ಅಭಿವೃದ್ಧಿ ಮಾಹಿತಿ ಪಡೆದ ಢಾಕಾ ಮೇಯರ್
Team Udayavani, Feb 5, 2019, 6:23 AM IST
ಬೆಂಗಳೂರು: ನಗರದ ಅಭಿವೃದ್ಧಿ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಬಿಬಿಎಂಪಿ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲು ಢಾಕಾ ಮೇಯರ್ ಹಾಗೂ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿದೆ ಎಂದು ಮೇಯರ್ ಗಂಗಾಂಬಿಕೆ ಹೇಳಿದರು.
ಸೋಮವಾರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಢಾಕಾ ಮೇಯರ್ ಮೊಹಮ್ಮದ್ ಸಯೀದ್ ಕೋಕೊನ್ ಹಾಗೂ ಅಧಿಕಾರಿಗಳ ತಂಡದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಲಿನ್ಯ ನಿಯಂತ್ರಣಕ್ಕೆ ಇತ್ತೀಚೆಗೆ ನಡೆದ ಸಿ-40 ಸಿಟೀಸ್ ಸಮ್ಮೇಳನದಲ್ಲೂ ಢಾಕಾ ಭಾಗವಹಿಸಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಪರಿಶೀಲಿಸಲು ಬಂದಿದ್ದಾರೆ ಎಂದು ತಿಳಿಸಿದರು.
ಮಾಲಿನ್ಯ ನಿಯಂತ್ರಣ, ಉದ್ಯಾನ, ಆಟದ ಮೈದಾನ, ರಸ್ತೆ ಅಭವೃದ್ಧಿಗೆ ಕೈಗೊಂಡ ಕ್ರಮಗಳು, ವೈಟ್‌ಟಾಪಿಂಗ್, ಟೆಂಡರ್‌ಶ್ಯೂರ್ ಯೋಜನೆಗಳ ಅನುಕೂಲ, ಸಿಗ್ನಲ್‌ವುುಕ್ತ ಕಾರಿಡಾರ್, ರಾಜಕಾಲುವೆಗಳ ಸ್ಥಿತಿ-ಗತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.
ಪ್ರಮುಖವಾಗಿ ತ್ಯಾಜ್ಯ ವಿಲೇವಾರಿ ಕುರಿತು ಚರ್ಚಿಸಲಾಗಿದೆ. ಅದರಂತೆ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳು, ಉತ್ಪತ್ತಿಯಾಗುವ ತ್ಯಾಜ್ಯ ಪ್ರಮಾಣ, ತ್ಯಾಜ್ಯ ವಿಂಗಡಣೆಗೆ ಕೈಗೊಂಡ ಕ್ರಮಗಳು, ಜೈವಿಕ ಹಾಗೂ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಘಟಕಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಮಂಗಳವಾರ ನಗರದ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
ನಂತರ ಮಾತನಾಡಿದ ಢಾಕಾ ಮೇಯರ್ ಮೊಹಮ್ಮದ್ ಸಹೀದ್ ಕೋಕೊನ್, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆಯಲು ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ.
ಅದರಂತೆ ಇಲ್ಲಿನ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪಡೆದು ಢಾಕಾದಲ್ಲಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು. ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹಾಜರಿದ್ದರು.
ನಮ್ಮಲ್ಲಿ ರಾತ್ರಿ, ನಿಮ್ಮಲ್ಲಿ ಹಗಲು: ಢಾಕಾದಲ್ಲಿ ತ್ಯಾಜ್ಯವನ್ನು ರಾತ್ರಿಯಿಂದ ಮುಂಜಾನೆ ಮೂರು ಗಂಟೆವರೆಗೆ ಮಾತ್ರ ವಿಲೇವಾರಿ ಮಾಡಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬೆಳಗಿನ ವೇಳೆ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಯಾವ ಸಮಯ ಸೂಕ್ತ ಎಂದು ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದ ಕೋಕೊನ್, ಢಾಕಾಗೆ ಭೇಟಿ ನೀಡುವಂತೆ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಅಧಿಕಾರಿಗಳನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.