ರಾಜ್ಯಪಾಲರ ಅನುಮೋದನೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
Team Udayavani, Sep 16, 2017, 12:47 PM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಮುಂಬಡ್ತಿ ಸಂಬಂಧ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ತಕ್ಷಣ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನೂರಾರು ಕಾರ್ಯಕರ್ತರು ನಗರದ ಮೌರ್ಯವೃತ್ತದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಹಿತಕ್ಕಾಗಿ ಮುಂಬಡ್ತಿ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿ, ಇದರ ಅನುಮೋದನೆಗೆ ರಾಜ್ಯಪಾಲರಿಗೆ ಕಳಿಸಿತ್ತು. ಆದರೆ, ರಾಜ್ಯಪಾಲರು ಕೆಲವು ವಿವರಣೆಗಳನ್ನು ಕೇಳಿ ವಾಪಸ್ ಕಳುಹಿಸಿದ್ದಾರೆ. ಇದು ದುರದೃಷ್ಟಕರವಾಗಿದ್ದು, ಕೂಡಲೇ ಇದಕ್ಕೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಂಗ್ಳೂರು ವಿಜಯ್, ಮುಂಬಡ್ತಿ ಮಾತ್ರವಲ್ಲ; ಸರ್ಕಾರ ದಲಿತ ಗುತ್ತಿಗೆದಾರರಿಗೆ ಎಲ್ಲ ಟೆಂಡರ್‌ಗಳಲ್ಲಿ 50 ಲಕ್ಷ ರೂ.ವರೆಗೆ ಮೀಸಲಾತಿ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಿ, ಗುತ್ತಿಗೆಯಲ್ಲಿನ ಮೀಸಲಾತಿ ಆಜ್ಞೆಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಕಳುಹಿಸಿದೆ. ಆದರೆ, ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸುವ ಮೂಲಕ ದಲಿತ ವಿರೋಧಿ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿದರು.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀ ನಾರಾಯಣ ನಾಗವಾರ ಮಾತನಾಡಿ, ಬಿಜೆಪಿಯು ದಲಿತರನ್ನು ಓಲೈಸಲು ದಲಿತರ ಮನೆಗಳಿಗೆ ತೆರಳಿ ಊಟ ಮಾಡುತ್ತಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ ಆಚರಿಸುತ್ತಾರೆ. ಆದರೆ, ಮತ್ತೂಂದೆಡೆ ದಲಿತ ವಿರೋಧಿ ನಿಲುವುಗಳನ್ನು ಅನುಸರಿಸುತ್ತಿರುವ ರಾಜ್ಯಪಾಲರ ಧೋರಣೆಗೆ ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕೈಗೊಂಡಿದ್ದ ಮುಂಬಡ್ತಿ ಸುಗ್ರೀವಾಜ್ಞೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ, ಹೀಗೆ ಕೇಳಿರುವ ಪ್ರಶ್ನೆಗಳಲ್ಲಿ ಯಾವುದೇ ಅರ್ಥಗಳಿಲ್ಲ. ಸುಗ್ರೀವಾಜ್ಞೆಯ ಅಗತ್ಯತೆ ಬಗ್ಗೆ ಪ್ರಶ್ನಿಸಿರುವ ರಾಜ್ಯಪಾಲರು ಸಂವಿಧಾನಿಕ ಸವಲತ್ತುಗಳು ನಾಶವಾಗುತ್ತಿರುವ ಬಗ್ಗೆ ಯಾವತ್ತೂ ಮಾತನಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಪಾಲರು ತಕ್ಷಣ ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿ ಸಂಬಂಧ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅನುಮೋದನೆ ನೀಡಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲಾಗುವುದು ಎಂದು ಲಕ್ಷ್ಮೀ ನಾರಾಯಣ ನಾಗವಾರ ಎಚ್ಚರಿಕೆ ನೀಡಿದರು. ಧರಣಿಯಲ್ಲಿ ದೇವರಾಜ ಅರಸು ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ.ಎನ್.ವಿ.ನರಸಿಂಹಯ್ಯ, ದಲಿತ ಮುಖಂಡರಾದ ಜೀವನಹಳ್ಳಿ ಆರ್.ವೆಂಕಟೇಶ್, ಕಲ್ಲಪ್ಪ ಕಾಂಬಳೆ, ಕೆಂಪಣ್ಣ ಸಾಗ್ಯ, ತರೀಕೆರೆ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.