ಬಾರ್‌ಗಳಲ್ಲಿ ಹಸ್ತಕ್ಷೇಪ ಬೇಡ


Team Udayavani, Nov 24, 2018, 11:40 AM IST

bargalalli.jpg

ಬೆಂಗಳೂರು: ಕಾನೂನು ಬಾಹಿರವಾಗಿದ್ದರೆ ಕ್ರಮ ಕೈಗೊಳ್ಳಿ. ಆದರೆ, ಕೆಲಸಕ್ಕೆ ಮಹಿಳೆಯರನ್ನು ನೇಮಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರಿಗೆ ತೊಂದರೆ ಕೊಡಬೇಡಿ, ವಹಿವಾಟು ಮತ್ತು ಚಟುವಟಿಕೆಗಳು ಕಾನೂನು ಬದ್ಧವಾಗಿ ನಡೆಯುತ್ತಿದ್ದರೆ ಅನಗತ್ಯವಾಗಿ ಹಸ್ತಕ್ಷೇಪ ಮಾಡಬೇಡಿ ಎಂದು ಪೊಲೀಸರಿಗೆ ಶುಕ್ರವಾರ ಹೈಕೋರ್ಟ್‌ ಸೂಚನೆ ನೀಡಿದೆ.

ಕೆಲಸಕ್ಕೆ ಮಹಿಳೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ದಾಳಿ ನಡೆಸಿ ನಗರದ 27 ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದ ಸಿಸಿಬಿ ಕ್ರಮ ಪ್ರಶ್ನಿಸಿ ಕರ್ನಾಟಕ ಹೊಟೇಲ್ಸ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಓನರ್ ಅಸೋಸಿಯೇಷನ್‌ ಆ್ಯಂಡ್‌ ವರ್ಕಿಂಗ್‌ ವುಮೆನ್‌ ವೆಲ್‌ಫೇರ್‌ ಅಸೋಸಿಯೇಷನ್‌ ಹಾಗೂ ಬಾರ್‌ ಮಾಲೀಕರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾ.ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡ ಮಾತ್ರಕ್ಕೆ ದಾಳಿ ನಡೆಸಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತಹ, ಮಾಲೀಕರನ್ನು ಬೆದರಿಸುವಂತಹ ಮತ್ತು ತೊಂದರೆ ಕೊಡುವ ಕೆಲಸ ಮಾಡಬಾರದು. ಮಹಿಳಾ ನೌಕರರಿಗೆ ರಕ್ಷಣೆ ನೀಡುವ ಹೊಣೆ ಬಾರ್‌ ಮಾಲೀಕರದ್ದು. ಅದನ್ನು ಅವರು ಮಾಡತ್ತಾರೆ. ಒಂದೊಮ್ಮೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಕಾನೂನು ರೀತಿ ಸೂಕ್ತ ಕ್ರಮ ಜರುಗಿಸಿ.

ಸಂಗೀತ ಕಾರ್ಯಕ್ರಮ ಆಯೋಜಿಸಲು ಬಾರ್‌ ಮಾಲೀಕರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರೆ, ಅನಗತ್ಯವಾಗಿ ಹಸ್ತಕ್ಷೇಪ ಮಾಡಬೇಡಿ ಎಂದು ಪೊಲೀಸರಿಗೆ ಸೂಚಿಸಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು. ಸಿಸಿಬಿಯವರು ಬಲವಂತವಾಗಿ ಮುಚ್ಚಿರುವ ಎಲ್ಲ 27 ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳು ಕರ್ನಾಟಕ ಅಬಕಾರಿ ಕಾಯ್ದೆ-1965ರ ಅನ್ವಯ ಅಧೀಕೃತ ಪರವಾನಗಿ ಹೊಂದಿವೆ.

ಈ ಪೈಕಿ 26 ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳು ಸಿಎಲ್‌-9 ಹೊಂದಿದ್ದರೆ, ಒಂದು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಸಿಎಲ್‌-7 ಹೊಂದಿದೆ. ಅಲ್ಲದೇ ಇವರೆಲ್ಲರೂ ಕರ್ನಾಟಕ ಪೌರ ನಿಗಮ ಕಾಯ್ದೆ-1976ರ ಅನ್ವಯ ಬಿಬಿಎಂಪಿಯಿಂದ ವಾಣಿಜ್ಯ ಪರವಾನಗಿ ಪಡೆದುಕೊಂಡಿದ್ದಾರೆ. ಅದೇ ರೀತಿ ವಿವಿಧ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಳ್ಳಲಾಗಿದೆ.

ಸದ್ಯ ಈ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳನ್ನು ಮುಚ್ಚಲ್ಪಟ್ಟಿರುವುದರಿಂದ ಇಲ್ಲಿ ಕೆಲಸ ಮಾಡುವ ಸಾವಿರಕ್ಕೂ ಹೆಚ್ಚು ಮಹಿಳೆಯರ ಕುಟುಂಬಗಳು ಬೀದಿಪಾಲಾಗಿವೆ. ಜತೆಗೆ ಸಾವಿರಕ್ಕೂ ಹೆಚ್ಚು ಪುರಷರು ಸಹ ಕೆಲಸವಿಲ್ಲದೇ ಅತಂತ್ರ ಸ್ಥಿತಿ ಅನುಭವಿಸುತ್ತಿದ್ದಾರೆ.

ಪೊಲೀಸರು ತಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಾರೆ. ಬಾರ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸಿಸಿಟಿವಿ ಅಳವಡಿಸಿ ಅಲ್ಲಿ ನಡೆಯುವ ಚಟುವಟಿಕೆಗಳನ್ನು ಪೊಲೀಸ್‌ ಠಾಣೆಗಳಿಗೆ ನೇರ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಆದರೂ ಪೊಲೀಸರು ವಿನಾಕಾರಣ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಬಾರ್‌ ಮಾಲೀಕರು ದೂರಿದ್ದಾರೆ.

ಪ್ರಕರಣವೇನು?: ನಗರದ ವಿವಿಧೆಡೆ ಸೆ.28ರಂದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂಬ ಕಾರಣಕ್ಕೆ 27 ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳನ್ನು ಬಲವಂತವಾಗಿ ಮುಚ್ಚಿಸಿದ್ದರು. ಯಾವುದೇ ನೋಟಿಸ್‌ ನೀಡದೆ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಕೆಲಸಕ್ಕೆ ಮಹಿಳೆಯನ್ನು ನೇಮಕ ಮಾಡಿಕೊಳ್ಳಬಾರದು ಎಂಬ ಸರ್ಕಾರದ ಯಾವುದೇ ಲಿಖೀತ ಆದೇಶವನ್ನು ತೋರಿಸಿಲ್ಲ. ಸಿಸಿಬಿ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದೆ. ಹೀಗಾಗಿ ಕಾನೂನು ಬದ್ಧ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡದಂತೆ ಹಾಗೂ ಮಹಿಳೆಯರ ಕೆಲಸ ತಡೆಯದಂತೆ ಪೊಲೀಸರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.

ಶುಕ್ರವಾರ ಹೈಕೋರ್ಟ್‌ ನೀಡಿರುವ ಆದೇಶವನ್ನು ಪಾಲಿಸುತ್ತೇವೆ. ಆದರೆ, ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಿಯಮಗಳನ್ನು ಉಲ್ಲಂ ಸಿ ಚಟುವಟಿಕೆಗಳು ನಡೆಯುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ಪಾಲಿಸುತ್ತೇವೆ.
-ಗಿರೀಶ್‌, ಸಿಸಿಬಿ ಡಿಸಿಪಿ

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.