Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Team Udayavani, Nov 26, 2024, 10:25 AM IST

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರ ವಿರುದ್ಧ ಕಳೆದೊಂದು ವಾರ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, 11,468 ಪ್ರಕರಣ ದಾಖಲಿಸಿ, 70.74 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.

ನ.18ರಿಂದ ನ.24ರವರೆಗೆ ನಗರದ 50 ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದು, 60692 ವಾಹನ ಪರಿಶೀಲಿಸಲಾಗಿದೆ. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ 802 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಕೋರ್ಟ್‌ಗೆ ವರದಿ ನೀಡಲಾಗಿದೆ. ಆರೋಪಿತ ವಾಹನ ಚಾಲಕರ ಚಾಲನಾ ಪರವಾನಿಗೆ ಅಮಾನತುಗೊಳಿಸಲು ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

69.46 ಲಕ್ಷ ರೂ. ದಂಡ ಸಂಗ್ರಹ: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರು ಹಾಗೂ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೂರ್ವ ಮತ್ತು ಉತ್ತರ ವಿಭಾಗದ ಸಂಚಾರ ಪೊಲೀಸರು, 10,538 ಪ್ರಕರಣ ದಾಖಲಿಸಿಕೊಂಡು, 69.46 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಉತ್ತರ ವಿಭಾಗದ ಸಂಚಾರ ಪೊಲೀಸರು 7 ದಿನ ನಡೆಸಿದ ಕಾರ್ಯಾಚರಣೆಯಲ್ಲಿ 9,912 ಪ್ರಕರಣ ದಾಖಲಿಸಿಕೊಂಡು 66.46 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಉತ್ತರ ವಿಭಾಗದ ವ್ಯಾಪ್ತಿ ಯಲ್ಲಿ ಉಂಟಾಗುತ್ತಿರುವ ಅಪಘಾತ ತಡೆಗಟ್ಟುವ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಗಳಿಗೆ ಕಡಿವಾಣ ಹಾಕಲು ನ.17ರಿಂದ 23ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ಪೂರ್ವ ವಿಭಾಗದಲ್ಲೂ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿಯಮ ಉಲ್ಲಂಘಿಸಿದ ವಾಹನ ಸವಾರರು ಹಾಗೂ ಚಾಲಕರ ವಿರುದ್ಧ ಒಟ್ಟು 626 ಪ್ರಕರಣ ದಾಖಲಿಸಿದ್ದಾರೆ. ಜತೆಗೆ 3.13 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಹಾಗೆಯೇ ನಗರಾದ್ಯಂತ ಅತಿ ವೇಗದ ಚಾಲನೆ ಮಾಡುವ ಸವಾರರ ವಿರುದ್ಧ 128 ಪ್ರಕರಣ ದಾಖಲಿಸಿ, 1.28 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.