ಸಿಎಂ ವಿರುದ್ಧ ಮಾತಾಡ್ಬೇಡಿ


Team Udayavani, Jan 9, 2019, 12:49 AM IST

x-7.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಸಹಿ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಶಾಸಕರು ಮಾತನಾಡುತ್ತಿರುವ ಬಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ
ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ಕಾಂಗ್ರೆಸ್‌ ಶಾಸಕರನ್ನು ಆ ಪಕ್ಷದ ನಾಯಕರೇ ನಿಯಂತ್ರಿಸಬೇಕು. ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿಯವರ ವಿರುದ್ಧ ಬಹಿರಂಗವಾಗಿ ಕಾಂಗ್ರೆಸ್‌ ಶಾಸಕರು ಮಾತನಾಡಿದರೆ ನಾವು ಮಾತನಾಡಬೇಕಾಗುತ್ತದೆ ಎಂದು ಸಚಿವರು-ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಕೆಪಿಸಿಸಿ ಅದ್ಯಕ್ಷ ದಿನೇಶ್‌ ಗುಂಡೂರಾವ್‌ ಜತೆ ಈ ಕುರಿತು ನೀವೇ ಮಾತನಾಡಿ ಎಂದು ಸಭೆಯಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಆಗ್ರಹಿಸಿದರು. ಕಾಂಗ್ರೆಸ್‌ ಶಾಸಕ ಡಾ.ಸುಧಾಕರ್‌ ಮುಖ್ಯಮಂತ್ರಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಹೀಗೆಲ್ಲಾ ಮಾತನಾಡುವುದು ಸರಿಯಲ್ಲ . ನಮ್ಮ ಸಚಿವರ ಇಲಾಖೆಗೆ ಬರುವ ನಿಗಮ ಮಂಡಳಿಗೆ ಕಾಂಗ್ರೆಸ್‌ ಶಾಸಕರನ್ನು ನೇಮಿಸುವುದು ಎಷ್ಟು ಸರಿ ಎಂದು ಕಿಡಿಕಾರಿದರು .

ಜೆಡಿಎಸ್‌ ಸಚಿವರ ಇಲಾಖೆಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿಗಳಿಗೆ ಕಾಂಗ್ರೆಸ್‌ ಶಾಸಕರನ್ನು ನೇಮಿಸಿರುವ ಬಗ್ಗೆಯೂ ತೀವ್ರ
ಆಕ್ಷೇಪ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸಾ.ರಾ.ಮಹೇಶ್‌,
ನಿಗಮ ಮಂಡಳಿ, ಸಂಸದೀಯ ಕಾರ್ಯಗೊಂದಲ ನಿವಾರಣೆ ಹೊಣೆ ಮಾಜಿ ಸಿಎಂಗೆ ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉದ್ಭವಿಸಿರುವ ಗೊಂದಲ ನಿವಾರಣೆ ಮಾಡಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಜವಾಬ್ದಾರಿ ನೀಡಿದೆ. ಮಂಗಳವಾರ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ನಿಗಮ ಮಂಡಳಿ ನೇಮಕ ಮಾಡುವ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ತಿಕ್ಕಾಟ ಆರಂಭವಾಗಿದ್ದು, ಈ ಗೊಂದಲವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರೊಂದಿಗೆ ಚರ್ಚಿಸಿ ಬಗೆಹರಿಸುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ. ಇದೇ ವಿಚಾರದ ಬಗ್ಗೆ ಸಿಎಂ ಅವರನ್ನು
ವೇಣುಗೋಪಾಲ್‌ ಭೇಟಿಯಾಗಲು ಪ್ರಯತ್ನಿಸಿದರೂ ಜೆಡಿಎಸ್‌ ಶಾಸಕಾಂಗ ಸಭೆ ಇದ್ದಿದ್ದರಿಂದ ಸಾಧ್ಯವಾಗಲಿಲ್ಲ.
ಜ.26-ಫೆ.15ರವರೆ‌ಗೆ ಕಾಂಗ್ರೆಸ್‌ ಅಭಿಯಾನ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿದ್ದು, ಕೇಂದ್ರದ ವೈಫ‌ಲ್ಯಗಳನ್ನು ಜನರಿಗೆ ತಿಳಿಸಲು ಜ. 26 ರಿಂದ ಫೆ. 15ರವರೆಗೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ. ಸಾಂದರ್ಭಿಕ ಚಿತ್ರ ದರ್ಶಿ, ರಾಜಕೀಯ ಕಾರ್ಯದರ್ಶಿ, ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. 

