ಬೆಳಗಾವಿ ರಾಜಕಾರಣಕ್ಕೆ ಡಿಕೆಶಿ ರೀ ಎಂಟ್ರಿ
Team Udayavani, Nov 24, 2018, 6:30 AM IST
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ತಲೆನೋವಾಗಿರುವ ಕಬ್ಬು ಬೆಳೆಗಾರರ ಬಾಕಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಆಡಳಿತದಲ್ಲಿ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ “ರಂಗಪ್ರವೇಶ’ ಮಾಡಿದ್ದಾರೆ.
ಸಕ್ಕರೆ ಕಾರ್ಖಾನೆ ಮಾಲೀಕರಿಂದ ವಸೂಲಾಗಬೇಕಿರುವ ಬಾಕಿ ಪಾವತಿಗಾಗಿ ಹತ್ತು ದಿನಗಳಿಂದ ಧರಣಿ ನಡೆಸುತ್ತಿದ್ದ ರೈತರ ಮನವೊಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರ ಕೈಲಿ ಆಗದ ಕೆಲಸ ತಾನು ಮಾಡಿ ತೋರಿಸಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ.
ಈ ಮೂಲಕ “ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ಗೆ ಏನು ಕೆಲಸ’ ಎಂದು ಪ್ರಶ್ನಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ರಾಜಕೀಯವಾಗಿಯೂ ಟಾಂಗ್ ನೀಡಿದ್ದಾರೆ.
ರೈತರ ಸಭೆಯಲ್ಲೇ ನಾಲ್ಕು ವರ್ಷಗಳಿಂದ ರಮೇಶ್‌ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ರೈತರಿಗೆ ಬಾಕಿ ಕೊಟ್ಟಿಲ್ಲ ಎಂಬ ಅಂಶವೂ ಪ್ರಸ್ತಾಪವಾಗುವಂತೆ ನೋಡಿಕೊಂಡು, ರಮೇಶ್ ಜಾರಕಿಹೊಳಿ ತುಂಬಾ ಪ್ರಮಾಣಿಕರು. ರೈತರ ಬಾಕಿ ಉಳಿಸಿಕೊಂಡಿದ್ದರೆ ಖಂಡಿತವಾಗಿಯೂ ಕೊಡುತ್ತಾರೆ ಎಂದು ಕಾಳೆದಿದ್ದಾರೆ.
ಇದರಿಂದಾಗಿ ಬೆಳಗಾವಿ ಜಿಲ್ಲಾ ರಾಜಕೀಯ ಸಂಘರ್ಷ ಮತ್ತೆ ಭುಗಿಳೇಳುವ ಸಾಧ್ಯತೆಯೂ ಇದೆ. ಡಿ.ಕೆ.ಶಿವಕುಮಾರ್ ತಮ್ಮ ಸಾಮ್ರಾಜ್ಯಕ್ಕೆ ಲಗ್ಗೆ ಇಡುವುದು ಇಷ್ಟಪಡದ ಜಾರಕಿಹೊಳಿ ಸಹೋದರರು ಸರ್ಕಾರದ ವಿರುದ್ಧ ತಿರುಗಿ ಬೀಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಮುಂಬೈ ಕರ್ನಾಟಕ ಭಾಗದಲ್ಲಿ ಶುಗರ್ ಲಾಬಿ ಹಿಡಿತದಲ್ಲಿಟ್ಟುಕೊಂಡಿರುವ ಜಾರಕಿಹೊಳಿ ಸಹೋದರರಿಗೆ ರಾಜಕೀಯವಾಗಿಯೇ ತಿರುಗೇಟು ನೀಡುವ ಸಲುವಾಗಿಯೇ ಡಿ.ಕೆ.ಶಿವಕುಮಾರ್, ನೀರು ಮತ್ತು ವಿದ್ಯುತ್ ಕುರಿತ ಅಧ್ಯಯನ ನೆಪದಲ್ಲಿ ಬೆಳಗಾವಿಗೆ ಭೇಟಿ ನೀಡಿ ಧರಣಿ ನಿರತರ ರೈತರ ಜತೆ ಮಾತನಾಡಿ ಎಳನೀರು ಕೊಟ್ಟು ಧರಣಿ ಅಂತ್ಯ ಮಾಡುವಂತೆ ನೋಡಿಕೊಂಡಿದ್ದಾರೆ.
