ವಿದ್ಯುತ್ ಸ್ಥಗಿತಗೊಳಿಸದಿರಲು ಡಿಕೆಶಿ ಸೂಚನೆ
Team Udayavani, Mar 20, 2018, 12:09 PM IST
ಬೆಂಗಳೂರು: ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.
ರಾಜಧಾನಿ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬ ಕಾರಣಕ್ಕೆ ವಿದ್ಯುತ್ ಸ್ಥಗಿತಗೊಳಿಸಿ ಬಿಬಿಎಂಪಿ, ಜಲಮಂಡಳಿ ಮತ್ತು ಬಿಎಂಆರ್‌ಸಿಎಲ್ ಕಾಮಗಾರಿಗಳಿಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಸ್ಕಾಂನ 1206 ಫೀಡರ್‌ಗಳಿದ್ದು, ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್ ಸೇರಿದಂತೆ 12 ವಿಭಾಗಗಳ 62 ಫೀಡರ್‌ಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಇದಕ್ಕೆ ಬಿಬಿಎಂಪಿ, ಜಲಮಂಡಳಿ ಮತ್ತು ಬಿಎಂಆರ್‌ಸಿಎಲ್ ಕಾಮಗಾರಿಗಳೇ ಕಾರಣ.
ಕೆಲವಡೆ ಕಾಮಗಾರಿಗಳಿಗಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರೆ, ಇನ್ನು ಕೆಲವೆಡೆ ಕಾಮಗಾರಿಗಳಿಂದ ವಿದ್ಯುತ್ ತಂತಿ ತುಂಡಾಗಿತ್ತು. ಹೀಗಾಗಿ ಇನ್ನು ಮುಂದೆ ತುರ್ತು ಸಂದರ್ಭ ಹೊರತುಪಡಿಸಿ ಇತರೆ ಅವಧಿಯಲ್ಲಿ ಕಾಮಗಾರಿಗಳಿಗಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.