ನಿಂತೇ ಹೋಯ್ತೇ ಕಾಲುವೆ ಒತ್ತುವರಿ ತೆರವು?
Team Udayavani, Jul 17, 2017, 11:52 AM IST
ಬೆಂಗಳೂರು: ಬಿಬಿಎಂಪಿಯಿಂದ ಕಳೆದ ವರ್ಷ ಆರಂಭಿಸಿದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕಳೆದ ಐದು ತಿಂಗಳಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಹೀಗಾಗಿ 728 ಭಾಗಗಳಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವುದು ಇನ್ನೂ ಬಾಕಿ ಉಳಿದಿದೆ.
ಕಳೆದ ವರ್ಷ ನಗರದಲ್ಲಿ ಸುರಿದ ಭಾರಿ ಮಳೆಗೆ ಕೆಲ ಭಾಗಗಳು ಜಾಲಾವೃತಗೊಂಡು ಹಲವು ಭಾಗಗಳಲ್ಲಿನ ಜನರು ತೊಂದರೆ ಅನುಭವಿಸುವಂತಾಗಿತ್ತು. ಆ ಹಿನ್ನೆಲೆಯಲ್ಲಿ ನಗರದ ಎಲ್ಲ ಭಾಗಗಳಲ್ಲಿ ಆಗಿರುವ ರಾಜಕಾಲುವೆ ಒತ್ತುವರಿಯನ್ನು ಸಂಪೂರ್ಣ ತೆರವುಗೊಳಿಸಿ ಎಂದು ಮುಖ್ಯಮಂತ್ರಿಗಳು ಆದೇಶಿಸಿ, ನಾಲ್ಕು ತಿಂಗಳೊಳಗೆ ಎಲ್ಲ ಕಾರ್ಯಾಚರಣೆ ಪೂರ್ಣಗೊಳಿಸಬೇಕು ಎಂದು ವರ್ಷದ ಹಿಂದೆ ಸೂಚಿಸಿದ್ದರು.
ಅದರಂತೆ ಬೊಮ್ಮನಹಳ್ಳಿ, ದಾಸರಹಳ್ಳಿ, ಮಹದೇವಪುರ ವಲಯಗಳಲ್ಲಿ ಕಾರ್ಯಾಚರಣೆ ಆರಂಭಿಸಿದ ಪಾಲಿಕೆ ಅಧಿಕಾರಿಗಳು, ಕಾಲಾವಕಾಶ ನೀಡುವಂತೆ ಜನರು ಕೇಳಿಕೊಂಡರೂ ಅವಕಾಶ ನೀಡಿದೆ ಕಾಲುವೆ ಜಾಗದಲ್ಲಿದ್ದ ಮನೆಗಳನ್ನು ತೆರವುಗೊಳಿಸಿದ್ದರು. ಆದರೆ, ಕಾಲುವೆ ಜಾಗದಲ್ಲಿ ಪ್ರಭಾವಿಗಳ ಆಸ್ಪತ್ರೆಗಳು, ಮನೆಗಳಿರುವುದು ಗೊತ್ತಾದ ಕೂಡಲೇ ಆ ಪ್ರದೇಶಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.
ಪಾಲಿಕೆಯ ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತೆ ಕಾರ್ಯಾಚರಣೆ ಆರಂಭಿಸಿದರಾದರೂ ಅದು ಕೇವಲ ಖಾಲಿ ನಿವೇಶನಗಳಿಗೆ ಮಾತ್ರ ಸೀಮಿತವಾಗಿತ್ತು. ಅಲ್ಲದೆ, ಕಾಲುವೆ ಜಾಗದಲ್ಲಿ ಹಲವು ಅಪಾರ್ಟ್‌ಮೆಂಟ್‌ಗಳಿರುವುದು ಬೆಳಕಿಗೆ ಬಂದ ಕೂಡಲೇ ಮತ್ತೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಕಾರ್ಯಾಚರಣೆ ನಿಂತು ಹೋಗಿರುವ ಬಗ್ಗೆ ಪ್ರಶ್ನಿಸಿದರೆ, ಸರ್ವೆಯರ್‌ಗಳಿಲ್ಲ ಎಂಬ ಸಿದ್ಧ ಉತ್ತರವನ್ನು ಕಳೆದ ಐದು ತಿಂಗಳಿನಿಂದಲೂ ಪಾಲಿಕೆ ನೀಡುತ್ತಲೇ ಬರುತ್ತಿದೆ.
