ಅಡ್ಡಮತದಾನ ಮಾಡಿಸದಂತೆ ಸಿಎಂಗೆ ನಿರ್ದೇಶಿಸಿ: ಪಿಐಎಲ್ ಸಲ್ಲಿಕೆ
Team Udayavani, May 18, 2018, 7:20 AM IST
ಬೆಂಗಳೂರು: ಸದನದಲ್ಲಿ ಬಹುಮತ ಸಾಬೀತಿಗೆ ಬೇರೆ ಪಕ್ಷಗಳ ಶಾಸಕರ ಬಳಿ ಅಡ್ಡಮತದಾನ ಮಾಡಿಸಲು ಯತ್ನಿಸದಂತೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಹಾಗೂ ಬಿಜೆಪಿಗೆ ನಿರ್ಬಂಧ ಹೇರುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಈ ಕುರಿತು ವಕೀಲ ಅಮೃತೇಶ್ ಪಿಐಎಲ್ ಸಲ್ಲಿಸಿದ್ದು, ಬಹುಮತ ಸಾಬೀತಿಗೆ ಅಗತ್ಯವಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಇತರ ಶಾಸಕರ “ಕುದುರೆ ವ್ಯಾಪಾರ’ ನಡೆಸುವ ಸಾಧ್ಯತೆಯಿದೆ.
ಅಲ್ಲದೆ, ಒಂದು ವೇಳೆ ಬೇರೆ ಪಕ್ಷದ ಶಾಸಕರು ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಮತ್ತೆ ಉಪಚುನಾವಣೆ ನಡೆಸಲು ಸಾರ್ವಜನಿಕರ ತೆರಿಗೆ ಹಣವೇ ಪೋಲಾಗಲಿದೆ. ಹೀಗಾಗಿ, ರಾಜೀನಾಮೆ ನೀಡುವ ಶಾಸಕರಿಗೆ ಪುನರಾಯ್ಕೆ ಆಗುವ ಅವಕಾಶ ನೀಡಬಾರದು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಸ್ಪಷ್ಟ ಬಹುಮತ ಬರದಿದ್ದರೂ 104 ಶಾಸಕ ಸ್ಥಾನ ಹೊಂದಿರುವ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿ, 117 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಅವಕಾಶ ನೀಡದಿರುವ ರಾಜ್ಯಪಾಲರ ಕ್ರಮ ಕಾನೂನುಬಾಹಿರವಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ. ಅರ್ಜಿಯಲ್ಲಿ ರಾಜ್ಯಪಾಲರ ಕಾರ್ಯದರ್ಶಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.