Drink and drive: ಸಂಚಾರ ಪೊಲೀಸರ ಬಲೆಗೆ ಬಿದ್ದ ಒಂಬತ್ತು ಮದ್ಯಾಸುರ ಚಾಲಕರು
Team Udayavani, Jan 27, 2024, 1:49 PM IST
ಬೆಂಗಳೂರು: ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಮದ್ಯಪಾನ ಮಾಡಿ ಬಸ್ ಚಲಾಯಿಸುವ ಚಾಲಕರ ವಿರುದ್ಧ ಗುರುವಾರ ರಾತ್ರಿ ನಡೆಸಿದ್ದ ವಿಶೇಷ ಕಾರ್ಯಾಚರಣೆಯಲ್ಲಿ 9 ಚಾಲಕರು ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನ ವಿವಿಧೆಡೆ ಜ.25ರಂದು ರಾತ್ರಿ 8 ರಿಂದ 11.30 ರವರೆಗೆ ಮದ್ಯಪಾನ ಮಾಡಿ ಖಾಸಗಿ ಬಸ್ ಚಾಲನೆ ಮಾಡುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಒಟ್ಟು 881 ಬಸ್‌ಗಳನ್ನು ತಪಾಸಣೆ ಮಾಡಲಾಗಿತ್ತು. ಈ ಪೈಕಿ 9 ಬಸ್ ಚಾಲಕರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ. ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆರ್‌ಟಿಓ ಕಚೇರಿಗೆ ಕಳುಹಿಸಲಾಗಿದೆ. ಕರ್ಕಶ ಹಾರ್ನ್ ಸಂಬಂಧ 595 ಮಂದಿ ವಿರುದ್ಧ ಪ್ರಕರಣ, ದೋಷಪೂರಿತ ಸೈಲೆನ್ಸರ್ ಬಳಸುತ್ತಿದ್ದ 100 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಮದ್ಯ ಸೇವಿಸಿದ ಬಸ್ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.