ಮನೆ ಬಾಗಿಲಿಗೆ ತೆರಳಿ ಕನ್ನಡ ಪುಸ್ತಕ ಮಾರಾಟ
Team Udayavani, Nov 24, 2021, 10:21 AM IST
ಬೆಂಗಳೂರು: “ನಮ್ಮ ನಡೆ ಕಾಲೇಜು ಕಡೆ’ ಕಾರ್ಯಕ್ರಮ ಮೂಲಕ ವಿದ್ಯಾರ್ಥಿಗಳಿಗೆ ರಿಯಾ ಯಿತಿ ದರದಲ್ಲಿ ಪರಿಷತ್ತಿನ ಅಜೀವ ಸದಸ್ಯತ್ವ ನೀಡಿ ಕನ್ನಡ ಕಟ್ಟುವ ಕಾಯಕದಲ್ಲಿ ತೊಡಗಿಸಿ ಕೊಳ್ಳಲಾಗುವುದು. ಇದು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 11ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ.ಪ್ರಕಾಶ ಮೂರ್ತಿ ಅವರ ಮಾತುಗಳು.
ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ “ಉದಯವಾಣಿ’ಗೆ ಸಂದರ್ಶನ ನೀಡಿದ ಅವರು, ಐಟಿಬಿಟಿ, ಪದವಿ ಕಾಲೇಜು ಮತ್ತು ಗಾರ್ಮೆಂಟ್ಸ್‌ಗಳಿಗೆ ತೆರಳಿ ಕನ್ನಡ ಭಾಷೆ ಬಗ್ಗೆ ಆಸಕ್ತಿ ಹೊಂದಿರುವವರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿಕೊಳ್ಳುವ ಯೋಜನೆ ರೂಪಿಸಿವುದಾಗಿಯೂ ಹೇಳಿದರು.
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿ ಸಾರಥ್ಯ ವಹಿಸಿದ್ದೀರಿ, ನಿಮ್ಮ ಮುಂದಿನ ರೂಪುರೇಷೆಗಳು ಹೇಗಿರಲಿವೆ?
“ಕನ್ನಡ ಸಂವರ್ಧನ ನಿಧಿ’ ಸ್ಥಾಪನೆ ಮಾಡಿ ಅದರ ಮೂಲಕ ಪರಿಸರ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ “ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ’ ಅವರ ಹೆಸರಿನಲ್ಲಿ ಪ್ರಶಸ್ತಿ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ “ಜಿ.ಎಸ್.ಶಿವರುದ್ರಪ್ಪ’ ಅವರ ಹೆಸರಿನಲ್ಲಿ ಪ್ರಶಸ್ತಿ, ಸಾಮಾಜಿಕ ನ್ಯಾಯಕ್ಕಾಗಿ ದುಡಿದವರಿಗಾಗಿ “ದೇವರಾಜ ಅರಸು’ ಹೆಸರಿನಲ್ಲಿ, ಸಮಾಜ ವಾದಿ ಚಳವಳಿ ಮತ್ತು ಚಿಂತನೆಗಳಲ್ಲಿ ತೊಡಗಿದವರಿಗೆ “ಶಾಂತವೇರಿ ಗೋಪಾಲಗೌಡ’ ಹೆಸರಿನಲ್ಲಿ ಪ್ರಶಸ್ತಿ, ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡವರಿಗೆ “ಅನಕೃ’ ಹೆಸರಿನಲ್ಲಿ ಪ್ರಶಸ್ತಿ, ಜಾನಪದ ಕ್ಷೇತ್ರದಲ್ಲಿ ಹೆಸರು ಮಾಡಿದವರಿಗೆ “ಎಸ್.ಕೆ.ಕರೀಂಖಾನ್’ ಹೆಸರಿನಲ್ಲಿ, ಸಂಶೋಧನಾ ಕ್ಷೇತ್ರದಲ್ಲಿ ಹೆಸರು ಮಾಡಿದವರಿಗೆ “ಎಂ. ಎಂ.ಕಲಬುರಗಿ’ಅವರ ಹೆಸರಿನಲ್ಲಿ ಜತೆಗೆ ಸಂಘಟನೆ ಮತ್ತು ಸೇವೆ ಮಾಡಿದವರಿಗೆ “ಜಿ.ನಾರಾಯಣ’ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಗುರಿ ಹೊಂದಿದ್ದೇನೆ.
ನಿಮ್ಮ ಆಡಳಿತ ಅವಧಿಯಲ್ಲಿ ಪರಿಷತ್ತಿನ ಸ್ವರೂಪ ಹೇಗಿರಲಿದೆ?
