ಡಿಕೆಶಿ ಪರ ಸಿದ್ದರಾಮಯ್ಯ ಬ್ಯಾಟಿಂಗ್
Team Udayavani, Sep 20, 2018, 6:50 AM IST
ಬೆಂಗಳೂರು: ಬಿಜೆಪಿಯ ಕೇಂದ್ರ ನಾಯಕರು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮಾಡುತ್ತಿರುವ ಆರೋಪ ಆಧಾರ ರಹಿತವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟರೇ ಬೇರೆ ಏನೂ ಗೊತ್ತಿಲ್ಲ. ಅವರು ಯಾವತ್ತೂ ಸತ್ಯ ಹೇಳಿಲ್ಲ. ಡಿ.ಕೆ.ಶಿವಕುಮಾರ್ ವಿರುದ್ಧ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ. ನಾನೂ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ಅವರ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ ಎಂದು ತಿಳಿಸಿದರು.
ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದರೆ, ಅದಕ್ಕೆ ಕೋರ್ಟ್ ಹಾಗೂ ಕಾನೂನು ಎಲ್ಲವೂ ಇದೆ. ಎಫ್ಐಆರ್ಗೂ ಚಾರ್ಜ್ಶೀಟ್ಗೂ ವ್ಯತ್ಯಾಸ ಇದೆ. ಸುಳ್ಳು ಹೇಳುವುದೇ ಬಿಜೆಪಿಯವರ ಬಂಡವಾಳವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.