Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Team Udayavani, Nov 5, 2024, 2:00 PM IST
ಬೆಂಗಳೂರು: ಸಿಬಿಐ ಅಧಿಕಾರಿಯೆಂದು ಹೇಳಿ ಕೊಂಡು ವೃದ್ಧೆಗೆ ವಿಡಿಯೋ ಕರೆ ಮಾಡಿ 10.21 ಲಕ್ಷ ರೂ. ವಂಚಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ 76 ವರ್ಷದ ವೃದ್ಧೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಪೊಲೀಸರು ಮಾಹಿತಿ ನೀಡಿದರು.
ಕನ್ನಿಂಗ್‌ಗ್ಯಾಮ್ ರಸ್ತೆಯಲ್ಲಿ ನೆಲೆಸಿರುವ ವೃದ್ಧೆಗೆ ವೊಡೊಫೋನ್‌ನಿಂದ ಕರೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದಾನೆ. ನೀವು ಅಪರಾಧ ಮಾಡಿದ್ದೀರಿ. ನಿಮ್ಮ ಫೋನ್ ಸಂಪರ್ಕ ಕಡಿತ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ, ಸಿಬಿಐ ಅಧಿಕಾರಿಗಳಿಗೆ ಕರೆಗಳ ವಿವರ ನೀಡುವುದಾಗಿ ಬೆದರಿಸಿದ್ದ. ಕೆಲವು ದಿನಗಳ ಬಳಿಕ ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಮತ್ತೂಬ್ಬ ವ್ಯಕ್ತಿ ಕರೆ ಮಾಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿ ಆಗಿರುವುದಾಗಿ ವೃದ್ಧೆಗೆ ಹೆದರಿಸಿದ್ದ ಎಂದು ವೃದ್ಧೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಅಲ್ಲದೆ, ವಾರಂಟ್ ಜಾರಿ ಆಗಿದ್ದು, ಬಂಧಿಸಲಾಗುವುದು. ತನಿಖೆಗೆ ಸಹ ಕಾರ ನೀಡಿದರೆ ಕ್ರಮ ತೆಗೆದುಕೊ ಳ್ಳುವುದಿಲ್ಲ. ಅದಕ್ಕಾಗಿ ಹಣ ವರ್ಗಾವಣೆ ಮಾಡಬೇಕು. ಅಲ್ಲದೇ ವಿಡಿಯೋ ಕರೆ ಕಡಿತ ಮಾಡದೆ ಮನೆಯ ಕೊಠಡಿಯಲ್ಲೇ ಇರಬೇಕು. ಈ ವಿಷಯವನ್ನೂ ಯಾರಿಗೂ ತಿಳಿಸಬಾರದು. ಅದರಿಂದ ಭೀತಿಗೆ ಒಳಗಾದ ವೃದ್ಧೆ, ಎರಡು ಖಾತೆಗಳಿಂದ 6.80 ಹಾಗೂ 3.41 ಲಕ್ಷ ವರ್ಗಾವಣೆ ಮಾಡಿದ್ದರು. ಆ ಬಳಿಕ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನಗೊಂಡ ವೃದ್ಧೆ ದೂರು ನೀಡಿದ್ಧಾರೆ ಎಂದು ಸೈಬರ್ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.