“ಚಿನ್ನಮ್ಮ’ನನ್ನು ಜೈಲಿನಲ್ಲಿ ಭೇಟಿಯಾದ ದಿನಕರನ್
Team Udayavani, Aug 19, 2017, 8:05 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಡಿಎಂಕೆ ( ಅಮ್ಮಾ
ಬಣ) ಪ್ರಧಾನ ಕಾರ್ಯದರ್ಶಿ ವಿ. ಶಶಿಕಲಾರನ್ನು ಅವರ ಸಂಬಂಧಿ ಟಿಟಿವಿ ದಿನಕರನ್ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ 12-50ರ ಸುಮಾರಿಗೆ ಜೈಲಿಗೆ ಆಗಮಿಸಿದ ದಿನಕರನ್, ಮೂರ್‍ನಾಲ್ಕು ಮಂದಿ ಬೆಂಬಲಿಗರು ಜೈಲಿನ ನಿಯಮಾವಳಿಯಂತೆ 45 ನಿಮಿಷ ಶಶಿಕಲಾರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾರ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಎಡಪ್ಪಾಡಿ ಪಳನಿ ಸ್ವಾಮಿ ಆದೇಶಿಸಿರುವುದು, ಮಾಜಿ ಸಿಎಂ ಪನ್ನೀರ ಸೆಲ್ವಂ ಹಾಗೂ ಎಐಡಿಎಂಕೆ ಬಣ ವಿಲೀನವಾಗುತ್ತಿರುವ ವಿದ್ಯಮಾನಗಳ ಬಗ್ಗೆ ದಿನಕರನ್ ಹಾಗೂ ಅವರ ಬೆಂಬಲಿಗರು ಶಶಿಕಲಾರನ್ನು ಭೇಟಿಯಾಗಿರುವುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ. ಶಶಿಕಲಾ ಭೇಟಿಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ದಿನಕರನ್, ತಮಿಳುನಾಡಿನ ಜನತೆಗೆ ಓಪಿಎಸ್ ಹಾಗೂ ಎಐಡಿಎಂಕೆ ಬಣ ವಿಲೀನವಾಗುತ್ತಿರುವುದು ಇಷ್ಟವಿಲ್ಲ. ಜನರ ಆಶೋತ್ತರಗಳಿಗೆ ವಿರುದಟಛಿವಾಗಿ ವಿಲೀನ ಪ್ರಕ್ರಿಯೆ ನಡೆಯುತ್ತಿದೆ. ಮಾಜಿ ಸಿಎಂ ಜಯಲಲಿತಾರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಯಲಿ, ತನಿಖೆ ಬಳಿಕ ಶಶಿಕಲಾ ನಿರ್ದೋಷಿ ಎಂದು ಸಾಬೀತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.