ಪ್ರಮುಖವಾಗಿ ಲೋಕಸಭೆ ಚುನಾವಣೆ ಸಿದ್ಧತೆ, ಹೆಚ್ಚು ಸ್ಥಾನ ಗೆಲ್ಲುವ ಬಗ್ಗೆ ಸಹ ಚರ್ಚೆ ನಡೆಸಲಾಯಿತು. ಲೋಕಸಭೆ ಚುನಾವಣೆ
ಕಾಂಗ್ರೆಸ್‌ ಜತೆಗೂಡಿ ಸ್ಪರ್ಧೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಮಟ್ಟದಲ್ಲಿ ಹಾಗೂ ರಾಜಕೀಯ ನೇಮ ಕಾತಿ, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ನಿರ್ಧಾರದ ಅಧಿಕಾರ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರು
ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಯವರಿಗೆ ಸಭೆ ನೀಡಿದೆ ಎಂದು ತಿಳಿಸಿದರು.

2 ದಿನದಲ್ಲಿ ನಿಗಮ ಮಂಡಳಿ ಪಟ್ಟಿ : ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ ಕೋಟಾದಡಿ ನಿಗದಿಯಾಗಿರುವ ಒಂದು ರಾಜಕೀಯ
ಕಾರ್ಯದರ್ಶಿ, ನಾಲ್ಕು ಸಂಸದೀಯ ಕಾರ್ಯದರ್ಶಿ ಹಾಗೂ ಹತ್ತು ನಿಗಮ ಮಂಡಳಿ ಸ್ಥಾನಗಳ ಭರ್ತಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಪಟ್ಟಿ ಬಿಡುಗಡೆ
ಮಾಡಲಿದ್ದಾರೆ. 10 ನಿಗಮ ಮಂಡಳಿಗಳಲ್ಲಿ ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ಅವಕಾಶ ಕೊಡಬೇಕು ಎಂಬ ಪ್ರಸ್ತಾಪಕ್ಕೆ ಶಾಸಕರ ವಿರೋಧ ವ್ಯಕ್ತವಾಗಿ ಅಂತಿಮವಾಗಿ ಇಬ್ಬರು ಸೋತ ಅಭ್ಯರ್ಥಿಗಳಿಗೆ ಹಾಗೂ ಉಳಿದ 8 ನಿಗಮಗಳಿಗೆ
ಶಾಸಕರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.

ಗೊಂದಲ ನಿವಾರಣೆ ಹೊಣೆ ಮಾಜಿ ಸಿಎಂಗೆ 
ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉದ್ಭವಿಸಿರುವ ಗೊಂದಲ ನಿವಾರಣೆ ಮಾಡಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಜವಾಬ್ದಾರಿ ನೀಡಿದೆ. ಮಂಗಳವಾರ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ನಿಗಮ ಮಂಡಳಿ ನೇಮಕ ಮಾಡುವ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ
ತಿಕ್ಕಾಟ ಆರಂಭವಾಗಿದ್ದು, ಈ ಗೊಂದಲವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ
ದೇವೇಗೌಡ ಅವರೊಂದಿಗೆ ಚರ್ಚಿಸಿ ಬಗೆಹರಿಸುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ. ಇದೇ ವಿಚಾರದ ಬಗ್ಗೆ ಸಿಎಂ ಅವರನ್ನು ವೇಣುಗೋಪಾಲ್‌ ಭೇಟಿಯಾಗಲು ಪ್ರಯತ್ನಿಸಿದರೂ ಜೆಡಿಎಸ್‌ ಶಾಸಕಾಂಗ
ಸಭೆ ಇದ್ದಿದ್ದರಿಂದ ಸಾಧ್ಯವಾಗಲಿಲ್ಲ. 

ಜ.26-ಫೆ.15ರವರೆ‌ಗೆ ಕಾಂಗ್ರೆಸ್‌ ಅಭಿಯಾನ
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿದ್ದು, ಕೇಂದ್ರದ ವೈಫ‌ಲ್ಯಗಳನ್ನು ಜನರಿಗೆ ತಿಳಿಸಲು ಜ. 26 ರಿಂದ
ಫೆ. 15ರವರೆಗೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ.  

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.