ಡಿನೋಟಿಫೈ: ಬಿಎಸ್‌ವೈ ಅರ್ಜಿ ವಿಚಾರಣೆ ಇಂದು
Team Udayavani, Sep 12, 2017, 7:05 AM IST
ಬೆಂಗಳೂರು:ಡಾ.ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ ( ಸೆ.12) ಮುಂದೂಡಿದೆ.
ಸೋಮವಾರ ನಡೆದ ಅರ್ಜಿವಿಚಾರಣೆ ವೇಳೆ ಸುದೀರ್ಘ ವಾದ ಮಂಡಿಸಿದ ಎಸಿಬಿ ಪರ ವಕೀಲ ಮಾಜಿ ಅಡ್ವೋಕೆಟ್ ಜನರಲ್ ಪ್ರೊ.ರವಿವರ್ಮಕುಮಾರ್, ಶಿವರಾಮ ಕಾರಂತ ಬಡವಾಣೆ ಅಕ್ರಮ ಡಿನೋಟಿಫಿಕೇಶನ್ ಅತ್ಯಂತ ಗಂಭೀರ ಪ್ರಕರಣವಾಗಿದೆ. ಅಂದಿನ ಸಿಎಂ ಯಡಿಯೂರಪ್ಪ ಸಾರ್ವಜನಿಕ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಿದ್ದಾರೆ. ಹೀಗಾಗಿ ಈ ಪ್ರಕರಣದ ಸಮಗ್ರ ತನಿಖೆ ನಡೆಯುವ ಅಗತ್ಯವಿದ್ದು ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ನ್ಯಾಯಪೀಠಕ್ಕೆ ಕೋರಿದರು.
ಬಳಿಕ ಯಡಿಯೂರಪ್ಪ ಪರ ಎಸಿಬಿಗೆ ದೂರು ನೀಡಿರುವ ಅಯ್ಯಪ್ಪ ಶರ್ಮಾ ಅವರ ಪರ ವಕೀಲರು ವಾದಿಸಿ, ಸೂಕ್ತ ಮಾಹಿತಿಯನ್ನು ಆಧರಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡು, ಡಿನೋಟಿಫಿಕೇಶನ್ ಮಾಡಿರುವ ಸಂಬಂಧ ನನ್ನ ಕಕ್ಷಿದಾರರು ಎಸಿಬಿಗೆ ದೂರು ನೀಡಿದ್ದಾರೆ.ಅದರಂತೆ ಪ್ರಾಥಮಿಕ ತನಿಖೆ ನಡೆಸಿದ ಬಳಿಕವೇ, ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಾನೂನು ಪ್ರಕಾರ ಎಸಿಬಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಈ ವಾದ ಆಲಿಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ( ಸೆ.12) ಮುಂದೂಡಿತು. ಹೀಗಾಗಿ ಅರ್ಜಿದಾರ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು, ಇನ್ನಿತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವೂ ವಿಸ್ತರಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.