ಪ.ಪೂರ್ವ ಕಾಲೇಜುಗಳ ಪರಿಷ್ಕೃತ ದರಪಟ್ಟಿ ಪ್ರಕಟ
Team Udayavani, Mar 30, 2018, 6:15 AM IST
ಬೆಂಗಳೂರು : ರಾಜ್ಯದ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಶುಲ್ಕಗಳಿಗೆ ಸಂಬಂಧಿಸಿದಂತೆ 2018-19ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತೆರಿಗೆಯೇತರ ಆದಾಯದ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಪರೀಕ್ಷಾ ಶುಲ್ಕ, ಮರು ಮೌಲ್ಯಮಾಪನ, ಅಂಕಪಟ್ಟಿ, ಅನುತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿ, ಹೊಸ ಕಾಲೇಜು ತೆರೆಯಲು, ಹೊಸ ಕಾಂಬಿನೇಷನ್ ತೆರೆಯಲು, ವರ್ಗಾವಣೆ ಪತ್ರ, ನೋಂದಣಿ ಶುಲ್ಕ, ಪರೀಕ್ಷಾ ಕೇಂದ್ರದ ಬದಲಾವಣೆ ಸೇರಿದಂತೆ ಸುಮಾರು 46 ವಿವಿಧ ಶುಲ್ಕ ಪರಿಷ್ಕರಣೆ ಮಾಡಲಾಗಿದೆ. 2013-14ರಿಂದ ಇಲ್ಲಿಯವರೆಗೆ ಇದ್ದ ಶುಲ್ಕದಲ್ಲಿ ಶೇ.30ರಿಂದ ಶೇ.60ರ ವರೆಗೆ ಹೆಚ್ಚಿಸಲಾಗಿದೆ.
ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳು ಪಿಯು ಇಲಾಖೆಗೆ ಪಾವತಿಸಬೇಕಾದ ವಿವಿಧ ಶುಲ್ಕ ಮತ್ತು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜಿಗೆ ವಿದ್ಯಾರ್ಥಿಗಳು ಸಲ್ಲಿಸಬೇಕಾದ ವಿವಿಧ ಶುಲ್ಕದ ದರವನ್ನು 2013-14ನೇ ಸಾಲಿನಲ್ಲಿ ಪರಿಷ್ಕರಿಸಲಾಗಿತ್ತು. ಅದರ ನಂತರ ದರ ಪರಿಷ್ಕರಣೆಯಾಗಲಿರಲ್ಲ. ವಿವಿಧ ಶಿಕ್ಷಣ ಸಂಸ್ಥೆಗಳ ಒತ್ತಾಯದಂತೆ ದರ ಪರಿಷ್ಕರಣೆಗೆ ಸಮಿತಿಯನ್ನು ರಚಿಸಲಾಗಿತ್ತು.
ವಿವಿಧ ಇಲಾಖೆಯ ತೆರಿಗೆಯೇತರ ಆದಾಯ ದರಗಳನ್ನು ಪರಿಷ್ಕರಣೆ ಕುರಿತು ರಚಿಸಲಾದ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯ ಸಮಿತಿಯು ನೀಡಿರುವ ಶಿಫಾರಸಿನಂತೆ 2018-19ನೇ ಸಾಲಿನಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.