ಜಿಲ್ಲಾವಾರು ವಸ್ತುಸ್ಥಿತಿ ವರದಿ ನೀಡಲು ಸೂಚನೆ
Team Udayavani, May 9, 2017, 3:45 AM IST
ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಸ್ಥಿತಿಗತಿ ಹೇಗಿದೆ ಎನ್ನುವ ವರದಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸೋಮವಾರ ಇಡೀ ದಿನ ನಡೆದ ಮ್ಯಾರಾಥಾನ್ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಅಧ್ಯಕ್ಷರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿರುವ ಅವರು, ಮುಂದಿನ ಚುನಾವಣೆಗೆ ಪಕ್ಷ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕಿರುವುದರಿಂದ ಪ್ರತಿ ಜಿಲ್ಲೆಯಲ್ಲಿಯೂ ಪಕ್ಷದ ಸಂಘಟನೆ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ, ಹಾಲಿ ಶಾಸಕರ ಕಾರ್ಯ ಚಟುವಟಿಕೆ ಹಾಗೂ 2013 ರಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಕಾರ್ಯ ವೈಖರಿಯ ಬಗ್ಗೆಯೂ ಸಂಪೂಣ ಮಾಹಿತಿ ನೀಡುವಂತೆ ಜಿಲ್ಲಾಧ್ಯಕ್ಷರುಗಳಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಎಲ್ಲ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಸಧ್ಯದ ಸ್ಥಿತಿ, ಆ ಪಕ್ಷಗಳಲ್ಲಿನ ಹಾಲಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳ ಕಾರ್ಯ ವೈಖರಿ, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ನ ದೌರ್ಬಲ್ಯ ಹಾಗೂ ಶಕ್ತಿ ಏನಿದೆ ಎನ್ನುವುದನ್ನು ಕೂಲಂಕುಷ ವರದಿ ನೀಡಬೇಕು. ಅಲ್ಲದೇ, ಬಿಜೆಪಿ ಹಾಗೂ ಜೆಡಿಎಸ್ ಶಕ್ತಿ ಮತ್ತು ದೌರ್ಬಲ್ಯದ ಬಗ್ಗೆಯೂ ಮಾಹಿತಿ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವರುಗಳು ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರೊಂದಿಗೆ ನಡೆದುಕೊಳ್ಳುವ ರೀತಿಯ ಬಗ್ಗೆ ನೇರವಾಗಿಯೇ ತಮಗೆ ದೂರು ನೀಡುವಂತೆ ವೇಣುಗೋಪಾಲ ಜಿಲ್ಲಾಧ್ಯಕ್ಷರಿಗೆ ಹೇಳಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.
ಪಕ್ಷ ಬಿಡುವವರ,ಬರುವವರ ಪಟ್ಟಿ ಕೊಡಿ: 2018 ರ ಚುನಾವಣೆಗೆ ಈಗಾಗಲೇ ಸಿದ್ದತೆಗಳು ಆರಂಭವಾಗುತ್ತಿರುವುದರಿಂದ ಕೆಲವು ನಾಯಕರು, ಹಾಲಿ ಶಾಸಕರು ಪಕ್ಷ ಬಿಡುವ ಬಗ್ಗೆ ಸೂಚನೆಗಳಿದ್ದರೆ, ತಮ್ಮ ಗಮನಕ್ಕೆ ತರುವಂತೆ ವೇಣುಗೋಪಾಲ ಸೂಚಿಸಿದ್ದಾರಂತೆ, ಅಲ್ಲದೇ ಇತರ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗಲು ಆಸಕ್ತಿ ಇರುವವರ ಬಗ್ಗೆಯೂ ಮಾಹಿತಿ ನೀಡುವಂತೆ ಹೇಳಿದ್ದಾರಂತೆ. ಸ್ಥಳೀಯ ಮಟ್ಟದ ನಾಯಕರು ಪಕ್ಷ ತೊರೆಯುವವರು ಹಾಗೂ ಪಕ್ಷಕ್ಕೆ ಬರುವವರಿದ್ದರೂ ತಮ್ಮ ಗಮನಕ್ಕೆ ತರುವಂತೆ ಆದೇಶಿಸಿದ್ದಾರಂತೆ.
ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗದಲ್ಲಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಅವರು ವಿಭಾಗೀಯ ಕೇಂದ್ರದಲ್ಲಿ ಮನೆ ಮಾಡಿಕೊಂಡು ಇರಲು ಸೂಚನೆ ನೀಡಲಾಗಿದೆ. ಜಿಲ್ಲಾಧ್ಯಕ್ಷರುಗಳು ಅವರೊಂದಿಗೆ ನೇರ ಸಂಪರ್ಕದಲ್ಲಿಬೇಕು. ಅಲ್ಲದೇ ತಾವು ಪ್ರತಿ ತಿಂಗಳು 20 ದಿನ ರಾಜ್ಯದಲ್ಲಿಯೇ ವಾಸ್ತವ್ಯ ಹೂಡುವುದರಿಂದ ಏನಾದರೂ ಸಮಸ್ಯೆಗಳಿದ್ದರೆ ನೇರವಾಗಿ ಭೇಟಿ ಮಾಡಿ ಮಾಹಿತಿ ನೀಡುವಂತೆ ವೇಣುಗೋಪಾಲ ತಿಳಿಸಿದ್ದಾರೆ.
2019 ಲೋಕಸಭೆ ಚುನಾವಣೆ ಕಾಂಗ್ರೆಸ್‌ಗೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ರಾಹುಲ್ ಗಾಂಧಿ ಕರ್ನಾಟಕ ಮತ್ತು ಗುಜರಾತ್ ಚುನಾವಣೆ ಗೆಲುವಿಗೆ ಹೆಚ್ಚಿನ ಶ್ರಮ ಹಾಕುತ್ತಿದ್ದಾರೆ. ಹೀಗಾಗಿ 2018 ರ ಚುನಾವಣೆ ಗೆಲುವು ಅನಿವಾರ್ಯವಾಗಿದೆ. ಜಿಲ್ಲಾ ಘಟಕಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳು ಹಾಗೂ ವೈಯಕ್ತಿಕ ಪ್ರತಿಷ್ಠೆಗಳನ್ನು ಬದಿಗಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸುವಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಲಾಬಿ, ಬಹಿರಂಗ ಹೇಳಿಕೆಗೆ ಬ್ರೇಕ್
ಕೆಪಿಸಿಸಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕೆಂದು ಲಾಬಿ ಮಾಡದಂತೆ ವೇಣುಗೋಪಾಲ ಖಡಕ್ ಎಚ್ಚರಿಕೆ ನೀಡಿದ್ದಾರಂತೆ, ಪಕ್ಷದ ರಾಜ್ಯಾಧ್ಯಕ್ಷರು ಯಾರಾಗಬೇಕೆಂದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ಆ ವಿಷಯದಲ್ಲಿ ಪದಾಧಿಕಾರಿಗಳು ಯಾರ ಪರವಾಗಿಯೂ ಲಾಬಿ ಮಾಡುವಂತಿಲ್ಲ. ಅಲ್ಲದೇ ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಸಚಿವರು, ಶಾಸಕರು, ಸಂಸದರ ಸಭೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರು ಇಂದು ಸಚಿವರು, ಶಾಸಕರು ಹಾಗೂ ಸಂಸದರು ಮತ್ತು 2013 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸೋತವರೊಂದಿಗೆ ಸಭೆ ನಡೆಸಲಿದ್ದಾರೆ.ಮಂಗಳವಾರ ಕೂಡ ನಿರಂತರ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಪಕ್ಷದ ಪರಿಸ್ಥಿತಿ ಹಾಗೂ ಮುಂದಿನ ಚುನಾವಣೆಯ ಸಿದ್ದತೆ ಕುರಿತು ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.