ವರ್ಷದಲ್ಲಿ 405 ಕಡೆ ಮಾತ್ರ ತೆರವು: ಪಾಲಿಕೆಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿಯಾಗಿರುವ ಭಾಗಗಳನ್ನು ಗುರುತಿಸಿ ನಾಲ್ಕು ವರ್ಷ ಕಳೆದಿದೆ. ನಗರದಲ್ಲಿ ಪಾಲಿಕೆ ಅಧಿಕಾರಿಗಳ ಮಾಹಿತಿಯಂತೆ 1953 ಪ್ರಕರಣಗಳಲ್ಲಿ ರಾಜಕಾಲುವೆ ಒತ್ತುವರಿಯಾಗಿದ್ದು, ಕಳೆದ ವರ್ಷದ ಕಾರ್ಯಾಚರಣೆಗೆ ಮೊದಲೇ 820 ಕಡೆ ಒತ್ತುವರಿ ತೆರವುಗೊಳಿಸಲಾಗಿತ್ತು. ಉಳಿದ 1,133 ಕಡೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ವರ್ಷ ಆರಂಭಿಸಿದ ಅಧಿಕಾರಿಗಳು ಈವರೆಗೆ ಕೇವಲ 405 ಕಡೆಗಳಲ್ಲಿ ಮಾತ್ರ ಒತ್ತುವರಿ ತೆರವುಗೊಳಿಸಿದ್ದು, ಇನ್ನೂ 728 ಕಡೆಗಳಲ್ಲಿ ತೆರವುಗೊಳಿಸುವುದು ಬಾಕಿ ಉಳಿದಿದೆ.
ಸರ್ವೇಯರ್ ಕೊರತೆ ನೆಪ: ರಾಜಕಾಲುವೆ ಒತ್ತುವರಿ ಪ್ರಭಾವಿಗಳ ಹೆಸರು ಕೇಳಿಬಂದ ಕೂಡಲೇ ಸರ್ವೇಯರ್‌ಗಳ ಕೊರತೆ ಇದೆ ಎಂಬ ಕಾರಣ ನೀಡಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಪಾಲಿಕೆ ಅಧಿಕಾರಿಗಳು, ಇದೀಗ ಅದೇ ನೆಪವನ್ನಿಟ್ಟುಕೊಂಡು ಇಡೀ ಕಾರ್ಯಾಚರಣೆಯನ್ನೇ ನಿಲ್ಲಿಸಿದ್ದಾರೆ. ಒತ್ತುವರಿ ತೆರವುಗೊಳಿಸಬೇಕಾದ 728 ಸ್ಥಳಗಳಲ್ಲಿ ಒತ್ತುವರಿಯಾಗಿರುವ ಜಾಗ ಗುರುತು ಮಾಡಲು ಸರ್ವೇಯರ್‌ಗಳ ಅಗತ್ಯವಿದ್ದು, ಕಂದಾಯ ಇಲಾಖೆಯಗೆ ಸರ್ವೇಯರ್‌ಗಳನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಕಂದಾಯ ಇಲಾಖೆಯಿಂದ ಸರ್ವೇಯರ್‌ಗಳನ್ನು ಪಾಲಿಕೆಗೆ ನೀಡದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಂತಿದೆ ಎಂಬುದು ಪಾಲಿಕೆ ಅಧಿಕಾರಿಗಳು ಒತ್ತುವರಿ ತೆರವು ಸ್ಥಗಿತಗೊಂಡಿರುವುದಕ್ಕೆ ನೀಡುತ್ತಿರುವ ಸಮಜಾಯಿಸಿ.
