ದಿನೇಶ್ ಗುಂಡೂರಾವ್ ವಿರುದ್ಧ ಅಶ್ಲೀಲ ಪೋಸ್ಟ್ ಹಾಕಿದವನ ಸೆರೆ
Team Udayavani, Mar 21, 2019, 7:32 AM IST
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಅವರ
ಪತ್ನಿ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ಪ್ರಕಟಿಸಿದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆರ್.ಟಿ.ನಗರ ನಿವಾಸಿ ಆರ್.ಮಲ್ಲಿಕಾರ್ಜುನ (41) ಬಂಧಿತ. ಆರೋಪಿ ಯಿಂದ ಒಂದು ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ದಿನೇಶ್ ಗುಂಡೂರಾವ್ ಅವರ ಬಳಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಮಲ್ಲಿಕಾರ್ಜನ, ಇತ್ತೀಚೆಗೆ ಬೇಸರಗೊಂಡು ಕೆಲಸ ತೊರೆದು, ಬೇರೆಡೆ ಕೆಸಲಕ್ಕೆ ಸೇರಿಕೊಂಡಿದ್ದಾನೆ. ಈ ಮಧ್ಯೆ ಕೆಲ ದಿನಗಳ ಹಿಂದೆ
ಆರೋಪಿಯು, “ಆರ್.ಮಲ್ಲಿಕಾರ್ಜನ್’ ಹೆಸರಿನಲ್ಲಿರುವ ತನ್ನ ಫೇಸ್‌ಬುಕ್ ಖಾತೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ತಬೂರಾವ್ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪ್ರಕಟಿಸಿ ಮಾನಸಿಕ ಕಿರಿಕಿರಿ ಉಂಟು ಮಾಡುತ್ತಿದ್ದ.
ಅಷ್ಟೇ ಅಲ್ಲದೆ, ಆತ ಈ ರೀತಿಯ ಪೋಸ್ಟ್‌ಗಳ ಮೂಲಕ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಶ್ಯಪ್ ನಂದನ್ ಎಂಬುವವರು ಆರೋಪಿಯ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನಗರದ ಖಾಸಗಿ ಆಸ್ಪತ್ರೆ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರು ಹೇಳಿದರು.
“ನನ್ನ ಕಷ್ಟದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರು ಸಹಾಯ ಮಾಡಲಿಲ್ಲ. ಹೀಗಾಗಿ ಈ ರೀತಿ ಕೃತ್ಯ ಎಸಗಿದ್ದೇನೆ’ ಎಂದು ಆರೋಪಿ ಹೇಳಿಕೆ ನೀಡಿರುವುದಾಗಿ ಸೈಬರ್ ಕ್ರೈಂ ಪೊಲೀಸರು ಮಾಹಿಸಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.