ಧಾರವಾಡ ಐಐಟಿಯಲ್ಲಿ ಕನ್ನಡಿಗರಿಗೆ ಮೀಸಲಿಲ್ಲ


Team Udayavani, Jan 8, 2017, 3:45 AM IST

Basavaraj_Rayareddi.jpg

ಧಾರವಾಡ: ರಾಜ್ಯದ ಮೊದಲ ಐಐಟಿ (ಭಾರತೀಯ ತಂತ್ರಜ್ಞಾನ ಸಂಸ್ಥೆ)ಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟುಗಳನ್ನು ಮೀಸಲಿರಿಸಬೇಕು ಎನ್ನುವ ರಾಜ್ಯದ ಮನವಿಯನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿರಸ್ಕರಿಸಿದೆ. ಹೀಗಾಗಿ, ಕೇಂದ್ರದೊಂದಿಗೆ ಸಂಘರ್ಷ ಅನಿವಾರ್ಯ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಕೇಂದ್ರದ ವಿರುದ್ಧ ಕಿಡಿ ಕಾರಿದರು. ಐಐಟಿಗಾಗಿ ರಾಜ್ಯ ಸರ್ಕಾರ 500 ಎಕರೆಗೂ ಹೆಚ್ಚಿನ ಭೂಮಿ ನೀಡಿದೆ. ಇದರ ಮೌಲ್ಯ ಸುಮಾರು 500 ಕೋಟಿ ರೂ.ಗಳು. ಜತೆಗೆ, ನೀರು, ವಿದ್ಯುತ್‌ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 120 ವಿದ್ಯಾರ್ಥಿಗಳ ಪೈಕಿ ರಾಜ್ಯದಿಂದ ಕೇವಲ 7 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಹೀಗಾದರೆ, ನಾವು ಐಐಟಿಯನ್ನು ಬೇರೆ ರಾಜ್ಯದ ವಿದ್ಯಾರ್ಥಿಗಳಿಗಾಗಿ ಮಾಡಿದಂತಾಗುತ್ತದೆ. ಇದರಿಂದ ನಮಗೇನೂ ಉಪಯೋಗವಿಲ್ಲ. ರಾಜ್ಯದ ವಿದ್ಯಾರ್ಥಿಗಳಿಗೆ ಉಪಯೋಗಕ್ಕೆ ಬಾರದ ಐಐಟಿ ರಾಜ್ಯದಲ್ಲಿರುವುದು ನಿಷ್ಪ್ರಯೋಜಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಐಐಟಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟುಗಳನ್ನು ಮೀಸಲಿರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್‌ ಅವರು ಕಳೆದ ಒಂದೂವರೆ ತಿಂಗಳ ಹಿಂದೆ ರಾಜ್ಯದ ಉನ್ನತ ಶಿಕ್ಷಣ ಇಲಾಖೆಗೆ  ಪತ್ರ ಬರೆದಿದ್ದು, ಕೇಂದ್ರ ಸರ್ಕಾರಿ ಸ್ವಾಮ್ಯದ ಇಂತಹ ಸ್ವಾಯತ್ತ ವಿದ್ಯಾಸಂಸ್ಥೆಗಳಲ್ಲಿ ರಾಜ್ಯಗಳಿಗೆ ಯಾವುದೇ ರೀತಿಯ ಸೀಟುಗಳನ್ನು ಮೀಸಲಿರಿಸಲು ಬರುವುದಿಲ್ಲ ಎಂದು ತಿಳಿಸಿದ್ದಾರೆ. ಆ ಮೂಲಕ ನಮ್ಮ ಮನವಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ, ಕೇಂದ್ರದೊಂದಿಗೆ ಸಂಘರ್ಷ ಅನಿವಾರ್ಯ ಎಂದು ಕಿಡಿ ಕಾರಿದರು.

ಸಂಘರ್ಷಕ್ಕೆ ಸಿದ್ಧ: “ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ರಾಜ್ಯದ ಮನವಿಯನ್ನು ತಿರಸ್ಕರಿಸಿದ್ದಕ್ಕೆ ತಕ್ಕ ಉತ್ತರ ನೀಡುತ್ತೇನೆ. ಈ ಸಂಬಂಧ ಧಾರವಾಡದಲ್ಲೇ ಅಭಿಪ್ರಾಯ ಸಂಗ್ರಹಕ್ಕೆ ರಾಜ್ಯಮಟ್ಟದ ವಿಚಾರ ಸಂಕಿರಣ ಏರ್ಪಡಿಸುತ್ತೇನೆ. ಅಷ್ಟೇ ಏಕೆ, ಈ ವಿಚಾರದಲ್ಲಿ ಕೇಂದ್ರದೊಂದಿಗೆ ನಾನು ಸಂಘರ್ಷಕ್ಕೂ ಸಿದ್ಧ. ಈ ಬಗ್ಗೆ ನ್ಯಾಯ ಸಿಗುವವರೆಗೂ ಹೋರಾಟ ಬಿಡಲಾರೆ’ ಎಂದು ಕಿಡಿ ಕಾರಿದರು.

ಐಐಟಿ ನೇರವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಹೀಗಾಗಿ, ಕೇಂದ್ರ ಈ ಬಗ್ಗೆ ರಾಜ್ಯ ಸರ್ಕಾರದ ಮತ್ತು ಉನ್ನತ ಶಿಕ್ಷಣ ಇಲಾಖೆಯ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದೇ ಇಲ್ಲ. ನಿರ್ದೇಶಕರ ನೇಮಕಾತಿ, ವಿದ್ಯಾರ್ಥಿಗಳ ಮೀಸಲಾತಿ ಸೇರಿದಂತೆ ಎಲ್ಲ ವಿಚಾರದಲ್ಲೂ ಅದರದೇ ತೀರ್ಮಾನ. ಈ ಯಾವ ವಿಚಾರದಲ್ಲೂ ರಾಜ್ಯದತ್ತ ಅದು ನೋಡದಿರುವುದು ವಿಷಾದದ ಸಂಗತಿ ಎಂದರು.

ರಾಜ್ಯದ ವಿದ್ಯಾರ್ಥಿಗಳಿಗೆ ಐಐಟಿಗಳಲ್ಲಿ ಶೇ.25ರಷ್ಟು ಮೀಸಲಾತಿ ನೀಡಬೇಕು ಎನ್ನುವ ವಿಚಾರವನ್ನು ನಾನು ದೆಹಲಿಯಲ್ಲಿ ನಡೆದ ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಇಲಾಖೆಯ ಸಚಿವರ ಸಭೆಯಲ್ಲಿ ಪ್ರಸ್ತಾಪಿಸಿದ್ದೆ. ಅದಕ್ಕೆ ಬಹುತೇಕ ಎಲ್ಲಾ ರಾಜ್ಯಗಳ ಸಚಿವರು ಬೆಂಬಲ ವ್ಯಕ್ತಪಡಿಸಿದ್ದರು. ಆದರೂ, ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ನಮ್ಮ ಮನವಿಯನ್ನು ತಿರಸ್ಕರಿಸಿದ್ದು ಸರಿಯಲ್ಲ.
– ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.