ಡೆಂಘೀಗೆ ಬೆಲ್ಲ, ಹಸಿ ಈರುಳ್ಳಿ ಸೇವನೆ ಪರಿಹಾರ
Team Udayavani, Jul 25, 2017, 11:18 AM IST
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ಜ್ವರದಿಂದ ಬಳಲುತ್ತಿರುವವರು ಬೆಲ್ಲವನ್ನು ಹಸಿ ಸಣ್ಣ ಈರುಳ್ಳಿಯೊಂದಿಗೆ ಸೇವಿಸಿದರೆ ರಕ್ತದಲ್ಲಿನ ಪ್ಲೇಟ್ಲೆಟ್ಗಳ ಪ್ರಮಾಣ ಏರಿಕೆಯಾಗಲಿದ್ದು, ಈ ಬಗ್ಗೆ ಜಾಗೃತಿ ಮೂಡಿಸಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು ವ್ಯಾಪಕ ಜಾಗೃತಿ ಮೂಡಿಸುವಂತೆ ಕೋರಿದ್ದಾರೆ. ಶಾಲಿನಿ ರಜನೀಶ್ ಅವರು ಫೇಸ್ಬುಕ್ನಲ್ಲಿ ಪ್ರಕಟಿಸಿರುವ ಸಂದೇಶದ ಸಾರಾಂಶ ಹೀಗಿದೆ. ಡೆಂಘೀ ಜ್ವರದಿಂದ ಬಳಲುತ್ತಿರುವವರು ಬೆಲ್ಲವನ್ನು ಸಣ್ಣ, ಹಸಿ ಈರುಳ್ಳಿಯೊಂದಿಗೆ ಸೇವಿಸಬೇಕು.
ಇದು ರಕ್ತದಲ್ಲಿನ ಪ್ಲೇಟ್ಲೆಟ್ ಪ್ರಮಾಣ ವೃದ್ಧಿಗೆ ಸಹಕಾರಿಯಾಗುತ್ತದೆ. ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಜ್ವರವನ್ನು ನಿವಾರಿಸುತ್ತದೆ. ಇದು ಸುಲಭವಾದ ಹಾಗೂ ಅಡ್ಡ ಪರಿಣಾಮವಿಲ್ಲದ ಪರಿಣಾಮಕಾರಿ ಪರಿಹಾರವೆನಿಸಿದೆ. ಈ ಸಂಜೀವಿನಿ ಸಂದೇಶವನ್ನು ಎಲ್ಲರಿಗೂ ತಲುಪಿಸಿ ಜೀವಗಳನ್ನು ಉಳಿಸಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.