ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೋಚನೀಯ

ಕಸ ವಿಂಗಡಣೆ ಪ್ರಮಾಣದ ಬಗ್ಗೆ ಪಾರದರ್ಶಕ ಮಾಹಿತಿ

Team Udayavani, Sep 15, 2020, 11:51 AM IST

ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೋಚನೀಯ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾಲಿಕೆ ವ್ಯಾಪ್ತಿಯ 85ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ಒಟ್ಟಾರೆ ಕಸದಲ್ಲಿ ಶೇ. 1 ಪ್ರಮಾಣದಷ್ಟು ಕಸವನ್ನು ಮಾತ್ರ ಹಸಿ ಮತ್ತು ಒಣಕಸ ಎಂದು ವಿಂಗಡಣೆ ಮಾಡಲಾಗುತ್ತಿದೆ.

ಕಸ ವಿಂಗಡಣೆ ಪ್ರಮಾಣ (ಸ್ಕೋರ್‌) ಈ ವಾರ್ಡ್‌ ಗಳಲ್ಲಿ ಕೇವಲ ಒಂದು ಪ್ರಮಾಣಕ್ಕೆ ಇಳಿದಿರುವುದು ನಗರದಲ್ಲಿ ಕಸ ವಿಂಗಡಣೆ ಪ್ರಮಾಣ ಇಳಿಜಾರಿಗೆ ಇಳಿದಿರುವುದು ಸಾಬೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಕಸವಿಂಗಡಣೆಗೆ ಆದ್ಯತೆ ನೀಡದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಪಾಲಿಕೆ ಮುಂದಾಗಿದೆ. ನಗರದಲ್ಲಿ ಕಸ ವಿಂಗಡಣೆ ಪ್ರಮಾಣ ಹಾಗೂ ಪಾಲಿಕೆಯ ಹಸಿಕಸ ಸಂಸ್ಕರಣಾ ಘಟಕಗಳಿಗೆ ಎಷ್ಟು ತ್ಯಾಜ್ಯ ಹೋಗುತ್ತಿದೆ ಎಂದು ಪ್ರಗತಿ ಪರಿಶೀಲನೆ ಮಾಡಲಾಗಿದ್ದು, ಜುಲೈ ತಿಂಗಳಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ವಾರ್ಡ್‌ಗಳಲ್ಲಿ ಸಂಗ್ರಹವಾದಕಸದ ಪ್ರಮಾಣ, ಕಸ ವಿಂಗಡಣೆ, ಕಸ ವಿಲೇವಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹಾಗೂ ದಂಡಪ್ರಮಾಣ ಎಲ್ಲವನ್ನೂ ಪರಿಶೀಲನೆ ಮಾಡಿ ಎಲ್ಲ  ವಾರ್ಡ್‌ ಗಳಿಗೂ ರ್‍ಯಾಂಕ್‌ ನೀಡಲಾಗಿದೆ. ಇದರಲ್ಲಿ ಹಲವು ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಪ್ರಮಾಣ ಶೋಚನೀಯ ಸ್ಥಿತಿಗೆ ತಲುಪಿರುವುದು ಸ್ಪಷ್ಟವಾಗಿದೆ.

ನಗರದ 35ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಶೂನ್ಯಪ್ರಮಾಣಕ್ಕೆ ಇಳಿದಿದ್ದು, 80ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಶೇ..1 ಪ್ರಮಾಣಕ್ಕೆ,32 ವಾರ್ಡ್‌ಗಳಲ್ಲಿ ಶೇ.1 ಪ್ರತಿಶತಕಸವಿಂಗಡಣೆ ಹಾಗೂ 11 ವಾರ್ಡ್‌ಗಳಲ್ಲಿ ಶೇ. 2 ಪ್ರತಿಶತ ಕಸ ವಿಂಗಡಣೆಯಾಗುತ್ತಿದೆ. ಇನ್ನು ಹಲವು ವಾರ್ಡ್‌ಗಳು ಕಸ ವಿಂಗಡಣೆಯಲ್ಲಿ ಶೇ.10ಕ್ಕಿಂತ ಹೆಚ್ಚು ಮುಂದಕ್ಕೆ ಹೋಗಿಲ್ಲ.

ಪಾರದರ್ಶಕತೆ ಪ್ರದರ್ಶಿಸಿದ ಪಾಲಿಕೆ: ಬಿಬಿಎಂಪಿ ಇದೇ ಮೊದಲ ಬಾರಿಗೆ ನಗರದ ಯಾವ ವಾರ್ಡ್‌ ನಲ್ಲಿ ಎಷ್ಟು ಕಸ ಸಂಗ್ರಹವಾಗುತ್ತಿದೆ. ಎಷ್ಟು ಕಸ ಸಂಸ್ಕರಣೆ ಮಾಡುತ್ತಿದೆ. ಯಾವ ವಾರ್ಡ್‌ನಲ್ಲಿ ಶೂನ್ಯ ಪ್ರಮಾಣದ ಕಸ ವಿಂಗಡಣೆ ಆಗುತ್ತಿದೆ ಎಂಬ ಸಂಪೂರ್ಣ ಮಾಹಿತಿ ಪ್ರಕಟಿಸುವ ಮೂಲಕ ಪಾರದರ್ಶಕತೆ ಪ್ರದರ್ಶಿಸಿದೆ. ಈ ಮೂಲಕ ಸುಧಾರಣೆಗೆ ಮುಂದಾಗಿದೆ. ಆದರೆ, ಇದು ಯಾವ ಪ್ರಮಾಣದಲ್ಲಿಕಾರ್ಯರೂಪಕ್ಕೆ ಬರಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

38 ವಾರ್ಡ್‌ಗಳಲ್ಲಿ ಹೊಸ ಮಾದರಿ: ನಗರದ 38 ವಾರ್ಡ್‌ಗಳಲ್ಲಿ ಪ್ರತ್ಯೇಕ ಹಸಿಕಸ ಸಂಗ್ರಹಕ್ಕೆ ಈಗಾಗಲೇ ಟೆಂಡರ್‌ ನೀಡಲಾಗಿದ್ದು, ಸೆ.15ರ ಒಳಗೆ ಕೆಲಸಪ್ರಾರಂಭಿಸಲುಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ಒಣತ್ಯಾಜ್ಯ ಯಾರು ಸಂಗ್ರಹ ಮಾಡಬೇಕು ಎನ್ನುವ ಪಟ್ಟಿ ಇರುವುದರಿಂದ ಆ ಆಧಾರದ ಮೇಲೆ ಹಸಿ ಹಾಗೂ ಒಣಕಸ ವಿಂಗಡಣೆಶೀಘ್ರ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ನಗರದಲ್ಲಿಕಸ ವಿಂಗಡಣೆ ಚಿತ್ರಣ :  ನಗರದಲ್ಲಿ ಯಾವ ವಾರ್ಡ್‌ನಲ್ಲಿ ಎಷ್ಟು ಕಸ ವಿಂಗಡಣೆ ಆಗುತ್ತಿದೆ ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದ್ದು,ಇದನ್ನು ಸರಿಪಡಿಸಲು ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ) ರಂದೀಪ್‌ ತಿಳಿಸಿದರು. ನಗರದಲ್ಲಿ ಹಸಿಕಸ ಹಾಗೂ ಒಣಕಸ ವಿಂಗಡಣೆ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ. ಕಸ ವಿಂಗಡಣೆ ಮೇಲ್ವಿಚಾರಣೆ ಲೋಪ ವೆಸಗುವ ಅಧಿಕಾರಿಗಳಿಗೆ ನೋಟಿಸ್‌ ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.