ಬೀಡಿ, ಸಿಗರೇಟು ಬಿಡಿ ಮಾರಾಟ ನಿಷೇಧ ಬೇಡ
Team Udayavani, Oct 19, 2017, 1:01 PM IST
ಬೆಂಗಳೂರು: ಬಿಡಿ ಬಿಡಿಯಾಗಿ ಬೀಡಿ, ಸಿಗರೇಟು ಮಾರಾಟ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಿಂದ ಸಣ್ಣ ಪುಟ್ಟ ವ್ಯಾಪಾರಿಗಳ ವಹಿವಾಟಿಗೆ ತೀವ್ರ ಹೊಡೆತ ಬಿದ್ದಿದ್ದು, ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಣ್ಣ ಬೀಡಿ ಸಿಗರೇಟು ಮಾರಾಟಗಾರರ ಸಂಘ ಒತ್ತಾಯಿಸಿದೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಎನ್.ಮುರಳೀಕೃಷ್ಣ, ತಂಬಾಕು ಉತ್ಪನ್ನಗಳು ಚಿಕ್ಕ ಪುಟ್ಟ ಅಂಗಡಿಗಳಲ್ಲಿ ಹೆಚ್ಚಾಗಿ ಮಾರಾಟವಾಗುತ್ತವೆ. ಅವಿದ್ಯಾವಂತರು, ಜೀವನೋಪಾಯಕ್ಕೆ ಇದನ್ನೇ ನೆಚ್ಚಿಕೊಂಡಿರುವ ಆರ್ಥಿಕವಾಗಿ ಹಿಂದುಳಿದವರಷ್ಟೇ ಹೆಚ್ಚಾಗಿ ಈ ವ್ಯಾಪಾರದಲ್ಲಿ ತೊಡಗಿದ್ದಾರೆ. ಹೀಗಿರುವಾಗ ಬಿಡಿ ಬಿಡಿಯಾಗಿ ಬೀಡಿ, ಸಿಗರೇಟು ಮಾರಾಟ ನಿಷೇಧದಿಂದ ವಹಿವಾಟಿಗೆ ಭಾರಿ ಪೆಟ್ಟು ಬಿದ್ದಿದೆ ಎಂದು ಹೇಳಿದರು.
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಸಿಗರೇಟು ಮತ್ತು ಇತರೆ ತಂಬಾಕು ಪದಾರ್ಥಗಳ ನಿಷೇಧ ಕಾಯ್ದೆ 2013ರ ಅಡಿ ಹಲವು ನಿಬಂಧನೆ ವಿಧಿಸಿರುವುದರಿಂದ ವ್ಯಾಪಾರ ನಡೆಸುವುದೇ ಕಷ್ಟವಾಗಿದೆ. ಹೀಗಿದ್ದರೂ ಕಾಯ್ದೆಯ ನಿಯಮಗಳನ್ನು ಪಾಲಿಸಲಾಗುತ್ತಿದೆ. ಮಕ್ಕಳಿಗೆ ತಂಬಾಕು ಪದಾರ್ಥ ನೀಡುತ್ತಿಲ್ಲ. ತಂಬಾಕು ನಿಷೇಧ ವಲಯದ ಬಗ್ಗೆ ಜಾಗೃತಿ ಫಲಕಗಳನ್ನು ಅಳವಡಿಸಲಾಗಿದ್ದು ಯಾವುದೇ ಕಾನೂನು ಉಲ್ಲಂಘನೆಯಾಗುತ್ತಿಲ್ಲ. ಹೀಗಿದ್ದರೂ ಇನ್ನಷ್ಟು ನಿರ್ಬಂಧ ಹೇರುವುದು ಸರಿಯಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಲಕ್ಷಾಂತರ ಮಂದಿ ಇದೇ ವ್ಯಾಪಾರ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಸರ್ಕಾರದ ಆದೇಶದಿಂದ ವಹಿವಾಟು ತೀವ್ರ ಕುಸಿಯಲಿದೆ. ಹಾಗಾಗಿ ಕೂಡಲೇ ಆದೇಶ ಹಿಂಪಡೆದು ಸಣ್ಣ ವ್ಯಾಪಾರಿಗಳು ವಹಿವಾಟು ಮುಂದುವರಿಸಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ಸದ್ಯದಲ್ಲೇ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.