![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 19, 2020, 3:07 AM IST
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ಕಾಯಂ ಉದ್ಯೋಗಿಗಳಾಗಿರುವ 60 ಜನ ಪೌರಕಾರ್ಮಿಕರಿಗೆ ಪೌರಕಾರ್ಮಿಕರ “ಗೃಹಭಾಗ್ಯ’ಯೋಜನೆಯಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ವತಿಯಿಂದ ನಿರ್ಮಿಸಿರುವ ಮನೆಗಳ (ಫ್ಲ್ಯಾಟ್)ಗಳ ಹಕ್ಕುಪತ್ರವನ್ನು ಮೇಯರ್ ಎಂ.ಗೌತಮ್‌ಕುಮಾರ್ ಫಲಾನುಭವಿಗಳಿಗೆ ಸೋಮವಾರ ಮಲ್ಲೇಶ್ವರದ ಐಪಿಪಿ ಕೇಂದ್ರದಲ್ಲಿ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್, ಬಿಬಿಎಂಪಿ 400 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಬಿಡಿಎ ಆಲೂರಿನಲ್ಲಿ ಫ್ಲ್ಯಾಟ್ ನಿರ್ಮಾಣ ಮಾಡಿದೆ. ಈ ಪೈಕಿ ಸದ್ಯ ಪಾಲಿಕೆಯ 272 ಅರ್ಹ ಫಲಾನುಭವಿಗಳನ್ನು ಗುರುತಿಸ ಲಾಗಿದೆ. ಪಶ್ಚಿಮ ವಲಯದಲ್ಲಿ 89 ಫಲಾನುಭವಿಗಳಿಗೆ ಫ್ಲ್ಯಾಟ್ ಮಂಜೂರಾಗಿದ್ದು, ಮೊದಲ ಹಂತದಲ್ಲಿ 60 ಫಲಾನು ಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ ಎಂದು ಹೇಳಿದರು.
ರಾಜ್ಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ 2014-15ನೇ ಸಾಲಿನ ಬಜೆಟ್‌ನಲ್ಲಿ 25 ಕೋಟಿ, 2015-16ರಲ್ಲಿ 50 ಕೋಟಿ ಹಂಚಿಕೆ ಮಾಡಲಾಗಿದೆ.
ಒಂದು ಫ್ಲ್ಯಾಟ್‌ಗೆ 9ಲಕ್ಷ ರೂ. ವೆಚ್ಚವಾಗಿದ್ದು, ಪೌರಾಡಳಿತ ನಿರ್ದೇಶನಾಲಯ 6ಲಕ್ಷ ಹಾಗೂ ಬಿಬಿಎಂಪಿ 3 ಲಕ್ಷ ವೆಚ್ಚ ಮಾಡಿದೆ ಎಂದು ಮಾಹಿತಿ ನೀಡಿದರು. ಉಪ ಮೇಯರ್ ರಾಮ ಮೋಹನ್‌ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು.ಜಿ, ವಲಯ ವಿಶೇಷ ಆಯುಕ್ತ ಬಸವರಾಜು, ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ್ ಮತ್ತಿತರರಿದ್ದರು.
ಮಾತಿನ ಚಕಮಕಿ: ಫಲಾನುಭವಿಗಳಿಗೆ ಫ್ಲ್ಯಾಟ್‌ಗಳ ಹಕ್ಕುಪತ್ರ ವಿತರಣೆ ವೇಳೆ ಪೌರಕಾರ್ಮಿಕರ ಸಂಘಟನೆ ಪದಾಧಿಕಾರಿಗಳನ್ನು ಸ್ವಾಗತಿಸಲಿಲ್ಲ ಎಂದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮೇಯರ್ ಮುಂದೆಯೇ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಮೇಯರ್, ಪರಿಸ್ಥಿತಿ ತಿಳಿಗೊಳಿಸಿ, ಕಾರ್ಯಕ್ರಮ ಮುಂದುವರಿಯಲು ಅನುವು ಮಾಡಿಕೊಟ್ಟರು.
ಯಾವ ಮಾನದಂಡದ ಮೇಲೆ ಫ್ಲ್ಯಾಟ್?: ಕಾಯಂ ಪೌರಕಾರ್ಮಿಕರು 10 ರಿಂದ 15 ವರ್ಷಗಳವರೆಗೆ ಸೇವೆ ಸಲ್ಲಿಸಿರಬೇಕು. ಪೌರ ಕಾರ್ಮಿಕ ಅಥವಾ ಕುಟುಂಬದವರು ಸ್ವಂತ ಮನೆ ಹೊಂದಿರಬಾರದು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಲ್ಲಿ ಅಂತಹವರನ್ನು ಆದ್ಯತೆ ಮೇಲೆ ಪರಿಗಣನೆ ಮಾಡಲಾಗುವುದು.
You seem to have an Ad Blocker on.
To continue reading, please turn it off or whitelist Udayavani.