ಪ್ರಾಧಿಕಾರದ ಪುಸ್ತಕಗಳಿಗೆ ಡಿಮ್ಯಾಂಡ್
Team Udayavani, May 24, 2018, 11:26 AM IST
ಬೆಂಗಳೂರು: ಇದು ಆನ್‌ಲೈನ್ ಯುಗ. ಸಣ್ಣ ಪಿನ್ ತಯಾರಕನೂ ಇ-ಕಾಮರ್ಸ್ ಮೊರೆ ಹೋಗಿದ್ದಾನೆ. ಹಾಗೇ ಪುಸ್ತಕ ಮಾರಾಟ ಕೂಡ ಆನ್‌ಲೈನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವುದು ಹೊಸತೇನಲ್ಲ. ಆದರೆ ಹೊಸ ವಿಷಯ ಏನೆಂದರೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಈಗ ಆನ್‌ಲೈನ್‌ನಲ್ಲಿ ಬೇಡಿಕೆ ಹೆಚ್ಚಿದೆ.
ಕನ್ನಡ ಪುಸ್ತಕ ಪ್ರಾಧಿಕಾರ ಇಲಾಖಾವಾರು ಪುಸ್ತಕ ಮಾರಾಟದ ದೃಷ್ಟಿಯಿಂದ 2017ರ ಡಿಸೆಂಬರ್‌ನಲ್ಲಿ ಪುಸ್ತಕಗಳ ಆನ್‌ಲೈನ್ ಮಾರಾಟ ಪರಿಚಯಿಸಿದೆ. ಇಲ್ಲಿ ಈವರೆಗೆ 1800 ಪುಸ್ತಕಗಳು ಮಾರಾಟವಾಗಿದ್ದು, 1.09 ಲಕ್ಷ ರೂ. ವಹಿವಾಟು ನಡೆದಿದೆ. ವಿಶೇಷವೆಂದರೆ, ಬೆಂಗಳೂರು ಮೂಲದ ಸಂತೋಷ್ ಎಂಬುವವರು ಒಂದೇ ದಿನ 14 ಸಾವಿರ ರೂ. ಮೌಲ್ಯದ ಪುಸ್ತಕ ಖರೀದಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಹಲವು ಅಕಾಡೆಮಿಗಳು ಪ್ರತಿ ವರ್ಷ ಪುಸ್ತಕಗಳನ್ನು ಪ್ರಕಟಿಸುತ್ತಲೇ ಇರುತ್ತವೆ. ಆದರೆ, ಅವು ಓದುಗರ ಕೈಸೇರದೇ ಅಕಾಡೆಮಿಗಳ ಗೋದಾಮು ಸೇರುತ್ತಿವೆ. ಇಂತಹ ಸಂದರ್ಭದಲ್ಲಿ ಅಕಾಡೆಮಿಗಳೂ ಪ್ರಾಧಿಕಾರದ ಮಾದರಿಯಲ್ಲಿ ಆನ್‌ಲೈನ್‌ನಲ್ಲಿ ಪುಸ್ತಕ ಮಾರಾಟ ಆರಂಭಿಸಿದರೆ ಓದುಗರಿಗೆ
ಅನುಕೂಲವಾಗುತ್ತದೆ ಎಂಬ ಕೂಗು ಬಹಳದಿನಗಳಿಂದ ಇತ್ತು.
ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ರಾಜೋತ್ಸವ, ಗಣರಾಜೋತ್ಸವ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಇನ್ನಿತರ ವಿಶೇಷ ದಿನಗಳಲ್ಲಿ ಆನ್‌ಲೈನ್ ಗ್ರಾಹಕರಿಗೆ ಶೇ.15ರಿಂದ ಶೇ.50ರ ವರೆಗೆ ರಿಯಾಯ್ತಿ ನೀಡುತ್ತದೆ. ಹತ್ತು ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕಗಳ ಮೇಲೆ ಶೇ.50, ಆರು ವರ್ಷಗಳ ಹಿಂದೆ ಪ್ರಕಟವಾದವಕ್ಕೆ ಶೇ.30, ಮೂರು ವರ್ಷದ ಹಿಂದೆ ಪ್ರಕಟವಾಗಿರುವ ಪುಸ್ತಕದ ಮೇಲೆ ಶೇ.20ರಷ್ಟು ಹಾಗೂ ಹೊಸ ಪುಸ್ತಕಗಳ ಮೇಲೆ ಶೇ.15ರ ರಿಯಾಯಿತಿ ನೀಡಲಾಗುತ್ತಿದೆ. ಇದು ಕೂಡ ಆನ್‌ಲೈನ್ ವಹಿವಾಟು ಹೆಚ್ಚಳಕ್ಕೆ ಕಾರಣ.
ಕನ್ನಡ ಸಹೃದಯಿಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಾಧಿಕಾರ ರೂಪಿಸಿರುವ ಯೋಜನೆಗಳಲ್ಲಿ ಆನ್‌ಲೈನ್ ಮಾರಾಟವೂ ಒಂದು. ಈಗಾಗಲೇ 1800 ಪುಸ್ತಕಗಳು ಮಾರಾಟವಾಗಿವೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ. ಪ್ರಾಧಿಕಾರದಲ್ಲಿ ಸಾಹಿತ್ಯ, ವಿಜ್ಞಾನ, ಸಮಾಜ, ಸಾಮಾಜಿಕ ಚಳವಳಿ ಸೇರಿದಂತೆ 350ಕ್ಕೂ ಹೆಚ್ಚು ಪುಸ್ತಕಗಳಿವೆ. ಮಾಹಿತಿಗೆ http://kannadapustakapradhikara.com ಜಾಲತಾಣಕ್ಕೆ ಭೇಟಿ ನೀಡಬಹುದು.
ಓದುಗರಿಗೆ ಸುಲಭವಾಗಿ ಪುಸ್ತಕಗಳು ಕೈಸೇರಬೇಕು ಎಂಬ ಉದ್ದೇಶದಿಂದ ಆನ್‌ಲೈನ್ ಮಾರಾಟ ಆರಂಭಿಸಲಾಗಿದೆ. ಇದಕ್ಕೆ ಓದುಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕೃತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿರುವುದು ಖುಷಿ ಕೊಟ್ಟಿದೆ.
ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ
ಅಕಾಡೆಮಿಗಳು ಪ್ರಕಟಿಸಿರುವ ಹಲವು ಪುಸ್ತಕಗಳು ಓದುಗರಿಗೆ ತಲುಪದೇ ಗೋದಾಮುಗಳಲ್ಲಿ ಕೊಳೆಯುತ್ತಿವೆ. ಕನ್ನಡ ಪುಸ್ತಕ ಪ್ರಾಧಿಕಾರದ ಈ ಕೆಲಸ ಇತರ ಅಕಾಡೆಮಿಗಳಿಗೆ ಮಾದರಿ. ಇಂತಹ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಬೇಕಾಗಿತ್ತು.
ಸಿದ್ಧಲಿಂಗಯ್ಯ, ಕವಿ
ಓದುಗರಿಗೆ ಪುಸ್ತಕಗಳನ್ನು ತಲುಪಿಸುವ ದಿಕ್ಕಿನಲ್ಲಿ ಪುಸ್ತಕ ಪ್ರಾಧಿಕಾರದ ಪ್ರಯತ್ನ ಶ್ಲಾಘನೀಯ. ಇಂತಹ ಕೆಲಸಗಳು
ವ್ಯಾಪಕವಾಗಿ ನಡೆಯಬೇಕು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತ ವರ್ಗಕ್ಕೆ ಅಭಿನಂದನೆ.
ಹಂಪ ನಾಗರಾಜಯ್ಯ, ಸಾಹಿತಿ
ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.