ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಎರಡನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಸುಧಾಕರ್

ಜನೌಷಧಿ ಮಳಿಗೆಗಳಿಂದ ಬಡ ಜನರಿಗೆ ಹೆಚ್ಚಿನ ಅನುಕೂಲ

Team Udayavani, Nov 12, 2022, 4:24 PM IST

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಎರಡನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಬಡ, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಅತ್ಯುತ್ತಮವಾಗಿ ಜಾರಿಯಾಗಿದ್ದು, ಈ ವರೆಗೆ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ನೋನ್ಮುಖವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದರ ಜೊತೆ ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಬಿಪಿಪಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದ್ದು, ಬೇಡಿಕೆಗಳಿಗೆ ಅನುಗುಣವಾಗಿ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಜನೌಷಧಿ ಮಳಿಗೆಗಳು ಅತ್ತುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 200 ಔಷಧ ಮಳಿಗೆಗಳಿವೆ. ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಗುಂಪುಗಳ ಘರ್ಷಣೆ : ಸಹಜ ಸ್ಥಿತಿಯತ್ತ ಹಾರೋಬೆನವಳ್ಳಿ ; 8 ಮಂದಿ ಬಂಧನ

ರಾಜ್ಯದಲ್ಲಿ ಜನರಿಕ್ ಔಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಎನ್.ಎ.ಬಿ.ಎಲ್ ಪ್ರಯೋಗಾಲಯದಲ್ಲಿ ಜನೌಷಧಿ ಮಳಿಗೆಗಳನ್ನು ಪರೀಕ್ಷಿಸಿ ಸಾರ್ವಜನಿಕ ಉಪಯೋಗಕ್ಕೆ ಜನೌಷಧಿ ಕೇಂದ್ರಗಳಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ. ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಉದ್ದೇಶ ಹೊಂದಿರುವ ಫಾರ್ಮಸಿ ಪದವಿಧರರಿಂದ ಮಳಿಗೆಗಳನ್ನು ತೆರೆಯಲು ಹೆಚ್ಚಿನ ಬೇಡಿಕೆ ಬರುತ್ತಿದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯೂರೋ ಆಫ್ ಫಾರ್ಮಸಿ ಪಬ್ಲಿಕ್ ಸೆಕ್ಟರ್ ಯೂನಿಟ್ಸ್ ಆಫ್ ಇಂಡಿಯಾ [ಬಿಪಿಪಿಐ] ಪ್ರತಿಯೊಂದು ಜನೌಷಧಿ ಮಳಿಗೆ ಪ್ರಾರಂಭಿಸಲು ಜನೌಷಧಿ ಮಳಿಗೆ ತೆರೆಯುವ ಪ್ರತಿ ಮಳಿಗೆಗೆ ಬಿಪಿಪಿಐಯಿಂದ ಮಾಸಿಕ ಖರೀದಿಗಾಗಿ ವಹಿವಾಟಿಗೆ ತಕ್ಕಂತೆ ಮಾಸಿಕ ಶೇ 15 ರಂತೆ ಮಾಸಿಕ 15,000 ರೂ ಗಳನ್ನು ಮೀರದಂತೆ ಒಟ್ಟಾರೆ ರೂ 2.50 ಲಕ್ಷಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

“ಜನೌಷಧಿ ಮಳಿಗೆಗಳಿಂದ ಬಿಪಿಎಲ್ ಮತ್ತು ಬಡ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮತ್ತಷ್ಟು ಮಳಿಗೆಗಳನ್ನು ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ವರ್ಷ 300 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಉತ್ತಮ ಸಾಧನೆ ಮಾಡಿದ್ದೇವೆ”

– ಡಾ. ಕೆ. ಸುಧಾಕರ್, ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.