ ಕಾರ್ಯದರ್ಶಿ. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ ಅಸೋಸಿಯೇಷನ್
ಹಿರಿತನದ ಆಧಾರದಲ್ಲಿ ಗುತ್ತಿಗೆದಾರರ ಬಿಲ್‌ಗಳನ್ನು ಪಾವತಿಸಲಾಗುತ್ತದೆ. ಸರ್ಕಾರದಿಂದ ಹಣ ಬಂದ ಹಾಗೆ ಅವರ ಬಿಲ್‌ಗಳನ್ನು ಬಿಡುಗಡೆ ಮಾಡುತ್ತೇವೆ. ಯಾವುದಾದರೂ ಬಿಲ್‌ಗಳು ಬಾಕಿ ಉಳಿದಿದ್ದರೆ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.
– ರಜನೀಶ್ ಗೋಯಲ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ.
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.