ಫ್ರೀ ಕ್ಲಿನಿಕ್‌; ರೋಗಿಗಳ ಪಾಲಿಗೆ “ರಮಣ’ ದೇವರು!

Team Udayavani, Nov 6, 2018, 6:35 AM IST

ramana-rao-1.jpg

ಬೆಂಗಳೂರು: ಅಲ್ಲಿ ನಿತ್ಯವೂ ನೂರಾರು ಮೀಟರ್‌ ಉದ್ದದ ಸಾಲು.  ಕನಿಷ್ಠ 2 ಸಾವಿರ ಮಂದಿ ಅಲ್ಲಿಗೆ ನಿತ್ಯವೂ ಭೇಟಿ ನೀಡುತ್ತಾರೆ! ಎಲ್ಲರ ಬಾಯಿಯಲ್ಲೂ ಒಂದೇ ಜಪ, “ರಮಣ ರಮಣ’!

ಅದ್ಯಾವ ದೇವರು “ರಮಣ’? ಅಲ್ಲೇನು ಪವಾಡ ನಡೆಯುತ್ತೆ? ಎಂಬ ಪ್ರಶ್ನೆ ನಿಮ್ಮೊಳಗೆ ಏಳುವುದು ಸಹಜ. ಆದರೆ, ಇದು ಪವಾಡ ಮಾಡುವ ದೇವರ ಸುದ್ದಿ ಅಲ್ಲ. ಎಂಬಿಬಿಎಸ್‌ ಓದಿ, ರೋಗಿಗಳ ಕಣ್ಣಿಗೆ ದೇವರಾದ ವೈದ್ಯರ ಕತೆ. ಅವರು ಡಾ. ಬಿ. ರಮಣರಾವ್‌! ಅವರ ಕ್ಲಿನಿಕ್ಕಲ್ಲಿ ಕಾಣುವುದು ಆರೋಗ್ಯದ ಬೆಳಕು.

ಸತತ 44 ವರ್ಷಗಳಿಂದ ತಮ್ಮ ಕ್ಲಿನಿಕ್‌ ಅನ್ನು ಉಚಿತವಾಗಿ ನಡೆಸುತ್ತಿರುವ ಇವರು, ನಿತ್ಯವೂ ಸಹಸ್ರಾರು ಬಡವರ ಆರೋಗ್ಯ ವಿಚಾರಿಸುತ್ತಾರೆ. ಎಂಬಿಬಿಎಸ್‌ ಪದವಿ ಪಡೆದ ಮರುದಿನದಿಂದಲೇ ಈ ಸೇವೆಯನ್ನು ಪ್ರಾರಂಭಿಸಿರುವ ಇವರು, ನಾಲ್ಕು ದಶಕಗಳಲ್ಲಿ 20 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಜಗತ್ತಿನ ನಾನ್‌ ಸ್ಟಾಪ್‌ ಕ್ಲಿನಿಕ್‌ ಎಂಬ ಖ್ಯಾತಿ ಇವರ ಆಸ್ಪತ್ರೆಗಿದೆ.

ಡಾ. ರಮಣ ರಾವ್‌ ಮೂಲತಃ ಆಂಧ್ರಪ್ರದೇಶದವರು. 1973ರಲ್ಲಿ ಡಾಕ್ಟರ್‌ ಡಿಗ್ರಿ ಪಡೆದ ಇವರು ಅದೇ ವರ್ಷ, ಬೆಂಗಳೂರಿನಿಂದ 35 ಕಿ.ಮೀ. ದೂರದ ಟಿ. ಬೇಗೂರಿನಲ್ಲಿ ಬಡವರ ಸೇವೆಗಾಗಿ ಕ್ಲಿನಿಕ್‌ ಆರಂಭಿಸಿದರು. ದೀರ್ಘ‌ಕಾಲದಿಂದ ಕಾರ್ಯ ನಿರ್ವಹಿಸುತ್ತಿರುವ ಉಚಿತ ಆಸ್ಪತ್ರೆ ಎಂದು (world’s longest-running free clinic) ಜಾಗತಿಕವಾಗಿ ಹೆಸರು ಮಾಡಿರುವ ಈ ಕ್ಲಿನಿಕ್‌, ಬಡವರ ಪಾಲಿಗೆ ಬೆಳಕಾಗಿದೆ. ಪ್ರತಿನಿತ್ಯ ಕನಿಷ್ಠಪಕ್ಷ 2 ಸಾವಿರ ರೋಗಿಗಳು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಲಕ್ಷಾಂತರ ರೂಪಾಯಿ ಹಣ ಪಾವತಿಸಿದರೂ ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳನ್ನು ನಿರ್ಲಕ್ಷಿಸಲಾಗುತ್ತದೆ. ಆದರೆ, ಇಲ್ಲಿ ಯಾವ ರೋಗಿಯನ್ನೂ ಕಡೆಗಣಿಸುವುದಿಲ್ಲ ಎಂಬುದಕ್ಕೆ ಕ್ಲಿನಿಕ್‌ನ ಮುಂದಿನ ರೋಗಿಗಳ ಸಾಲೇ ಸಾಕ್ಷಿ. ಇಲ್ಲಿ ಎಲ್ಲರಿಗೂ ನಗುಮೊಗದ ಸೇವೆ ಲಭ್ಯ. ಕೇವಲ ಔಷಧ, ಚುಚ್ಚುಮದ್ದುಗಳಷ್ಟೇ ಅಲ್ಲದೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಹಲ್ಲು ಹಾಗೂ ಚರ್ಮಕ್ಕೆ ಸಂಬಂಧಿಸಿದ ತೊಂದರೆಗಳಿಗೂ ಉಚಿತ ಚಿಕಿತ್ಸೆ ಸಿಗುತ್ತದೆ.

ಡಾ. ರಮಣ್‌ ರಾವ್‌ ಅವರ ಪತ್ನಿ ಹಾಗೂ ಮಕ್ಕಳು ಕೂಡ ವೈದ್ಯರಾಗಿದ್ದು, ಅವರ ಒಳ್ಳೆಯ ಕೆಲಸಗಳಿಗೆ ಕೈ ಜೋಡಿಸಿದ್ದಾರೆ. ಇಡೀ ಕುಟುಂಬ ಬಡವರ ಸೇವೆಗಾಗಿ ಟೊಂಕ ಕಟ್ಟಿ ನಿಂತಿರುವುದು ಶ್ಲಾಘನೀಯ. ರೋಗಿಗಳು ಸರದಿಯಲ್ಲಿ ನಿಂತು ಕಾಯುವಾಗ ಅವರಿಗೆ ಉಚಿತ ಊಟವನ್ನೂ ನೀಡಲಾಗುತ್ತದೆ. ಅವರ ಹಳೆಯ ರೋಗಿಗಳಲ್ಲಿ ಕೆಲವರು ಕ್ಲಿನಿಕ್‌ನಲ್ಲಿ ಸ್ವಯಂಸೇವಕರಾಗಿ ದುಡಿಯುತ್ತಿದ್ದಾರೆ. ರಮಣ್‌ ಅವರ ಸೇವೆಯನ್ನು ಗುರುತಿಸಿದ ಭಾರತ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.