ಬಿಜೆಪಿ ರಾಷ್ಟ್ರೀಯ ನಾಯಕರ ನಿಯೋಜನೆ ಶೀಘ್ರ
Team Udayavani, Nov 16, 2018, 6:05 AM IST
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ನಾಯಕರನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಿಗೆ ಚುನಾವಣೆಗೆ ಸಜ್ಜುಗೊಳಿಸಲು ರಾಷ್ಟ್ರೀಯ ನಾಯಕರೊಬ್ಬರನ್ನು ಡಿಸೆಂಬರ್‌ನಲ್ಲಿ ರಾಜ್ಯಕ್ಕೆ ನಿಯೋಜಿಸಲು ವರಿಷ್ಠರ ಮಟ್ಟದಲ್ಲಿ ಚಿಂತನೆ ನಡೆಸಿದೆ.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ. ರಾಷ್ಟ್ರ ಮಟ್ಟದಿಂದ ನಿಯೋಜನೆಯಾಗುವ ರಾಷ್ಟ್ರೀಯ ನಾಯಕರ ಉಸ್ತುವಾರಿಯಲ್ಲೇ ಚುನಾವಣೆ ನಡೆಸಲು ವರಿಷ್ಠರು ಚಿಂತಿಸಿದ್ದಾರೆ. ಜತೆಗೆ ರಾಜ್ಯ ಬಿಜೆಪಿಯಲ್ಲಿ ಹಾಲಿ ಪ್ರಮುಖ ಜವಾಬ್ದಾರಿ ಹೊತ್ತವರ ಬದಲಾವಣೆಗಿಂತ ಪರ್ಯಾಯವಾಗಿ ಇನ್ನಷ್ಟು ಮಂದಿಗೆ ಜವಾಬ್ದಾರಿ ಹಂಚಿಕೆ ಮಾಡುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಹಾಗೂ ನಂತರ ಸೃಷ್ಟಿಯಾದ ರಾಜಕೀಯ ಸನ್ನಿವೇಶವನ್ನು ರಾಜ್ಯ ಬಿಜೆಪಿ ನಿರ್ವಹಿಸಿದ ಬಗೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಇತ್ತೀಚೆಗೆ ಎದುರಾದ ಉಪಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತದಾನಕ್ಕೂ ಮೊದಲೇ ಸ್ಪರ್ಧೆಯಿಂದ ನಿವೃತ್ತಿ ಪಡೆದಿದ್ದು, ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತಿರುವುದು ರಾಷ್ಟ್ರೀಯ ನಾಯಕರು ಕಂಗೆಡುವಂತೆ ಮಾಡಿದೆ.
ಪಕ್ಷದ ರಾಜ್ಯ ನಾಯಕರಲ್ಲಿ ಒಮ್ಮತದ ಕೊರತೆ, ಏಕಪಕ್ಷೀಯ ನಿರ್ಧಾರ, ಬದಲಾದ ಪರಿಸ್ಥಿತಿಗೆ ತಕ್ಕಂತೆ ಕಾರ್ಯತಂತ್ರ ರೂಪಿಸುವಲ್ಲಿನ ಲೋಪಗಳು, ಹಿನ್ನಡೆ, ಸಮನ್ವಯದ ಕೊರತೆ ಪಕ್ಷದಲ್ಲಿ ಸಂಘಟನೆ ಕೊರತೆಯನ್ನು ಎತ್ತಿ ತೋರಿಸುತ್ತಿದೆ. ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರ ಅಕಾಲಿಕ ನಿಧನ ಕೂಡ ಸಂಘಟನೆ ದೃಷ್ಟಿಯಿಂದ ಹಿರಿಯ ನಾಯಕರಿಗೆ ಆತಂಕ ಮೂಡಿಸಿದೆ. ಈ ಎಲ್ಲ ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷ ಬಲವರ್ಧನೆಗಾಗಿ ಕೆಲ ಬದಲಾವಣೆಗೆ ವರಿಷ್ಠರು ಮನಸ್ಸು ಮಾಡಿದಂತಿದೆ.
