ದಲಿತರ ಮನೆಯಲ್ಲಿ ಭೋಜನ; ಈಗ ಕೇಂದ್ರ ಸಚಿವರ ಸರದಿ
Team Udayavani, Jun 5, 2017, 12:22 PM IST
ಬೆಂಗಳೂರು: ಬರ ಅಧ್ಯಯನ, ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿನಿತ್ಯ ದಲಿತ ಕಾಲೋನಿಗಳಿಗೆ ಭೇಟಿ ನೀಡಿ, ದಲಿತರ ಮನೆಯಲ್ಲಿ ಉಪಹಾರ ಸೇವಿಸುತ್ತಿದ್ದಾರೆ. ಇದೀಗ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಕೂಡ ಇದೇ ಹಾದಿ ತುಳಿಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಸಬ್‌ಕಾ ಸಾಥ್-ಸಬ್‌ಕಾ ವಿಕಾಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಿಯೂಶ್ ಗೋಯಲ್ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸೋಮವಾರ ರಾತ್ರಿ ನಗರದಲ್ಲಿ ತಂಗಲಿರುವ ಅವರು, ಮಂಗಳವಾರ ದಲಿತರ ಕಾಲೋನಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸುವುದರ ಜತೆಗೆ ದಲಿತರ ಮನೆಯಲ್ಲಿ ಉಪಹಾರ ಸೇವಿಸುವರು.
ದಲಿತರ ಮನೆಯಲ್ಲಿ ಉಪಹಾರ: ಜೂ.6ರ ಮಂಗಳವಾರ ಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವತ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವ ಸಚಿವ ಪಿಯೂಶ್ ಗೋಯಲ್ ನಂತರ ದಲಿತರ ಕಾಲೋನಿಗೆ ಭೇಟಿ ನೀಡುವರು. ಅಲ್ಲಿ ದಲಿತರೊಂದಿಗೆ ಮಾತುಕತೆ ನಡೆಸುವುದರ ಜತೆಗೆ ಅವರ ಮನೆಯಲ್ಲೇ ಉಪಹಾರ ಸೇವಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.