ವೈದ್ಯ ಕೋರ್ಸ್ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ
Team Udayavani, Jul 13, 2018, 11:53 AM IST
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
2018-19ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ಮೂರು ಪಟ್ಟು ಹೆಚ್ಚಿಸಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪದವಿಯನ್ನು ಕಗ್ಗಂಟು ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
2017-18ರಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ಗಳಿಗೆ 16,700 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಈ ವರ್ಷ ಅದು 50 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಖಾಸಗಿ ಕಾಲೇಜಿನ ಸರ್ಕಾರಿ ಸೀಟಿಗೆ 77,000 ರೂ.ಗಳಿಂದ 97,350 ರೂ.ಗೆ ಏರಿಸಲಾಗಿದೆ.
ಖಾಸಗಿ ಕಾಲೇಜುಗಳಲ್ಲಿ ಖಾಸಗಿ ಸೀಟಿಗೆ 6,83,100 ರೂ. ನಿಗದಿ ಮಾಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಖಾಸಗಿ ಲಾಬಿಗೆ ಮಣಿಯ ಬಾರದು ಎಂದು ಎಬಿವಿಪಿ ಬೆಂಗಳೂರು ಮಹಾನಗರ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್ ಒತ್ತಾಯಿಸಿದರು.
ಸರ್ಕಾರಿ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಕಳೆದ ವರ್ಷ 14,400 ರೂ. ಇದ್ದ ಶುಲ್ಕ ಈಗ 40 ಸಾವಿರ ರೂ.ಗೆ ಏರಿಸಲಾಗಿದೆ. ಖಾಸಗಿ ಕಾಲೇಜಿನ ಸರ್ಕಾರಿ ಸೀಟುಗಳಿಗೆ 49,500 ರೂ.ಶುಲ್ಕ ಇದ್ದದ್ದು, 63,030 ರೂ.ಗಳಾಗಿದೆ.
ಖಾಸಗಿ ಕಾಲೇಜುಗಳಲ್ಲಿ ಖಾಸಗಿ ಸೀಟಿಗೆ 4,63,320ರೂ. ಶುಲ್ಕ ನಿಗದಿ ಮಾಡಿದ್ದಾರೆ. ಇಷ್ಟು ದೊಡ್ಡ ಮೊತ್ತವನ್ನು ಬಡ ವಿದ್ಯಾರ್ಥಿಗಳಿಗೆ ತುಂಬಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕಳೆದ ವರ್ಷದ ಶುಲ್ಕವನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ಮಲ್ಲೇಶ್ವರದಲ್ಲಿ ಇರುವ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಂಧಿಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಪರಮೇಶ್ ರೆಡ್ಡಿ, ಮಹಾನಗರ ಕಾರ್ಯದರ್ಶಿ ಸೂರಜ್ ಪಂಡಿತ್, ಜಿಲ್ಲಾ ಸಂಚಾಲಕ ಭುವನ್, ಮುಖಂಡರಾದ ಹರ್ಷಿತಾ, ಭರತ್, ಸುಮುಖ್, ವಿನಯ್, ಆಕಾಶ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.