ಬಡ್ತಿ ನೀಡಲು ಇರುವ ತೊಡಕು ನಿವಾರಣೆಗೆ ನಿಗಮ ಸಭೆಯಲ್ಲಿ ಚರ್ಚಿಸಿ ಕ್ರಮ
Team Udayavani, Feb 7, 2017, 12:01 PM IST
ಬೆಂಗಳೂರು: ಕೆಪಿಟಿಸಿಎಲ್‌ನಲ್ಲಿರುವ ಡಿಪ್ಲೊಮಾ ಎಂಜನಿ ಯರ್‌ಗಳನ್ನು ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಅದಕ್ಕಿಂತ ಹೆಚ್ಚಿನ ಹುದ್ದೆಗೆ ಬಡ್ತಿ ನೀಡಲು ಇರುವ ತೊಡಕುಗಳ ಬಗ್ಗೆ ಮುಂದಿನ ನಿಗಮದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದ ಕಾವೇರಿ ಭವನದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್)ದ ಡಿಪ್ಲೊಮಾ ಎಂಜಿನಿಯರ್ ಅಸೋಸಿಯೇಷನ್ ಸೋಮವಾರ ಹಮ್ಮಿಕೊಂಡಿದ್ದ ತಾಂತ್ರಿಕ ದಿನಚರಿ ಯಲ್ಲಿ ಮಾತನಾಡಿದ ಅವರು, “ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಪ್ಲೊಮಾ ಎಂಜನಿಯರ್‌ಗಳ ಮುಂಬಡ್ತಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು,” ಎಂದರು.
2,500 ಕೋಟಿ ರೂ. ಬಾಕಿ: ರಾಜ್ಯದಲ್ಲಿ ಉಂಟಾದ ತೀವ್ರ ಬರದಿಂದ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಿಗೆ ಗ್ರಾಹಕರು ಪಾವತಿಸಬೇಕಿದ್ದ 2,500 ಕೋಟಿ ರೂ. ಬಾಕಿ ಇದೆ. ಒಂದು ಕಡೆ ಕೈಗಾರಿಕೆಗಳಿಂದ ವಿದ್ಯುತ್ ಬೇಡಿಕೆ ಕಡಿಮೆಯಾದರೂ ಲಾಭ ಹರಿದುಬರುತ್ತಿದೆ.
ಆದರೆ, ರಾಜ್ಯದಲ್ಲಿ ಕೃಷಿ ಕ್ಷೇತ್ರದಿಂದ ಹೆಚ್ಚಿನ ಬೇಡಿಕೆ ಇದೆ. ಇಷ್ಟಿದ್ದರೂ ಉತ್ತಮ ಸೇವೆ ನೀಡಲಾಗುತ್ತಿದೆ ಎಂದು ಹೇಳಿದರು. ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ರವಿಕುಮಾರ್, ಕೆಪಿಟಿಸಿಎಲ್ ನಿರ್ದೇಶಕರಾದ ಡಾ.ಅದಿತಿ ರಾಜನ್, ಆರ್. ಶ್ರೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.