ಸಿಎಂ ಜತೆ ಎಲಿವೇಟೆಡ್ ಕಾರಿಡಾರ್ ಕುರಿತ ಚರ್ಚೆ
Team Udayavani, Feb 20, 2020, 3:07 AM IST
ಬೆಂಗಳೂರು: ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದ ಒಂದು ಮೂಲೆಯಿಂದ ಮತ್ತೂಂದು ಮೂಲೆಗೆ ಸಂಪರ್ಕ ಕಲ್ಪಿಸುವ 87 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಲು ನಗರದ ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಆಶ್ವತ್ಥನಾರಾಯಣ ನೇತೃತ್ವದಲ್ಲಿ ವಿಕಾಸ ಸೌಧದ ಅವರ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರ ಸಭೆ ನಡೆಯಿತು. ಯೋಜನೆಯ ನೀಲಿನಕ್ಷೆ ಸಿದ್ಧಪಡಿಸಿರುವ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಯೋಜನೆ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ನಮ್ಮ ಮೆಟ್ರೊ ಮಾದರಿಯಲ್ಲೇ ಎಲಿವೇಟೆಡ್ ಕಾರಿಡಾರನ್ನೂ ವಿವಿಧ ಹಂತ ಗಳಲ್ಲಿ ನಿರ್ಮಾಣ ಮಾಡಬೇಕಾಗಿದೆ. ಹೀಗಾಗಿ ಕನಿಷ್ಠ ಮೊದಲ ಹಂತದ ಕಾಮಗಾರಿಗಳಿಗೆ ಈ ಸಲದ ಬಜೆಟ್‌ನಲ್ಲಿ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಒಟ್ಟು 87 ಕಿ.ಮೀ ಉದ್ದದ ಎಲಿ ವೇಟೆಡ್ ಕಾರಿಡಾರ್‌ಗೆ ಅಂದಾಜು 26 ಸಾವಿರ ಕೋಟಿ ರೂಪಾಯಿ ಬೇಕಾಗು ತ್ತದೆ. ಒಮ್ಮೆಲೇ ಅಷ್ಟೊಂದು ಹಣ ಹೊಂದಿಸುವುದು ಕಷ್ಟ ಆಗುತ್ತದೆ. ಹೀಗಾಗಿ ಮೊದಲ ಹಂತದಲ್ಲಿ ಕನಿಷ್ಠ ಪೂರ್ವ- ಪಶ್ಚಿಮ (ಕೆ.ಆರ್.ಪುರ- ಯಶ ವಂತಪುರ) ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿದ್ದು, ಇದಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಒದಗಿಸುವುದಕ್ಕೆ ಮನವಿ ಮಾಡಲು ಶಾಸಕರು ನಿರ್ಧರಿಸಿದರು.
ಮೊದಲ ಹಂತದ ಕಾಮಗಾರಿಗೆ 9,300 ಕೋಟಿ ರೂಪಾಯಿ ಬೇಕಾಗುತ್ತದೆ. ಇದು ಕೆ.ಆರ್.ಪುರದಿಂದ ಅಲ ಸೂರು, ಕಂಟೋನ್ಮೆಂಟ್, ಮೇಖ್ರೀ ಸರ್ಕಲ್ ಮೂಲಕ ಯಶವಂತಪುರಕ್ಕೆ ಸಂಪರ್ಕ ಕಲ್ಪಿಸಲಿದೆ. 29 ಕಿ.ಮೀ ಉದ್ದದ ಈ ಮಾರ್ಗವು ಆರು ಪಥದಲ್ಲಿ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸಭೆಯ ಗಮನಕ್ಕೆ ತಂದರು.
ಇದರ ನಂತರ ಮೂರು ಹಂತಗಳಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು. ಅಂದಾಜು ಮುಂದಿನ 10 ವರ್ಷಗಳ ಕಾಲ ಕಾಮಗಾರಿ ನಡೆಯ ಲಿದೆ. ಎಲಿವೇಟೆಡ್ ಕಾರಿಡಾರ್ ಕೆಲವು ಕಡೆ ಬಹು ಅಂತಸ್ತಿನಲ್ಲಿ ಇರುತ್ತದೆ. ಭೂಸ್ವಾಧೀನಕ್ಕೇ ಸುಮಾರು 10 ಸಾವಿರ ಕೋಟಿ ರೂ. ಬೇಕಾಗಬಹುದು. ಇದನ್ನು ಆದಷ್ಟು ಕಡಿಮೆ ಮಾಡಿ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಕಾರಿಡಾರ್ ನಿರ್ಮಾಣದ ನಂತರ ನಗರದ ಒಂದು ಭಾಗದಿಂದ ಮತ್ತೂಂದು ಭಾಗಕ್ಕೆ ಅರ್ಧ ಗಂಟೆಯಲ್ಲಿ ತಲುಪಬಹುದು. ಇದರಿಂದ ನಗರದ ಕೇಂದ್ರ ಭಾಗ ದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಬಹುದು ಎಂದು ಅವರು ವಿವರಿಸಿದರು.
ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹೊರವಲಯದ 120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 1,400 ಕೋಟಿ ಬೇಕಾಗಿದ್ದು, ಇದಕ್ಕೆ ಲೋಕೋಪ ಯೋಗಿ ಇಲಾಖೆಯಿಂದ ಹಣ ಪಡೆ ಯುವ ಸಂಬಂಧ ಚರ್ಚಿಸಲಾಯಿತು. ಈ ಸಂಬಂಧ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಚರ್ಚಿಸುವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಚಿವರಾದ ಎಸ್.ಟಿ. ಸೋಮಶೇಖರ್. ಕೆ.ಗೋಪಾಲಯ್ಯ, ಬೈರತಿ ಬಸವರಾಜ್, ಶಾಸಕರಾದ ಅರ ವಿಂದ ಲಿಂಬಾವಳಿ, ಎಸ್ ಆರ್.ವಿಶ್ವನಾಥ, ಉದಯ್ ಗರುಡಾಚಾರ್, ಎಸ್.ರಘು, ಎಲ್.ಎ.ರವಿಸುಬ್ರಹ್ಮಣ್ಯ, ಎಂ.ಸತೀಶ್ ರೆಡ್ಡಿ ಮತ್ತಿತರರು ಹಾಜರಿ ದ್ದರು. ಅನರ್ಹ ಶಾಸಕ ಮುನಿರತ್ನ ಕೂಡ ಸಭೆಯಲ್ಲಿ ಪಾಲ್ಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.