ಸೋತಾಗ ಎದೆಗುಂದಬೇಡಿ: ಭಾಸ್ಕರ್ ರಾವ್
Team Udayavani, Feb 16, 2020, 3:06 AM IST
ಟಿ.ದಾಸರಹಳ್ಳಿ: ಸೋತಾಗ ಕುಗ್ಗದೆ, ಗೆದ್ದಾಗ ಬೀಗದೆ ಸೋಲು ಗೆಲುವು ಎರಡನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.
ಜಾಲಹಳ್ಳಿಯ ಸೇಂಟ್ ಕ್ಲಾರೆಟ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಯೂರಿಕ -2020ರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ರಂಗದಲ್ಲೂ ಪೈಪೋಟಿ ಇದೆ. ಹಾಗಾಗಿ ಯುವ ಜನತೆ ಹಿಡಿದ ಕಾರ್ಯದಲ್ಲಿ ಸೋತರೆ ಎಲ್ಲ ಮುಗಿಯಿತು ಎಂದು ಎದೆಗುಂದ ಬಾರದು. ಬದಲಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂದು ತಿಳಿದು ಗೆಲುವಿಗೆ ಹಾತೊರೆಯಬೇಕು ಎಂದು ಸಲಹೆ ನೀಡಿದರು.
ಸುಮಾರು 65 ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರಾಂಶುಪಾಲ ಫಾದರ್ ಡಾ.ಸಾಬು ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ರೆ.ಫಾದರ್ ಅಬ್ರಾಹಂ, ವ್ಯವಸ್ಥಾಪಕ ರೆ.ಫಾದರ್ ಬೆನ್ನಿಮಾಥು, ಫಾದರ್ ಜೋಸೆಫ್ ಮಾಥ್ಯೂ ಹಾಗೂ ಫಾದರ್ ಸೋಜನ್, ಮಾದೇಶ್, ಆರ್. ಜಯಲಕ್ಷ್ಮೀ, ಮರಿಯಾ ಡಿಸೋಜ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.