ಹಿಂದಿ ಹೇರಿಕೆಗೆ ಅವಕಾಶ ನೀಡದಿರಿ
Team Udayavani, Feb 10, 2019, 6:33 AM IST
ಬೆಂಗಳೂರು: ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳನ್ನು ಕಡೆಗಣಿಸಿ ಹಿಂದಿ ಹೇರಿಕೆಗೆ ಹವಣಿಸುತ್ತಿದು,ª ಇದಕ್ಕೆ ಅವಕಾಶ ನೀಡಬಾರದು ಎಂದು ಕನ್ನಡಪರ ಹೋರಾಟಗಾರ ರಾಮಣ್ಣ ಕೋಡಿಹೊಸಹಳ್ಳಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶನಿವಾರ ಸ್ವಾಭಿಮಾನ ಕರ್ನಾಟಕ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ಗೌಡಗೆರೆ ಮಾಯುಶ್ರೀ ಅವರ “ಮೊಳಕೆ ಕಾಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ನಡೆಯಬೇಕು ಎಂದು ಆಗ್ರಹಿಸಿದರು.
ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಬೇಕಾಗಿದ್ದ ರಾಜ್ಯ ಸರ್ಕಾರ ಪ್ರಾಥಮಿಕ ಹಂತದಲ್ಲೆ ಇಂಗ್ಲಿಷ್ ಮಾಧ್ಯಮ ತೆರೆಯಲು ಹೊರಟಿರು ಕ್ರಮ ಸರಿಯಿಲ್ಲ. ಉದ್ಯೋಗದ ನೆಪವೊಡ್ಡಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷೆ ಕಲಿಕೆಗೆ ಮುಂದಾಗಿರುವುದು ಆರೋಗ್ಯಕರ ಬೆಳವಣಿಗೆಯಲ್ಲ. ಸರ್ಕಾರ ಈ ಬಗ್ಗೆ ಆಲೋಚನೆ ಮಾಡಬೇಕಾಗಿತ್ತು ಎಂದು ಹೇಳಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ದ್ವಾರನಕುಂಟೆ ಪಾತಣ್ಣ ಮಾತನಾಡಿ, ಪ್ರತಿಭೆ ಎಂಬುವುದು ಯಾರ ಸ್ವತ್ತೂ ಅಲ್ಲ. ಆದರೆ ಪ್ರತಿಭೆ ಹೊರಹೊಮ್ಮಲು ಸೂಕ್ತವಾದ ವೇದಿಕೆಗೆ ಕಲ್ಪಿಸಬೇಕಾಗುತ್ತದೆ. ಅದನ್ನು ಕಲ್ಪಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಮತ್ತಷ್ಟು ಕೆಲಸಗಳು ನಡೆಯಬೇಕು ಎಂದರು.
ಇದೇ ವೇಳೆ ಲೇಖಕ ಗೌಡಗೆರೆ ಮಾಯುಶ್ರೀ ಅವರ ಬರಹಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಹಲವು ದಿನಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ಜತಗೆ ಹಲವು ಸಂಘ -ಸಂಸ್ಥೆಗಳು ಇವರ ಬರಹಗಳನ್ನು ಮೆಚ್ಚಿ ಗೌರವಿಸಿವೆ. ಆದರೂ, ಇಲ್ಲಿಯವರೆಗೆ ಇವರ ಒಂದೂ ಕೃತಿ ಪುಸ್ತಕ ರೂಪದಲ್ಲಿ ಬಾರದೇ ಇರುವುದಕ್ಕೆ ಕಳವಳ ವ್ಯಕ್ತಪಡಿಸಿದರು.
ಕೃತಿ ಕುರಿತು ಮಾತನಾಡಿದ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ,”ಮೊಳಕೆ ಕಾಳು’ ಕೃತಿ ಕನ್ನಡಪರ ಚಳುವಳಿ ಹಾಗೂ ದಲಿತ ಚಳುವಳಿಗಳ ಬಗ್ಗೆ ಕಟ್ಟಿಕೊಡುತ್ತದೆ. ಜತಗೆ ಚಳವಳಿಗಳು ಯಾವತ್ತೂ ಚಲನೆಯಿಂದ ದೂರವಾಗಬಾರದು ಎಂದು ತಿಳಿ ಹೇಳುತ್ತದೆ ಎಂದರು. ಲೇಖಕ ಗೌಡಗೆರೆ ಮಾಯುಶ್ರೀ, ಮಾವಳ್ಳಿ ಶಂಕರ್, ಕೆ.ಸಿ.ಶಿವರಾಂ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.