ಮನೆ ಒಡೆದ ನಂತರ ಸರ್ವೆ ಸರಿಯಿಲ್ಲ ಎಂದ ಅಧಿಕಾರಿಗಳು: ಯಲಹಂಕ ವಲಯದ ದೊಡ್ಡಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ ಎಂದು ನೂರಕ್ಕೂ ಹೆಚ್ಚು ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಯ ನಂತರ ಪಾಲಿಕೆಯ ಅಧಿಕಾರಿಗಳು ಕಾಲುವೆ ನಿರ್ಮಿಸಲು ಸ್ಥಳಕ್ಕೆ ತೆರಳಿದ್ದರು. ಆದರೆ, ಈ ಹಿಂದೆ ನಡೆಸಿದ ಸರ್ವೇ ಕಾರ್ಯ ಸಮರ್ಪಕವಾಗಿಲ್ಲದ ಕಾರಣ ಮರು ಸರ್ವೇ ನಡೆಸಬೇಕು ಎಂದು ಕಂದಾಯ ಇಲಾಖೆಯ ಭೂ ದಾಖಲೆಗಳ ಮಾಪನ ಇಲಾಖೆ ಅಧಿಕಾರಿಗಳು ಹೇಳಿದ್ದರು. ಆದರೆ, ಅಷ್ಟರೊಳಗೆ ಅಧಿಕಾರಿಗಳಿಂದಾಗಿ ನೂರಾರು ಕುಟುಂಬಗಳು ಮನೆ ಕಳೆದುಕೊಂಡಿವೆ.
ಅನಿವಾರ್ಯವಾಗಿ ಮತ್ತು ತುರ್ತಾಗಿ ಒತ್ತುವರಿ ತೆರವುಗೊಳಿಸಬೇಕಾದ ಭಾಗಗಳಲ್ಲಿ ಈಗಾಗಲೇ ತೆರವುಗೊಳಿಸಿರುವುದರಿಂದ ಮಳೆ ಬಂದಾಗ ಈಗ ತೊಂದರೆಯಾಗುತ್ತಿಲ್ಲ. ಉಳಿದ 728 ಪ್ರಕರಣಗಳಲ್ಲಿ ಒತ್ತುವರಿ ತೆರವುಗೊಳಿಸಲು ಪಾಲಿಕೆಯ ಅಧಿಕಾರಿಗಳು ಸಿದ್ಧವಿದ್ದಾರೆ. ಆದರೆ, ಗುರುತು ಮಾಡಿಕೊಡಲು ಕಂದಾಯ ಇಲಾಖೆಯಿಂದ ಸರ್ವೇ ಸಿಬ್ಬಂದಿ ಲಭ್ಯವಾಗುತ್ತಿಲ್ಲ.
-ಸಿದ್ದೇಗೌಡ, ಬಿಬಿಎಂಪಿ ಮಳೆ ನೀರುಗಾಲುವೆ ವಿಭಾಗದ ಮುಖ್ಯ ಎಂಜಿನಿಯರ್
* 1953- ನಗರದಾದ್ಯಂತ ರಾಜಕಾಲುವೆ ಒತ್ತುವರಿಯಾಗಿರುವ ಕುರಿತು ಪಾಲಿಕೆ ಪಟ್ಟಿಮಾಡಿಕೊಂಡಿರುವ ಪ್ರದೇಶಗಳು
* 820- ಕಳೆದ ವರ್ಷ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವುದಕ್ಕೂ ಮೊದಲೇ ತೆರವಾಗಿದ್ದ ಭಾಗಗಳು
* 405- ಒತ್ತುವರಿ ತೆರವು ಮಾಡುವಂತೆ ಸಿಎಂ ಅದೇಶ ನೀಡಿದ ನಂತರ ತೆರವಾದ ಭಾಗಗಳು
* 728- ಇನ್ನೂ ತೆರವಾಗಬೇಕಿರುವ ಭಾಗಳು
* ವೆಂ.ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.