‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆ ನೀಡಿ: ಅನಿವಾಸಿ ಕನ್ನಡಿಗರಲ್ಲಿ ಡಿಕೆಶಿ ಮನವಿ
Team Udayavani, Dec 13, 2022, 7:00 PM IST
ಬೆಂಗಳೂರು: ಅನಿವಾಸಿ ಕನ್ನಡಿಗರಿಂದ ಪಕ್ಷದ ಪ್ರಣಾಳಿಕೆ ‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆಗಳನ್ನು ಆಹ್ವಾನಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಕುರಿತಾದ ವಿಡಿಯೋವನ್ನು ಮಂಗಳವಾರದಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದಾರೆ.
“ಜಾಗತಿಕ ಮಟ್ಟದಲ್ಲಿ ಕನ್ನಡಿಗರು ಸೇವೆ ಸಲ್ಲಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಶ್ವದ ಅನೇಕ ನಾಯಕರು ಬೆಂಗಳೂರು ಮತ್ತು ಕರ್ನಾಟಕದ ಮುಖಾಂತರ ಭಾರತವನ್ನು ಗುರುತಿಸುತ್ತಿದ್ದಾರೆ. ಆದರೆ ಇವತ್ತು ಕರ್ನಾಟಕಕ್ಕೆ ಒಂದು ಕಳಂಕ ಕೂಡ ಬಂದಿದೆ. ಅದನ್ನು ತಪ್ಪಿಸಿ ನಮ್ಮ ರಾಜ್ಯ ಹಾಗೂ ಅಸ್ತಿತ್ವದ ಘನತೆಯನ್ನು ಕಾಪಾಡಬೇಕಿದೆ” ಎಂದು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ,
“ರಾಜ್ಯದ ಒಳಿತಿಗಾಗಿ ಹಾಗೂ ಉತ್ತಮ ಆಡಳಿತಕ್ಕಾಗಿ ಅನಿವಾಸಿ ಕನ್ನಡಿಗರು ಸಲಹೆ ನೀಡಬೇಕು. ಗ್ಲೋಬಲ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ ನಿಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು” ಎಂದವರು ವಿನಂತಿಸಿಕೊಂಡಿದ್ದಾರೆ.
ರಾಜ್ಯವು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಭಿಪ್ರಾಯ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಆಗಬೇಕಿರುವ ಕೆಲಸಕಾರ್ಯಗಳ ಕುರಿತು ಸಲಹೆ ಸೂಚನೆಯ ಜೊತೆಗೆ ರಾಜ್ಯದಲ್ಲಿ ಅಳವಡಿಸಬೇಕಿರುವ ವಿಷಯಗಳ ಕುರಿತು ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಜಗತ್ತಿನಾದ್ಯಂತ ನೆಲೆಸಿರುವ ಕನ್ನಡಿಗರಲ್ಲಿ ಕೇಳಿಕೊಂಡಿದ್ದಾರೆ .
“ಡಾ.ಜಿ.ಪರಮೇಶ್ವರ್ ಅವರು ಪ್ರಣಾಳಿಕಾ ಸಮಿತಿಯ ಅಧ್ಯಕ್ಷರಾಗಿದ್ದು, ಪ್ರಣಾಳಿಕೆಯ ಕರಡನ್ನು ಅಂತಿಮಗೊಳಿಸಲಿದ್ದಾರೆ. ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ನನಗೆ ಪ್ರತಿಯೊಂದು ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮೆಲ್ಲರ ಸಹಕಾರ, ಸಲಹೆ ಸೂಚನೆಗಳ ಅಗತ್ಯವಿದೆ. ಕರ್ನಾಟಕದ ಅಭಿವೃದ್ಧಿಗಾಗಿ ನಿಮ್ಮ ಸಲಹೆಗಳನ್ನು ಆಹ್ವಾನಿಸುತ್ತಿದ್ದೇನೆ” ಎಂದವರು ಹೇಳಿದ್ದಾರೆ.
ಪ್ರಣಾಳಿಕೆಗಾಗಿ ಜನರು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲು ಡಿ.ಕೆ ಶಿವಕುಮಾರ್ ಅವರು [email protected] ಇಮೇಲ್ ಐಡಿಯನ್ನು ಬಿಡುಗಡೆಗೊಳಿಸಿದ್ದು, ಮುಕ್ತವಾಗಿ ಇದರಲ್ಲಿ ತೊಡಗಿಸಿಕೊಳ್ಳಲು ಜನರಿಗೆ ಕರೆ ನೀಡಿದ್ದಾರೆ. “ನಮ್ಮ ಗ್ಲೋಬಲ್ ವಿಶನ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ, ಮುಂದಿನ ಭವಿಷ್ಯಕ್ಕೋಸ್ಕರ ನಿಮ್ಮ ಸಲಹೆಯನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸಲಹೆ-ಸೂಚನೆಗಳನ್ನು ವಿಡಿಯೋ, ಟೆಕ್ಸ್ಟ್ ಮೆಸೇಜ್ ಹಾಗೂ ವಿವರವಾದ ವರದಿಗಳ ಮೂಲಕ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ತಮ್ಮನ್ನು ಟ್ಯಾಗ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದು, ಈ ಮೂಲಕ ವೈಯಕ್ತಿಕವಾಗಿ ಜನರ ಸಲಹೆ-ಸೂಚನೆಗಳನ್ನು ಓದಿ, ಅಧ್ಯಯನ ಮಾಡಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರಾಮನಗರದ ರೇಷ್ಮೆ ಸೀರೆ, ಶಲ್ಯ ಕೊಡುಗೆ: ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.