ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆ
Team Udayavani, Jun 11, 2019, 3:05 AM IST
ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 3.4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಉಪ ನೊಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸೋಮವಾರ ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಈ ವೇಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಸಾವಿಗೆ ಸಂತಾಪವನ್ನು ಸೂಚಿಸಲಾಯಿತು.
ಕೊಡಿಗೇಹಳ್ಳಿಯ ಟಾಟಾ ನಗರದಲ್ಲಿ ನಿರ್ಮಿಸಿರುವ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಕಚೇರಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಮೃತಪಟ್ಟಿರುವ ಸುದ್ದಿ ತಿಳಿಯಿತು. ಸರ್ಕಾರಿ ರಜೆ ಹಾಗೂ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದರಿಂದ ಉದ್ಘಾಟನಾ ಕಾರ್ಯಕ್ರಮವನ್ನು ಸಂತಾಪ ಕಾರ್ಯಕ್ರಮವಾಗಿ ಪರಿವರ್ತಿಸಲಾಯಿತು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಕಾರ್ನಾಡರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
3.4 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಚೇರಿ: ಬ್ಯಾಟರಾಯನಪುರ ಉಪನೋಂದಣಿ ಕಚೇರಿಯನ್ನು ಸುಮಾರು 3.4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 36 ಚ.ಮೀ ಪಾರ್ಕಿಂಗ್ ವ್ಯವಸ್ಥೆ, 243 ಚ.ಮೀ ನೆಲಮಹಡಿ, 243 ಚ.ಮೀ ಮೊದಲ ಮಹಡಿ ಕಟ್ಟಡಗಳಿವೆ. ಆತ್ಯಾಧುನಿಕ ಸೌಲಭ್ಯ ಇರುವ ಸುಸಜ್ಜಿತ ದಾಖಲೆಗಳ ಕೊಠಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊಠಡಿಗಳನ್ನು ನಿರ್ಮಿಸಲಾಗಿದೆ.
ಈ ಮೊದಲು ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಕಚೇರಿ ಕಟ್ಟಡದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗುತಿತ್ತು. ಸ್ವಂತ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿಬ್ಬಂದಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.