ಹೀಗೆ ಹೇಳುವವರಿಗೆ ಸಾಮಾನ್ಯಜ್ಞಾನ ಇದೆಯೇ?


Team Udayavani, Jan 23, 2018, 6:05 AM IST

siddaramaiah2-k4k–621×414@LiveMint-b1b1.JPG

ಬೆಂಗಳೂರು: “ಕರ್ನಾಟಕ ಬಂದ್‌ ಕಾಂಗ್ರೆಸ್‌ ಪ್ರೇರಿತ ಎನ್ನುವುದು ಆಧಾರರಹಿತ. ಹೀಗೆ ಹೇಳುವವರಿಗೆ ಸಾಮಾನ್ಯಜ್ಞಾನ ಇದೆಯೋ ಅಥವಾ ಇಲ್ಲವೋ ಗೊತ್ತಾಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನಿರ್ಮಿಸಲಾದ ಶತಮಾನೋತ್ಸವ ಭವನವನ್ನು ಸೋಮವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಕರ್ನಾಟಕ ಬಂದ್‌ ಮಾಡಿದರೆ ಸರ್ಕಾರಕ್ಕೇ ತೊಂದರೆ ಆಗುತ್ತದೆ. ಶಾಲಾ- ಕಾಲೇಜುಗಳು, ಬಸ್‌ ಮತ್ತಿತರ ಸೇವೆ ಸ್ಥಗಿತಗೊಳ್ಳುತ್ತವೆ. ಕಾನೂನು- ಸುವ್ಯವಸ್ಥೆ ಕಾಪಾಡಬೇಕಾಗುತ್ತದೆ. ಹೀಗಿರುವಾಗ, ಸರ್ಕಾರವೇ ಯಾಕೆ ಬಂದ್‌ಗೆ ಪ್ರೇರಣೆ ನೀಡುತ್ತದೆ? ಹೀಗೆ ಆರೋಪಿಸುವವರಿಗೆ ಬುದ್ಧಿ ಅಥವಾ ಸಾಮಾನ್ಯಜ್ಞಾನ ಇದೆಯೋ-ಇಲ್ಲವೋ ಎಂಬ ಬಗ್ಗೆಯೇ ನನಗೆ ಅನುಮಾನ’ ಎಂದು ತೀಕ್ಷ್ಣವಾಗಿ ಹೇಳಿದರು. 

ಅಷ್ಟಕ್ಕೂ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಈ ಕನ್ನಡ ಸಂಘಟನೆಗಳು ಸರ್ಕಾರದ ಮಾತು ಕೇಳುತ್ತವೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಬೇಕಿದ್ದರೆ ಆರೋಪ ಮಾಡುವವರೇ ಬಂದ್‌ಗೆ ಕರೆ ನೀಡಿದವರ ಬಳಿ ತೆರಳಿ ಮನವಿ ಮಾಡಿಕೊಳ್ಳಲಿ ಎಂದರು.

ಎಲ್ಲದಕ್ಕೂ ರಾಜಕೀಯ ಕನ್ನಡಕ ಬೇಡ: ಮುಂದಿನ ದಿನಗಳಲ್ಲಿ ಎಐಸಿಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದಾಗ ಕಪ್ಪುಬಟ್ಟೆ ಪ್ರದರ್ಶಿಸುವ ಬಗ್ಗೆ ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಪ್ರತಿಪಕ್ಷದ ನಾಯಕರಿಗೆ ಆರೋಪ ಮಾಡುವುದನ್ನು ಬಿಟ್ಟು ಬೇರೆ ಕೆಲಸ ಇಲ್ಲ. ಆದ್ದರಿಂದ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಎಲ್ಲವನ್ನೂ ರಾಜಕೀಯ ಕನ್ನಡಕ ಹಾಕಿಕೊಂಡು ನೋಡುವುದನ್ನು ಬಿಡಬೇಕು’ ಎಂದು ಹೇಳಿದರು.

ಟಾಪ್ ನ್ಯೂಸ್

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.