ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು ಒಂದು ಲಕ್ಷದ 22 ಸಾವಿರ ಮೌಲ್ಯದ ಮದ್ಯ ವಶ
Team Udayavani, Apr 14, 2020, 5:30 PM IST
ಬೆಂಗಳೂರು: ಕೋವಿಡ್-19 ಸೋಂಕು ಲಾಕ್ ಡೌನ್ ಇರುವ ಕಾರಣ ಅಕ್ರಮವಾಗಿ ದಾಸ್ತಾನು ಮಾಡಿದ್ದ ಎರಡು ಪ್ರಕರಣಗಳಲ್ಲಿ ಸುಮಾರು ಒಂದು ಲಕ್ಷ 22 ಸಾವಿರ ಮೌಲ್ಯದ ಮದ್ಯವನ್ನು ನಗರದ ಶ್ರೀರಾಂಪುರದ ಬಳಿ ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಮದ್ಯ ಸಂಗ್ರಹಿಸಿದ್ದ ವಿಶ್ವನಾಥ್, ನರಸಮ್ಮ ರನ್ನು ಬಂಧಿಸಲಾಗಿದೆ. ಜೊತೆಗೆ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಇವರುಗಳ ಜೊತೆಗೆ 22 ಬಾಟಲಿಗಳಲ್ಲಿ ಒಟ್ಟು 3.960 ಲೀಟರ್ ಶಂಕಿತ ನಕಲಿ ಮದ್ಯದ ಹೊಂದಿದ್ದು, ಮಾರಾಟ ಮಾಡುವ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಮಾಡಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ವರುಣೇಶ್ ಮತ್ತು ರಘು. ಎನ್. ಇವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ 48 ಬಾಟಲಿಗಳಲ್ಲಿ 8.640 ಲೀಟರ್ ಶಂಕಿತ ನಕಲಿ ಮದ್ಯದ ದಾಸ್ತಾನನ್ನು ಹೊಂದಿದ್ದು, ಮಾರಾಟ ಮಾಡುವ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ.
ಇವರುಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.