ಸೇವೆ, ಸೌಕರ್ಯ ತಲುಪಿಸಲು ಡಿಜಿಟಲೀಕರಣದ ಮೊರೆ


Team Udayavani, Jan 12, 2018, 11:41 AM IST

seve-soukarya.jpg

ಬೆಂಗಳೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಪ್ರಸಕ್ತ ವರ್ಷದಲ್ಲಿ 1.60 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ ಎಂ.ಎಸ್‌.ಬಸವರಾಜು ಹೇಳಿದರು.

ನಿಗಮ ಹೊರತಂದಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಅಪರೂಪದ ಛಾಯಾಚಿತ್ರಗಳಿರುವ ಕ್ಯಾಲೆಂಡರ್‌ಅನ್ನು ನಗರದಲ್ಲಿ ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರ ಆರ್ಥಿಕ ಬಲವರ್ಧನೆಗೆ ನಾನಾ ಕಾರ್ಯಕ್ರಮಗಳನ್ನು ನಿಗಮದಿಂದ ಕೈಗೊಳ್ಳಲಾಗಿದೆ. ಜತೆಗೆ ಫ‌ಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ ಶೇ.50ರಷ್ಟು ಅನುದಾನ ಬಳಸಿ ಸೌಲಭ್ಯ ಕಲ್ಪಿಸಲಾಗಿದೆ. 3,500 ಫ‌ಲಾನುಭವಿಗಳಿಗೆ ಪ್ರವಾಸಿ ಕ್ಯಾಬ್‌ ವಿತರಿಸಲಾಗುತ್ತಿದ್ದು, ಈಗಾಗಲೇ ಎಂಟು ಜಿಲ್ಲೆÉಗಳಲ್ಲಿ 700 ಮಂದಿಗೆ ಸೌಲಭ್ಯ ಕಲ್ಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

70,000 ಕುಟುಂಬಗಳಿಗೆ 280 ಕೋಟಿ ರೂ. ನೇರ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಭೂಮಿರಹಿತರಿಗೆ ಸ್ಥಳೀಯವಾಗಿ ಲಭ್ಯವಿರುವ ಭೂಮಿ ಹಂಚಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಒತ್ತು ನೀಡಿದ್ದಾರೆ. ಖುಷ್ಕಿ ಭೂಮಿ ಜತೆಗೆ ಲಭ್ಯವಿರುವ ಕಡೆ ತರಿ ಭೂಮಿಯನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ಕಳೆದ ನಾಲ್ಕೂವರೆ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 30,000ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಲಾಗಿದೆ. 2013-14ನೇ ಸಾಲಿನಿಂದ ಬ್ಯಾಕ್‌ಲಾಗ್‌ ಉಳಿದಿದ್ದ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಫ‌ಲಾನುಭವಿಗಳು ಸೌಲಭ್ಯಕ್ಕಾಗಿ ಕಚೇರಿ ಅಲೆಯುವುದನ್ನು ತಪ್ಪಿಸಲು ಡಿಜಿಟಲ್‌ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಅನುದಾನ ಹೆಚ್ಚಳ: 2012-13ನೇ ಸಾಲಿನಲ್ಲಿ ನಿಗಮಕ್ಕೆ ವಾರ್ಷಿಕ 100ರಿಂದ 150 ಕೋಟಿ ರೂ. ಅನುದಾನವಿತ್ತು. ಎಸ್‌ಸಿಪಿಟಿಎಸ್‌ಪಿ ಕಾಯ್ದೆ ಜಾರಿಯಾದ ಬಳಿಕ ಅನುದಾನ ಹೆಚ್ಚಾಗಿದ್ದು, 1,200 ಕೋಟಿ ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಫ‌ಲಾನುಭವಿಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸುಲು, ಪರಿಶಿಷ್ಟ ಜಾತಿ, ಪಂಗಡದ ಆರ್ಥಿಕವಾಗಿ ಹಿಂದುಳಿದವರ ಬಲವರ್ಧನೆಗೆ ಒತ್ತು ನೀಡಲಾಗಿದೆ. ಭೂಒಡೆತನ ಯೋಜನೆಯಲ್ಲಿ ಶೇ.54ರಷ್ಟು ಪ್ರಗತಿ ಸಾಧಿಸಲಾಗಿದೆ. ಭೂಒಡೆತನ ಯೋಜನೆಯಡಿ 2016-17ರಲ್ಲಿ 1040 ಫ‌ಲಾನುಭವಿಗಳು ಸೌಲಭ್ಯ ಪಡೆದಿದ್ದರೆ ಪ್ರಸಕ್ತ ವರ್ಷದಲ್ಲಿ ಈವರೆಗೆ 1,200 ಮಂದಿ ಸೌಲಭ್ಯ ಪಡೆದಿದ್ದಾರೆ.

ಹಾಗೆಯೇ 2016-17ರಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ 10,595 ಮಂದಿ ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ 5944 ಮಂದಿ ಪ್ರಯೋಜನ ಪಡೆದಿದ್ದಾರೆ. ಪ್ರಸಕ್ತ ವರ್ಷದಲ್ಲಿ 16,189 ಮಂದಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ದೇಶದಲ್ಲೇ ಪ್ರಥಮ ಬಾರಿಗೆ ಕಲ್ಯಾಣ ಆ್ಯಪ್‌ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಕೆಆರ್‌ಐಇಎಸ್‌, ಲಿಡ್ಕರ್‌, ಪಿಇಟಿಸಿ, ಕೆಎಂವಿಎಸ್‌ಟಿಡಿಸಿ ಸೇರಿದಂತೆ ಇನ್ನಿತರ ಯೋಜನೆಗಳ ಸಮಗ್ರ ಮಾಹಿತಿ ಒಂದೇ ಆ್ಯಪ್‌ನಲ್ಲಿ ಸಿಗಲಿದೆ.

ಜತೆಗೆ ಕೆಲವೊಂದು ಮೂಲ ಮಾಹಿತಿ ದಾಖಲಿಸಿದರೆ ಅವರಿಗೆ ನಿರ್ದಿಷ್ಟವಾಗಿ ಅನ್ವಯಿಸುವ ಸೌಲಭ್ಯಗಳ ವಿವರವೂ ಸಿಗಲಿದೆ. ಒಟ್ಟಾರೆ ಡಿಜಿಟಲ್‌ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿ ಫ‌ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಹೆಳಿದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.