ಬಂಡಾಯ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, May 5, 2018, 11:41 AM IST
ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ಪ್ರಕರಣದಲ್ಲಿ ಮೇ 7ರೊಳಗೆ ತೀರ್ಪು ನೀಡುವಂತೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ.
ಶುಕ್ರವಾರ ಮೇಲ್ಮನವಿ ಅರ್ಜಿಗಳ ಕುರಿತು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾ.ಎಸ್.ಸುನಿಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಸ್ಪೀಕರ್ ಪರ ವಕೀಲರು ವಾದಿಸಿ, ಶಾಸಕರ ಕುರಿತ ದೂರುಗಳ ಕುರಿತ ತೀರ್ಪಿನ ಪರಮಾಧಿಕಾರ ಸ್ಪೀಕರ್ಗೆ ಸೇರಿದ್ದು. ಈ ವಿಚಾರದಲ್ಲಿ ಸ್ಪೀಕರ್ಗೆ ನಿರ್ದೇಶಿಸುವ ಅಧಿಕಾರ ಹೈಕೋರ್ಟ್ಗೆ ಇಲ್ಲ ಎಂದು ಪುನರುತ್ಛರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಸಕ್ತ ಶಾಸನಸಭೆಯ ಅಧಿಕಾರಾವಧಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ, ತೀರ್ಪು ಪ್ರಕಟಿಸುವುದು ಮುಖ್ಯವಾಗಬಹುದು ಎಂದು ಹೇಳಿತು. ಅಲ್ಲದೆ, ಯಾವಾಗ ನೀಡಲಾಗುತ್ತದೆ ಎಂದು ಪ್ರಶ್ನಿಸಿತು. ಮೇಲ್ಮನವಿ ಕುರಿತ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು.
ಜೆಡಿಎಸ್ನ ಏಳು ಮಂದಿ ಬಂಡಾಯ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ನೀಡಲಾಗಿದ್ದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ಸ್ಪೀಕರ್ಗೆ ನಿರ್ದೇಶಿಸಿದ್ದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ, ಬಂಡಾಯ ಶಾಸಕರಾದ ಜಮೀರ್ ಅಹಮದ್, ರಮೇಶ್ ಬಂಡಿಸಿದ್ದೇಗೌಡ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.