ಇನ್ನೊಂದು ತಿಂಗಳಲ್ಲಿ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಷತ್ತಿನ ಘಟಕ ಸ್ಥಾಪನೆ ಮಾಡುತ್ತೇನೆ.ಆ ಘಟಕಗಳಲ್ಲಿ ಅಧ್ಯಕ್ಷರನ್ನು ನೇಮಕ ಮಾಡುವ ಸಂದರ್ಭದಲ್ಲಿ ಅಪ್ಪಟ ಕನ್ನಡಪರ ಚಿಂತನೆ ಇರುವವರಿಗೆ ಮಣೆಹಾಕುತ್ತೇನೆ.
ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಹೇಳುವುದಾದರೆ?
“ಕನ್ನಡ ಸಂವರ್ಧನ ನಿಧಿ’ ಮೂಲಕ ಕನ್ನಡ ಕಾಯಕಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತೇನೆ. ಕಾರ್ಪೋರೇಟ್ ವಲಯದವರ ಮನವೊಲಿಸಿ ಸಾಮಾಜಿಕ ಹೊಣೆಗಾರಿಕೆ ನಿಧಿ ಪಡೆದು ಆ ಮೂಲಕ ಕನ್ನಡ ಪುಸ್ತಕಗಳನ್ನು ಪ್ರಕಟ ಮಾಡುತ್ತೇನೆ. ನಾನು ತಂಡವನ್ನು ಕಟ್ಟಿಕೊಂಡು ಪ್ರತಿ ವಿಧಾನ ಸಭಾ ಕ್ಷೇತ್ರಗಳಲ್ಲಿ ತಿಂಗಳಿಗೊಮ್ಮೆ ಮನೆಬಾಗಿಲಿಗೆ ಹೋಗಿ ಪುಸ್ತಕಗಳನ್ನು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದೇನೆ.
ಬೆಂಗಳೂರಿನಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ ಎಂಬ ಮಾತಿದೆ.ಬೆಂ.ನಗರ.ಜಿಲ್ಲಾ ಕಸಾಪ ಅಧ್ಯಕ್ಷರಾಗಿ ನಿಮ್ಮ ಕನ್ನಡ ಕಟ್ಟುವಿಕೆ ಕೆಲಸ ಹೇಗಿರಲಿದೆ?
ಕನ್ನಡ ಭಾಷೆ “ಸೂರ್ಯ-ಚಂದ್ರ’ ಇವರುವ ವರೆಗೂ ಮಾಯವಾಗುವುದಿಲ್ಲ.ನಾವು ನಿರಾಭಿಮಾನಿಗಳಾಗಿದ್ದೇನೆ, ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಆದಗ್ಯೂ, ಐಟಿಬಿಟಿ, ಪದವಿ ಕಾಲೇಜು ಮತ್ತು ಗಾರ್ಮೆಂಟ್ಸ್‌ಗಳಿಗೆ ಹೋಗಿ ಕನ್ನಡದ ಬಗ್ಗೆ ಆಸಕ್ತಿ ಹೊಂದಿರುವವರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿಕೊಳ್ಳುವ ಯೋಜನೆ ರೂಪಿಸುತ್ತೇನೆ. ಜತೆಗೆ ಅಲ್ಲೇ ಒಂದು ಪರಿಷತ್ತಿನ ಕನ್ನಡ ವಿಭಾಗ ತೆರೆಯುತ್ತೇನೆ.
ಹೊಸ ಸವಾಲುಗಳೊಂದಿಗೆ ಕನ್ನಡ ಕಟ್ಟುವಿಕೆ ಕಾರ್ಯ ಹೇಗಿರಲಿದೆ?
ಯುವ ಸಮೂಹದ ಜತೆಗೆ ವಿದ್ಯುನ್ಮಾನ ಬಳಕೆ ಮಾಡಿಕೊಂಡು ಕನ್ನಡವನ್ನು ಬೆಳಗಿಸಬೇಕಿದೆ ಆ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ಹೊಸ ತಲೆಮಾರಿನ ವರನ್ನು ಹೆಚ್ಚು ಹೆಚ್ಚು ಸದಸ್ಯರನ್ನಾಗಿ ಮಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ತಲುಪಿಸು ತ್ತೇನೆ.”ನಮ್ಮ ನಡೆ ಕಾಲೇಜು ಕಡೆ’ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪರಿಷತ್ತಿನ ಅಜೀವ ಸದಸ್ಯತ್ವ ನೀಡುವ ಉದ್ದೇಶವಿದೆ.
- ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.