ದೇಣಿಗೆ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಜ್ಜು
Team Udayavani, Feb 14, 2017, 11:58 AM IST
ಬೆಂಗಳೂರು: ಮುಖ್ಯಮಂತ್ರಿಗಳಿಂದ ಕಾಂಗ್ರೆಸ್ ವರಿಷ್ಠರಿಗೆ 1000 ಕೋಟಿ ರೂ.ರವಾನೆ, ಉಕ್ಕಿನ ಮೇಲ್ಸೇತುವೆ ಕಾಮಗಾರಿಗಾಗಿ 65 ಕೋಟಿ ರೂ. ಕಮಿಷನ್ ಸಂದಾಯ ಸೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಫೆ. 28ರಂದು ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.
ಪಕ್ಷದ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಅಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ ಅಂದು ನಡೆಯುವ ಹೋರಾಟದ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಬೆಳಗಾವಿಯಲ್ಲಿ ನಡೆಯುವ ಹೋರಾಟದ ನೇತೃತ್ವವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಹಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬಿಜೆಪಿ ಸಂಸ್ಥಾಪನಾ ದಿನವಾದ ಏ. 6ರಂದು ರಾಜ್ಯದ 57 ಸಾವಿರ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ಅಂದು ಬೂತ್ ಸಮಿತಿಗಳ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಹಾರಿಸುವುದು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮಶತಾಬ್ಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಏ. 14ರಂದು ದಲಿತರೆಡೆಗೆ ನಡಿಗೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು
ಪದಾಧಿಕಾರಿಗಳ ಬದಲಾವಣೆ ಚರ್ಚೆಯಾಗಿಲ್ಲ: ಭಿನ್ನಮತಕ್ಕೆ ಕಾರಣವಾಗಿದ್ದ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಬದಲಾವಣೆ ಕುರಿತಂತೆ ಕೋರ್ ಕಮಿಟಿ ಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪದಾಧಿಕಾರಿಗಳ ಪಟ್ಟಿ ಬದಲಾವಣೆ ಕುರಿತಂತೆ ಇರುವ ಸಮಸ್ಯೆಗಳನ್ನು ನಾನು ಬಗೆಹರಿಸುತ್ತೇನೆ. ಈ ಕುರಿತು ಬೇಸರಗೊಂಡಿರುವವರು ಮತ್ತು ಅಸಮಾಧಾನಿತರನ್ನು ಕರೆಸಿ ಸಮಾಧಾನ ಮಾಡುತ್ತೇನೆ.
ಮುಂದೆ ಪಕ್ಷದಲ್ಲಿ ಯಾವುದೇ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಅಲ್ಲದೆ, ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುವುದು ಬೇಡ ಎಂಬ ಸೂಚನೆಯನ್ನೂ ಕೊಟ್ಟಿದ್ದರು. ಹೀಗಾಗಿ ಪದಾಧಿಕಾರಿಗಳ ಪಟ್ಟಿ ಬದಲಾವಣೆ ಕುರಿತ ತೀರ್ಮಾನವನ್ನು ರಾಜ್ಯ ನಾಯಕರು ಮುರಳೀಧರರಾವ್ ಅವರಿಗೆ ವಹಿಸಲು ನಿರ್ಧರಿಸಿದರು.
ಬಿಜೆಪಿ ವಕ್ತಾರರಾಗಿ ಅಶ್ವಥ್‌ನಾರಾಯಣ ನೇಮಕ
ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಶ್ವಥ್ ನಾರಾಯಣ ಅವರನ್ನು ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಅಶ್ವಥ್ ನಾರಾಯಣ್ ಅವರು ಬಿಜೆಪಿಯ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾದ ನಂತರ ಪದಾಧಿಕಾರಿಗಳ ಬದಲಾವಣೆ ಸಂದರ್ಭದಲ್ಲಿ ಅಶ್ವಥ್ ನಾರಾಯಣ ಅವರ ಹೆಸರನ್ನು ವಕ್ತಾರರ ಪಟ್ಟಿಯಿಂದ ಕೈ ಬಿಡಲಾಯಿತು.
ಆರ್ಥಿಕತೆ ಹಳಿ ತಪ್ಪಲು ಯುಪಿಎ ಕಾರಣ
ಬೆಂಗಳೂರು: ದೇಶದ ಆರ್ಥಿಕ ವ್ಯವಸ್ಥೆ ಹಳಿ ತಪ್ಪಲು ಯುಪಿಎ ಸರ್ಕಾರ ನೇರ ಕಾರಣ. 10 ವರ್ಷಗಳ ಯುಪಿಎ ಆಡಳಿತದಲ್ಲಿ ಲಕ್ಷಾಂತರ ಕೋಟಿ ರೂ. ಲೂಟಿಯಾಗಿತ್ತು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ಜೇಟಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ “2017ರ ಬಜೆಟ್ ಪೂರ್ವ ನೋಟ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “2ಜಿ ಹಗರಣ, ಕಲ್ಲಿದ್ದಲು, ಕಾಮನ್‌ವೆಲ್ತ್ ಕ್ರೀಡಾಕೂಟ ಹಗರಣವು ಸೇರಿದಂತೆ ಯುಪಿಎ ಸರ್ಕಾರ ಲಕ್ಷಾಂತರ ಕೋಟಿ ರೂ. ಹಗರಣದಲ್ಲಿ ಶಾಮೀಲಾಗಿದೆ.ಇದು ಆರ್ಥಿಕಾಭಿವೃದ್ಧಿ ಮತ್ತು ಜಿಡಿಪಿ ಕುಸಿತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
ಬಿಎಸ್‌ವೈ-ಈಶ್ವರಪ್ಪ ಭಾಯಿ ಭಾಯಿ
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರಾಜಿ ಸಂಧಾನದ ನಂತರ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವಿನ ಮುನಿಸು ಶಮನಗೊಂಡಿರುವುದು ಸೋಮವಾರದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ನೊಟಕ್ಕೆ ಕಾಣಿಸಿಕೊಂಡಿತು. ಸಭೆಯುದ್ದಕ್ಕೂ ಈಶ್ವರಪ್ಪ ಮತ್ತು ಯಡಿಯೂರಪ್ಪ ನಗುನಗುತ್ತಾ ಪರಸ್ಪರ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.