ಲಿಂಗಾಯತ ಹೋರಾಟದಲ್ಲಿ ಇದೀಗ “ದೆಹಲಿ’ ಬಿರುಕು


Team Udayavani, Nov 8, 2018, 6:00 AM IST

mate-mahadevi-0808.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಈಗ ಲೋಕಸಭೆ ಚುನಾವಣೆ ಹತ್ತಿರ ಇರುವಾಗ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಕಂಡುಬರುತ್ತಿದೆ. ಆದರೆ, ಕಳೆದ ಬಾರಿ ಹೋರಾಟದ ಮುಂಚೂಣಿಯಲ್ಲಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಅಂತರ ಕಾಯ್ದುಕೊಂಡಿರುವುದು ಕುತೂಹಲ ಮೂಡಿಸಿದೆ.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮಾತೆ ಮಹಾದೇವಿ ನೇತೃತ್ವದಲ್ಲಿ ದೆಹಲಿಯಲ್ಲಿ ಲಿಂಗಾಯತ ಮಹಾರ್ಯಾಲಿ ನಡೆಸಲು ಸಿದ್ಧತೆ ನಡೆದಿದೆ. ಆದರೆ, ಎಂ.ಬಿ. ಪಾಟೀಲ್‌ ಈ ಹೋರಾಟದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ಸಚಿವಗಿರಿ ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಇದು ಮುಳ್ಳಾಗಬಹುದು ಮತ್ತು ಕಳೆದ ಬಾರಿ ಚುನಾವಣೆಯಲ್ಲಿ ಸರ್ಕಾರದ ಪತನದ ಕಾರಣಗಳಲ್ಲಿ ಈ ವಿಷಯವೂ ಒಂದಾಗಿದ್ದು, ವೈಯಕ್ತಿಕ ರಾಜಕೀಯ ಬೆಳವಣಿಗೆಗೂ ಇದು ಧಕ್ಕೆ ತಂದೊಡ್ಡುವ ಸಾಧ್ಯತೆಯನ್ನು ಅವರು ಮನಗಂಡಿರುವುದು ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದೆ.

ವಿಧಾನಸಭೆ ಚುನಾವಣೆಯ ಫ‌ಲಿತಾಂಶದ ನಂತರ ರಾಜಕೀಯವಾಗಿ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸಿನ ಬಗ್ಗೆಯೂ ಯಾರೂ ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಈಗ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನಕ್ಕೆ ಮುಂದಾಗಿದ್ದು, ಡಿಸೆಂಬರ್‌ 10,11, ಹಾಗೂ 12ರಂದು ಮೂರು ದಿನ ದೆಹಲಿಯಲ್ಲಿ ಬೃಹತ್‌ ಲಿಂಗಾಯತ ರ್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.

ಈ ರ್ಯಾಲಿಗೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಿಂದ ಸುಮಾರು 10 ಸಾವಿರ ಜನರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದಾರೆ. ಅಲ್ಲದೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಗುರುತಿಸಿಕೊಂಡಿರುವ ಭಾಲ್ಕಿ ಪಟ್ಟದ ದೇವರು, ಸಾಣೆಹಳ್ಳಿ ಶ್ರೀಗಳು, ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿಗಳಿಗೂ ಆಹ್ವಾನ ನೀಡಿದ್ದಾರೆ.  ಈ ಕಾರ್ಯಕ್ರಮದ ಉದ್ಘಾಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಆಹ್ವಾನಿಸಿದ್ದಾರೆ.

ಮಾತೆ ಮಹಾದೇವಿಯವರ ಈ ನಡೆ ಜಾಗತಿಕ ಲಿಂಗಾಯತ ಮಹಾಸಭೆ ನಾಯಕರ ಮುನಿಸಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮನವೊಲಿಸಿ ಬೇಡಿಕೆ ಈಡೇರಿಸುವ ಕೆಲಸವಾಗಬೇಕು. ಅದು ಬಿಟ್ಟು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕರೆದುಕೊಂಡು ಬಂದರೆ ಲಿಂಗಾಯತರ ಬೇಡಿಕೆಗೆ ಮತ್ತಷ್ಟು ಹಿನ್ನಡೆಯಾಗುತ್ತದೆ ಎಂಬ ಅಭಿಪ್ರಾಯ ಜಾಗತಿಕ ಲಿಂಗಾಯತ ಮಹಾಸಭೆ ಮುಖಂಡರದ್ದಾಗಿದೆ.

ಬಸವ ತತ್ವ ಅನುಸರಿಸುವ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಹುಟ್ಟಿಕೊಂಡಿತ್ತು. ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ  ಮಾಜಿ ಸಚಿವ ಎಂ.ಬಿ. ಪಾಟೀಲ್‌ ನೇತೃತ್ವದಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗಿತ್ತು. ಆದರೆ, ಈಗ ಮಾತೆ ಮಹಾದೇವಿ ಪ್ರತ್ಯೇಕವಾಗಿ ಬಸವ ಧರ್ಮ ಪೀಠದ ನೇತೃತ್ವದಲ್ಲಿ ಹೋರಾಟ ಮಾಡುತ್ತಿರುವುದರಿಂದ ಎಲ್ಲ ನಾಯಕರು ತಟಸ್ಥ ಧೋರಣೆ ಅನುಸರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಸವ ಧರ್ಮ ಪೀಠದ ವತಿಯಿಂದ ಮೂರು ದಿನ ಲಿಂಗಾಯತ ರ್ಯಾಲಿ ಮಾಡುತ್ತಿದ್ದೇವೆ. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಉದ್ಘಾಟನೆ ಮಾಡಲಿದ್ದಾರೆ. ಸುಮಾರು 10 ಸಾವಿರ ಜನರು ಸೇರಲಿದ್ದಾರೆ.
– ಮಾತೆ ಮಹಾದೇವಿ, ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ.

ಬಸಣ್ಣನ ತತ್ವದಲ್ಲಿ ನಂಬಿಕೆ ಇಟ್ಟವರು ಎಲ್ಲರೂ ಸೇರಿ ಹೋಗಬೇಕು. ಮಾತೆ ಮಹಾದೇವಿ ಎಲ್ಲರನ್ನೂ ಕರೆದುಕೊಂಡು ಹೋಗುತ್ತಿಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕರೆಸುವುದರಿಂದ ನಮ್ಮ ಬೇಡಿಕೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.
– ಜಿ.ಬಿ. ಪಾಟೀಲ್‌, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ.

ಬಸವ ಮಂಟಪದ ಮಾತೆ ಮಹಾದೇವಿ ನೇತೃತ್ವದಲ್ಲಿ ಈ ರ್ಯಾಲಿ ನಡೆಯಲಿದೆ. ಜಾಗತಿಕ  ಲಿಂಗಾಯತ ಮಹಾಸಭಾ ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರೂ ದೆಹಲಿಯಲ್ಲಿ ಅಧಿಕೃತ ಸಮಾವೇಶ ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆ. ನವೆಂಬರ್‌ 12 ರಂದು ಗದುಗಿನ ತೋಂಟದ ಸಿದ್ದಲಿಂಗ ಶ್ರೀಗಳ ಶ್ರದ್ದಾಂಜಲಿ ನಡೆಯಲಿದ್ದು, ಆ ಸಭೆಯಲ್ಲಿ ಪ್ರತ್ಯೇಕ ಧರ್ಮದ ಬೇಡಿಕೆಗೆ ಒತ್ತಡ ಹೇರಲಿದ್ದೇವೆ.
– ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠಾಧ್ಯಕ್ಷರು.

– ಶಂಕರ ಪಾಗೋಜಿ

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.