ರಾಷ್ಟ್ರೀಯ ನಾಯಕರ ನಿಯೋಜನೆ ಸಾಧ್ಯತೆ
ರಾಜ್ಯ ಬಿಜೆಪಿಯಲ್ಲಿ ನಾಯಕರ ಬಣ ರಾಜಕೀಯವೇ ಹೆಚ್ಚು ತಲೆನೋವಾಗಿ ಪರಿಣಮಿಸಿದೆ. ಆಯ್ದ ನಾಯಕರ ನಡುವೆ ಇತರೆ ಪದಾಧಿಕಾರಿಗಳು, ಪ್ರಭಾವಿ ನಾಯಕರು ಹಂಚಿ ಹೋಗಿದ್ದು, ಅವರ ನಡುವಿನ ಅನಾರೋಗ್ಯಕರ ಸ್ಪರ್ಧೆಯಿಂದಲೇ ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗುತ್ತಿವೆ ಎಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಯಾವುದೇ ಬಣದ ನಾಯಕರೊಂದಿಗೆ ನಂಟು ಹೊಂದಿರದ ಸಂಘಟನೆಯಲ್ಲಿ ಸಕ್ರಿಯರೆನಿಸಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೇಣಿಯ ನಾಯಕರೊಬ್ಬರನ್ನು ರಾಜ್ಯಕ್ಕೆ ನಿಯೋಜಿಸಲು ಚಿಂತಿಸಿದ್ದಾರೆ ಎಂದು ರಾಜ್ಯದ ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ನಾಯಕರ ನಡುವಿನ ಭಿನ್ನಾಭಿಪ್ರಾಯ ನಿವಾರಿಸುವುದು. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟಿತವಾಗಿ ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಅವರು ಕಾರ್ಯ ನಿರ್ವಹಿಸಲಿದ್ದಾರೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯನ್ನು ಅವರ ಉಸ್ತುವಾರಿಯಲ್ಲೇ ನಡೆಸುವ ಮೂಲಕ ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಂತೆ ಕ್ರಮ ವಹಿಸಲು ವರಿಷ್ಠರು ನಿರ್ಧರಿಸಿದ್ದಾರೆ. ಹಾಗಾಗಿ ಅನ್ಯ ರಾಜ್ಯಗಳಿಗಿಂತ ಮುಂಚಿತವಾಗಿ ಕರ್ನಾಟಕಕ್ಕೆ ಉಸ್ತುವಾರಿಯೊಬ್ಬರನ್ನು ನಿಯೋಜಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಪರ್ಯಾಯ ನಾಯಕರಿಗೆ ಜವಾಬ್ದಾರಿ
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ ರಾಜ್ಯ ಬಿಜೆಪಿಯಲ್ಲಿನ ಪ್ರಭಾವಿ ನಾಯಕರು, ಪ್ರಮುಖ ಜವಾಬ್ದಾರಿಗಳನ್ನು ಹೊತ್ತವರನ್ನು ಬದಲಾವಣೆ ಮಾಡಿದರೆ ಪಕ್ಷ ಸಂಘಟನೆ ಮೇಲೆ ವ್ಯತಿರಿಕ್ತ ಬೆಳವಣಿಗೆಗಳಾಗಿ ಚುನಾವಣೆ ಮೇಲೆ ಪರಿಣಾಮ ಬೀರಿದರೂ ಆಶ್ಚರ್ಯವಿಲ್ಲ. ಆ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಬದಲಾವಣೆಗೆ ವರಿಷ್ಠರು ಆಸಕ್ತಿ ತೋರಿದಂತಿಲ್ಲ. ಬದಲಿಗೆ ಪರ್ಯಾಯ ನಾಯಕರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಪಕ್ಷ ಸಂಘಟನೆಗೆ ನಿಯೋಜಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಆಯ್ದ ಜವಾಬ್ದಾರಿ ಹೊತ್ತವರ ಜತೆಗೆ ಹೊಸಬರಿಗೂ ಜವಾಬ್ದಾರಿಯನ್ನು ಹಂಚಿಕೆ ಮಾಡುವುದರಿಂದ ಇಬ್ಬರ ನಡುವೆ ಆರೋಗ್ಯಕರ ಪೈಪೋಟಿ ಸೃಷ್ಟಿಯಾಗಲಿದೆ. ಜತೆಗೆ ಸಂಘಟನೆ ದೃಷ್ಟಿಯಿಂದಲೂ ಏಕಕಾಲಕ್ಕೆ ಹೆಚ್ಚು ಜನರನ್ನು ತಲುಪಲು ಸಾಧ್ಯವಾಗಲಿದೆ. ಅಲ್ಲದೇ ಸಾಮರ್ಥಯವಿದ್ದೂ ಜವಾಬ್ದಾರಿ ಇಲ್ಲವೆಂಬ ಕಾರಣಕ್ಕೆ ಹೆಚ್ಚು ಸಕ್ರಿಯರಾಗಿಲ್ಲದ ನಾಯಕರ ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯವಿದೆ ಎಂಬುದು ವರಿಷ್ಠರ ಲೆಕ್ಕಾಚಾರ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.