ಬಳ್ಳಾರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಕೆ ಸಮಾರಂಭದಲ್ಲಿ ಪಾಲ್ಗೊಂಡು ಅಲ್ಲಿಂದ ನೇರವಾಗಿ ಬೆಳಗಾವಿಗೆ ಹೊರಟು ರೈತರ ಧರಣಿ ಸ್ಥಳಕ್ಕೆ ತಲುಪಿಸಿ ಮಾತುಕತೆ ನಡೆಸಿರುವುದು ರಾಜಕೀಯ ವಲಯಗಳಲ್ಲಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಜಾರಕಿಹೊಳಿ ಸಹೋದರರ ಪ್ರಾಬಲ್ಯ ಹಣಿಯುವ ಸಲುವಾಗಿಯೇ ಶಿವಕುಮಾರ್ ಬೆಳಗಾವಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಡಿ.ಕೆ,ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ದೂರು ನೀಡಿ ಅವರೇಕೆ ನಮ್ಮ ಜಿಲ್ಲೆಯಲ್ಲಿ ಮೂಗು ತೂರಿಸುತ್ತಾರೆ ಎಂದು ಪ್ರಶ್ನಿಸಿದ್ದವರಿಗೆ ನಾನೂ ಸರ್ಕಾರ, ನಾನ್ಯಾಕೆ ಹೋಗಬಾರದು ಎಂದು ಹೇಳಿ ಬೆಳಗಾವಿಗೆ ಹೋದ ಡಿ.ಕೆ.ಶಿವಕುಮಾರ್ ತಮ್ಮ ತಾಕತ್ತು ಪ್ರದರ್ಶಿಸಿ ತಾನು ಟ್ರಬಲ್ ಶೂಟರ್ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.
ಮುಖ್ಯಮಂತ್ರಿಯವರು ವಿಧಾನಸೌಧಕ್ಕೆ ಮಾತುಕತೆಗೆ ಬರುವಂತೆ ಕೋರಿದರೂ ರೈತರು ಬಾರದೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಮುಂದುವರಿಸಿದ್ದರಿಂದ ಅಧಿವೇಶನ ಸಂದರ್ಭದಲ್ಲಿ ರೈತರು ಧರಣಿ ಕುಳಿತರೆ ಕಷ್ಟವಾಗಬಹುದು ಎಂಬ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಬಳ್ಳಾರಿಯಿಂದ ನೇರವಾಗಿ ಬೆಳಗಾವಿಗೆ ಹೋದರು ಎನ್ನಲಾಗಿದೆ.
ಒಟ್ಟಾರೆ, ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಬಳ್ಳಾರಿ ಉಪ ಚುನಾವಣೆ ನಂತರ ಬಲಿಷ್ಠವಾಗುತ್ತಿದ್ದು ಹೈಕಮಾಂಡ್ ಸಹ ಅವರಿಗೆ ಪ್ರಾಮುಖ್ಯತೆ ನೀಡುತ್ತಿದೆ. ಹೀಗಾಗಿಯೇ ತೆಲಂಗಾಣ ರಾಜ್ಯದ ಚುನಾವಣಾ ಉಸ್ತುವಾರಿ ವಹಿಸಿದೆ ಎಂದು ಹೇಳಲಾಗಿದೆ.
ಬೆಳಗಾವಿಯಲ್ಲಿ ಅತ್ತ ಡಿ.ಕೆ.ಶಿವಕುಮಾರ್ ರೈತರನ್ನು ಭೇಟಿ ಮಾಡಿ ಧರಣಿ ವಾಪಸ್ ತೆಗೆಸುತ್ತಿದ್ದಂತೆ ತಮ್ಮ ಜಿಲ್ಲೆಗೆ ಎಂಟ್ರಿ ಕೊಟ್ಟು ತಮ್ಮ ಕೈಲಾಗದ ಕೆಲಸ ತಾನು ಮಾಡಿದಂತೆ ಬಿಂಬಿಸಿಕೊಂಡಿದ್ದರಿಂದ ಆಕ್ರೋಶಗೊಂಡಿರುವ ಜಾರಕಿಹೊಳಿ ಸಹೋದರರು ಮತ್ತೆ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ತಮ್ಮ ಜತೆ ಸಂಪರ್ಕದಲ್ಲಿರುವ ಹದಿನೈದು ಶಾಸಕರ ಜತೆ ಗುಪ್ತ ಸಮಾಲೋಚನೆ ನಡೆಸಿದ್ದಾರೆ. ಬೆಳಗಾವಿ ವಿಧಾನಮಂಡಲ ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಆಗದಿದ್ದರೆ ಅಧಿವೇಶನಕ್ಕೆ ಗೈರು ಆಗಲು ತೀರ್ಮಾನಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
– ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.