ಶಾಲೆಗೆ ಭೂಮಿ ನೀಡುವ ಕುರಿತು ಸಿಎಂ ಜತೆ ಚರ್ಚೆ


Team Udayavani, Sep 23, 2019, 3:05 AM IST

shalege

ಬೆಂಗಳೂರು: ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆ ನಿರ್ಮಿಸಲು ಬಿಲ್ಲವ ಅಸೋಸಿಯೇಶನ್‌ಗೆ ಎರಡು ಎಕರೆ ಭೂಮಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಬಿಲ್ಲವ ಅಸೋಸಿಯೇಶನ್‌ ಭಾನುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ದೇವಕಿ ಆನಂದ ಸುವರ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಮಕ್ಕಳ ಶಿಕ್ಷಣಕ್ಕಾಗಿ ಶಾಲೆ, ಹಾಸ್ಟೆಲ್‌ ನಿರ್ಮಾಣಕ್ಕೆ ಭೂಮಿ ಹಾಗೂ ನಾರಾಯಣ ಗುರುಗಳ ಹೆಸರಿನಲ್ಲಿ ಈಡಿಗ, ಬಿಲ್ಲವ ಸಮಾಜದ 26 ಉಪಜಾತಿಗಳನ್ನು ಒಳಗೊಂಡಂತೆ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೇಡಿಕೆ ಇಡಲಾಗುವುದು ಎಂದು ತಿಳಿಸಿದರು. ಬಿಲ್ಲವ ಸಮುದಾಯವನ್ನು 2ಎ ಪ್ರವರ್ಗದಿಂದ ಪ್ರವರ್ಗ 1ಕ್ಕೆ ಸೇರಿಸಲು ಗಮನ ಸೆಳೆಯಲಾಗುವುದು. ಇದರಿಂದ ಆರ್ಥಿಕ ಮಿತಿ ಇರುವುದಿಲ್ಲ. ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷ ಎಂ.ವೇದಕುಮಾರ್‌ ಮಾತನಾಡಿದರು. ಇದೇ ವೇಳೆ ಬಿಲ್ಲವ ಭವನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಬಿ.ಕೇಶವ ಪೂಜಾರಿ, ರಾಜೇಶ್‌ ಕುಮಾರ್‌, ಬಿ.ಎಂ. ಉದಯ ಕುಮಾರ್‌, ಹೋಟೆಲ್‌ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಟಿ.ಸದಾಶಿವ ಕರ್ಕೇರ, ಎಂ.ರಾಜು, ಗಣೇಶ್‌ ಪೂಜಾರಿ, ಗೋವಿಂದ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 70 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಅರಕೆರೆ ವಾರ್ಡ್‌ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ, ನಂದಿನಿ ಲೇಔಟ್‌ ವಾರ್ಡ್‌ ಸದಸ್ಯ ರಾಜೇಂದ್ರ ಕುಮಾರ್‌, ಬಿಲ್ಲವ ಅಸೋಸಿಯೇಶನ್‌ ಉಪಾಧ್ಯಕ್ಷ ಕೇಶವ ಪೂಜಾರಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಕೋಶಾಧಿಕಾರಿ ಮಾಚ ಬಿಲ್ಲವ, ಜತೆ ಕಾರ್ಯದರ್ಶಿ ರಾಜೇಶ್‌ ಕುಮಾರ್‌, ಸಂಘಟನಾ ಕಾರ್ಯದರ್ಶಿ ಬಿ.ಎಂ.ಉದಯ ಕುಮಾರ್‌, ಸಂಘಟನೆಯ ವಿದ್ಯಾರ್ಥಿ ವೇತನ ಸಮಿತಿ ಅಧ್ಯಕ್ಷ ಪಿ.ಕೆ. ರತ್ನಾಕರ, ಪೂಜಾ ಸಮಿತಿ ಅಧ್ಯಕ್ಷ ಯು.ಸಂತೋಷ್‌ ಬಂಗೇರ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಒಂದೇ ಜಾತಿ, ಒಂದೇ ಕುಲ: ಪುರಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ಆಯೋಜಿಸಿದ್ದ ನಾರಾಯಣ ಗುರು ಜಯಂತಿಯಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌, ಶೂದ್ರರಿಗೆ ದೇವಸ್ಥಾನ ಒಳಪ್ರವೇಶಕ್ಕೆ ನಿರ್ಬಂಧ ಇತ್ತು. ಇದರ ವಿರುದ್ಧ ನಾರಾಯಣಗುರುಗಳು ಅಂದು ಸಿಡಿದೆದ್ದರು. ಪ್ರಸ್ತುತ ದೇಶದಲ್ಲಿ ಸದ್ದು ಮಾಡುತ್ತಿರುವ “ಒಂದೇ ದೇಶ, ಒಂದೇ ಚುನಾವಣೆ, ಒಂದೇ ಶಿಕ್ಷಣ’ ಎಂಬ ಆಶಯವನ್ನು ಆಗಿನ ಕಾಲದಲ್ಲೇ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಕುಲ ಎಂದು ಕರೆ ನೀಡಿದ್ದರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗುರುಕೃಪಾ ಆಶ್ರಮದ ವಿಖ್ಯಾತನಂದ ಸ್ವಾಮೀಜಿ, ರಾಜಮಂಡ್ರಿ ಸಂಸದ ಮಾರಗಾನಿ ಭರತ್‌, ಬಹುಭಾಷಾ ನಟ ಸುಮನ್‌, ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.